
ದೆಹಲಿ (ಜು.6) ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಗೃಹ ಸಚಿವ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದ ಕುರಿತು ಶನಿವಾರ ಬೆಳಗ್ಗೆಯಿಂದಲೂ ವಾಟ್ಸಾಪ್ ಮೂಲಕ 'ಅನಾರೋಗ್ಯದಿಂದ ನಿಧನರಾಗಿದ್ದಾರೆ' ಎಂಬ ಸುಳ್ಳು ಸುದ್ದಿ ಹರಡುತ್ತಿದೆ. ಸೋಷಿಲ್ ಮೀಡಿಯಾಗಳಲ್ಲಿ ಕೆಲವರು ಸುಳ್ಳು ಸುದ್ದಿಗಳನ್ನೇ ನಂಬಿ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ವಯೋಸಹಜ ಅನಾರೋಗ್ಯ ಹಿನ್ನೆಲೆ ಅಡ್ವಾಣಿ(LK advani) ಅವರನ್ನು ತಪಾಸಣೆಗಾಗಿ ಎರಡು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎಲ್‌ಕೆ ಅಡ್ವಾಣಿಯವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಇದೀಗ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಅಪ್ಡೇಟ್ ಬಂದಿದೆ. ಆಸ್ಪತ್ರೆಯಿಂದ ಸಂಪೂರ್ಣ ಗುಣಮುಖರಾಗಿ ಮನೆಗೆ ತೆರಳಿದ್ದಾರೆಂದು ವರದಿಯಾಗಿದೆ.
ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಆರೋಗ್ಯದಲ್ಲಿ ದಿಢೀರ್ ಏರುಪೇರು: ಆಸ್ಪತ್ರೆಗೆ ದಾಖಲು
ಅಡ್ವಾಣಿ ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದೆ, 'ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ, ಹಿರಿಯ ಬಿಜೆಪಿ ನಾಯಕ ಎಲ್‌ಕೆ ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದೆ ಮತ್ತು ಆರೋಗ್ಯವಾಗಿದೆ ಮತ್ತು ಅವರು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಎಂದು ವರದಿ ಮಾಡಿದೆ.
ಕಳೆದೆರಡು ದಿನಗಳಿಂದ ಅಡ್ವಾಣಿಯವರ ನಿಧನದ ಸುದ್ದಿ ಸೋಷಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದವು. ಇದರಿಂದ ಕೆಲವು ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದ್ದರು. ಆದರೆ ಅಡ್ವಾಣಿಯವರು ಗುಣಮುಖರಾಗಿದ್ದಾರೆ ಎಂಬ ಸುದ್ದಿ ಸ್ಪಷ್ಟಪಡಿಸುವ ಮೂಲಕ ಎಲ್ಲ ಸುಳ್ಳು ಸುದ್ದಿಗಳಿಗೆ ತೆರೆಬಿದ್ದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ