
ಜೈಪುರ: ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಜವಳಿ ಉದ್ಯಮ ಹೊಂದಿರುವ ಲಾಡು ಲಾಲ್ ಪಿತಲಿಯಾ (ladu lal Pitaliya) ಅವರು ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ರಾಜಾಜಿನಗರದಲ್ಲಿ ಲಾಡು ಲಾಲ್ (Ladulal) ಕುಟುಂಬದ ನೆಲೆಸಿದ್ದು, ಈ ಬಾರಿಯ ಚುನಾವಣೆಯಲ್ಲಿ ರಾಜಸ್ಥಾನದ ಸಹರಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕೆ ಇಳಿದಿದ್ದರು. ಭಾನುವಾರ ಪ್ರಕಟವಾದ ಫಲಿತಾಂಶದಲ್ಲಿ ಲಾಡು ಲಾಲ್ 1.17 ಲಕ್ಷ ಮತ ಪಡೆದು 62 ಸಾವಿರ ಮತಗಳಿಂದ ಗೆದ್ದಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ರಾಜೇಂದ್ರ ತ್ರಿವೇದಿ 54684 ಮತಗಳನ್ನು ಪಡೆದು ಸೋಲನ್ನಪ್ಪಿದ್ದಾರೆ.
2021ರಲ್ಲಿ ಇದೇ ಕ್ಷೇತ್ರಕ್ಕೆ ಉಪಚುನಾವಣೆ ನಡೆದಾಗ ಬಿಜೆಪಿಯಿಂದ ಹೊರಬಂದಿದ್ದ ಲಾಡು ಲಾಲ್ ಪಕ್ಷೇತರರಾಗಿ (indipendent candidate) ಸ್ಪರ್ಧಿಸಿದ್ದರು. ಆದರೆ ಬಳಿಕ ನಾಮಪತ್ರ ಹಿಂಪಡೆದುಕೊಂಡಿದ್ದರು. ಈ ಬಾರಿ ಲಾಡು ಲಾಲ್ ಮತ್ತೆ ಬಿಜೆಪಿಯಿಂದ ಕಣಕ್ಕೆ ಇಳಿದು ಗೆಲುವು ಸಾಧಿಸಿದ್ದಾರೆ. ಬೆಂಗಳೂರಲ್ಲಿನ ಅವರ ಉದ್ಯಮವನ್ನು ಸದ್ಯಮಕ್ಕಳು ಮುನ್ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ