
ಮುಂಬೈ(ಮಾ.14): ಮಹಾರಾಷ್ಟ್ರದಲ್ಲಿ ಶನಿವಾರ ಮತ್ತೆ 15,602 ಮಂದಿಯಲ್ಲಿ ಹೊಸದಾಗಿ ಕೊರೋನಾ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 22.97 ಲಕ್ಷ ದಾಟಿದೆ. ಮುಂಬೈನಲ್ಲೂ ನಿನ್ನೆ 1709 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಶನಿವಾರ ರೆಸ್ಟೋರೆಂಟ್ ಮಾಲೀಕರ ಜೊತೆ ಪರಿಶೀಲನೆ ಸಭೆ ನಡೆಸಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ‘ಪರಿಸ್ಥಿತಿ ಹೀಗೆ ಮುಂದುವರಿದರೆ ಮತ್ತೊಂದು ಸುತ್ತಿನ ಲಾಕ್ಡೌನ್ ಜಾರಿಗೊಳಿಸಬೇಕಾಗುತ್ತದೆ. ರಾಜ್ಯಾದ್ಯಂತ ಮತ್ತೆ ಲಾಕ್ಡೌನ್ ಹೇರುವ ಪರಿಸ್ಥಿತಿ ತಂದಿಡಬೇಡಿ. ಹೋಟೆಲ್ಗಳಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್‌ಗೆ ಒತ್ತು ನೀಡಿ. ಇದು ನನ್ನ ಕಡೆಯ ಎಚ್ಚರಿಕೆ’ ಎಂದು ಎಚ್ಚರಿಸಿದರು.
ಭೋಪಾಲ್, ಇಂದೋರ್ನಲ್ಲಿ ಇಂದಿನಿಂದಲೇ ರಾತ್ರಿ ಕರ್ಫ್ಯೂ
ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ರಾತ್ರಿ ಕಫä್ರ್ಯ ಜಾರಿ ಮಾಡಿದ ಬೆನ್ನಲ್ಲೇ, ಮಧ್ಯಪ್ರದೇಶದ ಭೋಪಾಲ್ ಮತ್ತು ಇಂದೋರ್ ನಗರಗಳಲ್ಲೂ ಸಹ ಇದೇ ಕ್ರಮ ಜಾರಿಗೊಳಿಸುವ ಸಾಧ್ಯತೆಯಿದೆ.
ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ ಕುರಿತಾಗಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಚೌಹಾಣ್ ಅವರು, ‘ರಾಜ್ಯದಲ್ಲಿ ಕೊರೋನಾ ವೈರಸ್ಗಳ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಭಾನುವಾರ ಅಥವಾ ಸೋಮವಾರದಿಂದ ಈ ಎರಡೂ ನಗರಗಳಲ್ಲಿ ರಾತ್ರಿ ಕರ್ಫ್ಯೂ ಮತ್ತೆ ಜಾರಿಯಾಗುವ ಸಂಭವವಿದೆ’ ಎಂದು ತಿಳಿಸಿದರು.
ದೇಶದಲ್ಲೇ ಅತಿಹೆಚ್ಚು ಸೋಂಕು ದೃಢಪಡುತ್ತಿರುವ ಮಹಾರಾಷ್ಟ್ರ ಸೇರಿದಂತೆ ಇನ್ನಿತರ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ವಿಮಾನ, ರೈಲು ಸೇರಿ ಇನ್ನಿತರ ವಾಹನಗಳ ಮೂಲಕ ಜನ ಪ್ರವೇಶಿಸುತ್ತಿದ್ದಾರೆ. ಹೀಗಾಗಿ ನೆರೆ ರಾಜ್ಯಗಳಿಂದ ಬರುವ ಎಲ್ಲರಿಗೂ ಥರ್ಮಲ್ ಪರೀಕ್ಷೆ ಮಾಡಿಸಲೇಬೇಕು. ಜೊತೆಗೆ ಜನರು ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಕುರಿತಾಗಿ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲೇಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ