
ತಿರುವನಂತಪುರಂ(ಆ.05): ಕೇರಳದಲ್ಲಿ ಬುಧವಾರ ಮತ್ತೆ 22414 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, 108 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸತತ 7 ದಿನ 20000ಕ್ಕಿಂತ ಹೆಚ್ಚು ಕೇಸ್ ದಾಖಲಾಗಿತ್ತು. ಆದರೆ ಸೋಮವಾರ ಒಂದು ದಿನ ಅದು 13000ಕ್ಕಿಳಿದಿತ್ತಾದರೂ, ಮಂಗಳವಾರ ಮತ್ತೆ 20,000ದ ಗಡಿದಾಟಿತ್ತು.
ಬುಧವಾರವೂ ಆ ಬೆಳವಣಿಗೆ ಮುಂದುವರೆದಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 34,71,563ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,76,048ಕ್ಕೆ ತಲುಪಿದೆ. ಈ ನಡುವೆ ರಾಜ್ಯದಲ್ಲಿ ಸೋಂಕು ಏರುಮುಖದಲ್ಲಿದ್ದರೂ, ರಾಜ್ಯ ಸರ್ಕಾರ, ರಾಜ್ಯಾದ್ಯಂತ ಹೇರಲಾಗಿದ್ದ ನಿರ್ಬಂಧಗಳನ್ನು ಮತ್ತಷ್ಟುಸಡಿಲಗೊಳಿಸಿದೆ.
ಬಹುತೇಕ ವಹಿವಾಟು ಮತ್ತು ಪ್ರವಾಸಿ ತಾಣಗಳನ್ನು ವಾರದ 5 ದಿನದ ಬದಲಾಗಿ 6 ದಿನ ತೆರೆಯಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಜೊತೆಗೆ ಅಂಗಡಿ ಮುಂಗಟ್ಟು ತೆರೆಯುವ ಸಮಯವನ್ನು ಬೆಳಗ್ಗೆ 7ರಿಂದ ರಾತ್ರಿ 9ರವರೆಗೆ ವಿಸ್ತರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ