ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಲಷ್ಕರ್‌ ಉಗ್ರಗಾಮಿ ಬಂಧನ!

By Suvarna NewsFirst Published Jan 5, 2020, 8:45 AM IST
Highlights

ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಲಷ್ಕರ್‌ ಉಗ್ರಗಾಮಿ ಬಂಧನ| ಕಾಶ್ಮೀರದಲ್ಲಿ ಪೊಲೀಸರ ಕಾರ್ಯಾಚರಣೆ

ನವದೆಹಲಿ[ಜ.05]: ಕಾಶ್ಮೀರದಲ್ಲಿ ಹಲವು ಸರಣಿ ಭಯೋತ್ಪಾದಕ ದಾಳಿಗಳನ್ನು ನಡೆಸಿದ ಸಂಬಂಧ ಭದ್ರತಾ ಪಡೆಗಳಿಗೆ ಬೇಕಾಗಿದ್ದ ಲಷ್ಕರ್‌ ಎ ತೊಯ್ಬಾ ಉಗ್ರಗಾಮಿಯೊಬ್ಬ ಕೊನೆಗೂ ಬಲೆಗೆ ಬಿದ್ದಿದ್ದಾನೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಉಗ್ರನನ್ನು ಪೊಲೀಸರು ಆಸ್ಪತ್ರೆಯಲ್ಲೇ ಬಂಧಿಸಿದ್ದಾರೆ. ಈ ವೇಳೆ ಆತನ ಸಹಚರರು ಪರಾರಿಯಾಗಿದ್ದಾರೆ. ಆತನಿಂದ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉತ್ತರ ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ನಿಸಾರ್‌ ಅಹಮದ್‌ ದಾರ್‌ ಎಂಬಾತ 2014ರಿಂದ ಉಗ್ರಗಾಮಿ ಸಂಘಟನೆಯಲ್ಲಿ ಸಕ್ರಿಯನಾಗಿದ್ದ. ಭದ್ರತಾ ಪಡೆಗಳು ಹಾಗೂ ನಾಗರಿಕರ ಮೇಲೆ ದಾಳಿ ದಾಳಿ ನಡೆಸಿದ ಪ್ರಕರಣದಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದ. ಈತನ ವಿರುದ್ಧ 10 ಪ್ರಕರಣಗಳು ದಾಖಲಾಗಿದ್ದವು.

ಚಿಕಿತ್ಸೆಗಂದು ಈಗ ಶ್ರೀನಗರದ ಶ್ರೀ ಮಹಾರಾಜ ಹರಿ ಸಿಂಗ್‌ ಆಸ್ಪತ್ರೆಗೆ ಬಂದಿದ್ದ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ದೊರೆಯಿತು. ಕೂಡಲೇ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಈ ವೇಳೆ ಆತನ ಸಹಚರರು ಪರಾರಿಯಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

click me!