ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಸಿಂಧಿಯಾಗೆ ಭೂ ಸಂಕಷ್ಟ!

Published : Mar 14, 2020, 03:45 PM IST
ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಸಿಂಧಿಯಾಗೆ ಭೂ ಸಂಕಷ್ಟ!

ಸಾರಾಂಶ

ಬಿಜೆಪಿ ಸೇರ್ಪಡೆ ಬೆನ್ನಲ್ಲೇ ಸಿಂಧಿಯಾಗೆ ಭೂ ಸಂಕಷ್ಟ| ಭೂ ಹಗರಣ ಮರುತನಿಖೆಗೆ ಮುಂದಾದ ಕಮಲ್‌ ಸರ್ಕಾರ| ಇದು ರಾಜಕೀಯ ದ್ವೇಷ: ಸಿಂಧಿಯಾ ಆಪ್ತರಿಂದ ತಿರುಗೇಟು

ನವದೆಹಲಿ[ಮಾ.14]: ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಭೂ ಕಂಟಕವೊಂದು ಎದುರಾಗಿದೆ. 2014ರಲ್ಲಿ ದಾಖಲಾಗಿ, 2018ರಲ್ಲಿ ಕೈಬಿಡಲಾಗಿದ್ದ ಭೂ ದಾಖಲೆಗಳ ಫೋರ್ಜರಿ ಪ್ರಕರಣದ ತನಿಖೆಯನ್ನು ಮಧ್ಯಪ್ರದೇಶ ಸರ್ಕಾರ ಮರು ಆರಂಭಿಸಲು ಮುಂದಾಗಿದೆ. ಆದರೆ ಇದನ್ನು ರಾಜಕೀಯ ದ್ವೇಷದ ಕ್ರಮ ಎಂದು ಸಿಂಧಿಯಾ ಆಪ್ತರು ಟೀಕಿಸಿದ್ದು, ಇದಕ್ಕೆ ಕಾನೂನು ರೀತ್ಯ ತಕ್ಕ ಉತ್ತರ ನೀಡುವುದಾಗಿ ಗುಡುಗಿದ್ದಾರೆ.

2009ರಲ್ಲಿ ಮೂಲದಾಖಲೆಯಲ್ಲಿದ್ದ ಅಂಶಗಳನ್ನು ತಿರುಚಿ ಜಾಗವೊಂದನ್ನು ಸಿಂಧಿಯಾ ಹಾಗೂ ಅವರ ಕುಟುಂಬ ಮಾರಾಟ ಮಾಡಿದೆ ಎಂದು 2014ರಲ್ಲಿ ಆರ್ಥಿಕ ಅಪರಾಧಗಳ ವಿಭಾಗಕ್ಕೆ ಸುರೇಂದ್ರ ಶ್ರೀವಾಸ್ತವ ಎಂಬುವರು ದೂರು ನೀಡಿದ್ದರು. ಸಾಕ್ಷ್ಯಾಧಾರಗಳ ಕೊರತೆಯ ಕಾರಣ ನೀಡಿ 2018ರಲ್ಲಿ ಈ ಪ್ರಕರಣವನ್ನು ಕೈಬಿಡಲಾಗಿತ್ತು. ಈ ನಡುವೆ ಬುಧವಾರ ಸಿಂಧಿಯಾ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮರುದಿನವಾದ ಗುರುವಾರ ಸುರೇಂದ್ರ ಅವರು ತಮ್ಮ ಬಳಿ ಹೊಸ ಸಾಕ್ಷ್ಯಗಳಿವೆ ಎಂದು ಅರ್ಜಿ ಸಲ್ಲಿಸಿದ್ದಾರೆ. ಅದರ ಪರಿಶೀಲನೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಂಧಿಯಾ ಬಿಜೆಪಿ ಸೇರ್ಪಡೆ ಮರುದಿನವೇ ಈ ಪ್ರಕರಣದ ಮರುತನಿಖೆಗೆ ಸರ್ಕಾರ ಒಲವು ತೋರಿರುವುದು ನಾನಾ ರೀತಿಯ ಚರ್ಚೆಗಳಿಗೆ ಕಾರಣವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?
India Latest News Live: ನಾವು ದೇಶಕ್ಕಾಗಿ, ನೀವು ಚುನಾವಣೆಗಾಗಿ: ಬಿಜೆಪಿ. ಮೋದಿ ವಿರುದ್ದ ಪ್ರಿಯಾಂಕಾ ಗಾಂಧಿ ವಾಗ್ದಾಳಿ