
ನವದೆಹಲಿ (ಜುಲೈ 31, 2023): ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಹಲವು ವಿಪಕ್ಷಗಳು I.N.D.I.A ಎಂಬ ಹೆಸರಿನ ಒಕ್ಕೂಟವನ್ನು ರಚಿಸಿದೆ. ಆದರೆ, ಈ ಒಕ್ಕೂಟದ ಭಾಗವಾಗಿರುವ ಲಾಲೂ ಪ್ರಸಾದ್ ಯಾದವ್ ಅವರ ಕುಟುಂಬಕ್ಕೆ ಸಂಕಷ್ಟ ಕಾದಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬದ ₹ 6 ಕೋಟಿ ಮೌಲ್ಯದ ಆಸ್ತಿಯನ್ನು ಕೇಂದ್ರ ತನಿಖಾ ಸಂಸ್ಥೆ ಸೋಮವಾರ ವಶಪಡಿಸಿಕೊಂಡಿದೆ.
ಮಾಜಿ ಮುಖ್ಯಮಂತ್ರಿಗಳಾದ ಲಾಲೂ ಪ್ರಸಾದ್ ಯಾದವ್ ಮತ್ತು ರಾಬ್ಡಿ ದೇವಿ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೇರಿದಂತೆ ಹಲವರ ವಿರುದ್ಧ ಉದ್ಯೋಗಕ್ಕಾಗಿ ಭೂಮಿ ಹಗರಣ ಎಂದು ಕರೆಯಲ್ಪಡುವ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಯುತ್ತಿದೆ. ಹಣಕಾಸು ಅಪರಾಧಗಳ ತನಿಖೆ ನಡೆಸುವ ಕೇಂದ್ರ ಸಂಸ್ಥೆಯಾದ ಜಾರಿ ನಿರ್ದೇಶನಾಲಯ ಅಥವಾ ಇ.ಡಿ 6 ಕೋಟಿ ರೂ. ಆಸ್ತಿಯನ್ನು ವಶಪಡಿಸಿಕೊಂಡಿದೆ.
ಇದನ್ನು ಓದಿ: ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲೂ 600 ಕೋಟಿ ರೂ. ಅಕ್ರಮ ಪತ್ತೆ..!
ಲಾಲೂ ಪ್ರಸಾದ್ ಯಾದವ್ 2004 ರಿಂದ 2009 ರವರೆಗೆ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಲಾಲೂ ಪ್ರಸಾದ್ ಮತ್ತು ಅವರ ಕುಟುಂಬ ಸದಸ್ಯರು ಹಲವರಿಗೆ ಉದ್ಯೋಗ ಕೊಡಿಸುವ ಆಮಿಷ ತೋರಿಸಿ ಭೂಮಿಯನ್ನು ಅಗ್ಗವಾಗಿ ಖರೀದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೂ ಮುನ್ನ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಜುಲೈ 3 ರಂದು ಲಾಲೂ ಪ್ರಸಾದ್, ಅವರ ಪತ್ನಿ ಮತ್ತು ಪುತ್ರ ತೇಜಸ್ವಿ ಯಾದವ್ ವಿರುದ್ಧ ಆರೋಪಪಟ್ಟಿ ಹಗರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ಸಲ್ಲಿಸಿತ್ತು.
ಲಾಲೂ ಪ್ರಸಾದ್ ಯಾದವ್ ಕುಟುಂಬದ ಮೂವರು ಸದಸ್ಯರಲ್ಲದೆ, ಫೆಡರಲ್ ಏಜೆನ್ಸಿಯು ಚಾರ್ಜ್ ಶೀಟ್‌ನಲ್ಲಿ 14 ವ್ಯಕ್ತಿಗಳು ಮತ್ತು ಘಟಕಗಳನ್ನು ಹೆಸರಿಸಿದೆ. ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್‌ಗಳ ಜೊತೆಗೆ ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಇತರರಿಗೆ ಸಂಬಂಧಿಸಿದ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಇದನ್ನೂ ಓದಿ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಮನೆ ಮೇಲೆ ಸಿಬಿಐ ರೇಡ್: ರಾಬ್ಢಿ ದೇವಿ ವಿಚಾರಣೆ
ಲಾಲೂ ಪ್ರಸಾದ್ ನಿವಾಸ ರೇಡ್ ಮಾಡಿದ್ದ ಸಿಬಿಐ
ಈ ವರ್ಷದ ಮಾರ್ಚ್ ತಿಂಗಳಲ್ಲಿ ಲಾಲೂ ಪ್ರಸಾದ್ ಯಾದವ್ ಮನೆ ಮೇಲೆ ಸಿಬಿಐ ರೇಡ್ ಮಾಡಿತ್ತು. ಉದ್ಯೋಗಕ್ಕಾಗಿ ಭೂಮಿ ಹಗರಣ ಸಂಬಂಧ ಸಿಬಿಐ ರೇಡ್ ಮಾಡಿದ್ದು, ಈ ವೇಳೆ 200 ಕ್ಕೂ ಹೆಚ್ಚು ದಾಖಲೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ. ಬಿಹಾರ ಮಾಜಿ ಸಿಎಂ ಹಾಗೂ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ಡಿ ದೇವಿಯನ್ನು ಸಿಬಿಐ ಅಧಿಕಾರಗಳು ಪ್ರಶ್ನೆ ಮಾಡುತ್ತಿದ್ದು, ಈ ರೇಡ್ ವಿರೋಧಿಸಿ ಲಾಲೂ ಪ್ರಸಾದ್ ಯಾದವ್ ಅವರ ಮನೆಯ ಮುಂದೆ ಆರ್‌ಜೆಡಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಬಿಜೆಪಿ ರಾಜಕೀಯ ಉದ್ದೇಶಗಳಿಗಾಗಿ ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ 8 ಪ್ರತಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಒಂದು ದಿನದ ನಂತರ ಈ ರೇಡ್ ನಡೆದಿತ್ತು. ಈ ಪತ್ರದ ಸಹಿ ಮಾಡಿದವರಲ್ಲಿ ರಾಬ್ಡಿ ದೇವಿ ಅವರ ಪುತ್ರ ಹಾಗೂ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಕೂಡ ಸೇರಿದ್ದಾರೆ. ಕೇಂದ್ರ ಏಜೆನ್ಸಿಗಳಿಂದ ಗುರಿಯಾಗಿರುವ ವಿರೋಧ ಪಕ್ಷದ ನಾಯಕರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸ್ಥಾಪಕ ಲಾಲೂ ಪ್ರಸಾದ್ ಯಾದವ್ ಅವರನ್ನು ಸಹ ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್‌ಗೆ ಕಿಡ್ನಿದಾನ: ಅದೊಂದು ಮಾಂಸದ ತುಣುಕಷ್ಟೇ ಎಂದ ಪುತ್ರಿ ರೋಹಿಣಿ
ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಲಾಲೂ ಪ್ರಸಾದ್ ಯಾದವ್, ರಾಬ್ಢಿ ದೇವಿ ಮತ್ತು ಅವರ ಪುತ್ರಿಯರಾದ ಮೀಸಾ ಮತ್ತು ಹೇಮಾ ಸೇರಿ ಇತರರನ್ನು ಸಿಬಿಐ ಹೆಸರಿಸಿದೆ. 2004 ರಿಂದ 2009 ರವರೆಗೆ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ನೀಡಿದ ಉದ್ಯೋಗಗಳಿಗೆ ಪ್ರತಿಯಾಗಿ ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ತುಂಬಾ ಕಡಿಮೆ ದರದಲ್ಲಿ ಭೂಮಿಯನ್ನು ಖರೀದಿಸಿದ್ದಾರೆ ಎಂದು ಮೇ 2022 ರಲ್ಲಿ ದಾಖಲಾದ ಎಫ್‌ಐಆರ್ ಆರೋಪಿಸುತ್ತದೆ.
ಇದನ್ನೂ ಓದಿ: ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್‌ಗೆ ಮಗಳಿಂದ ಕಿಡ್ನಿ ದಾನ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ