
ನವದೆಹಲಿ (ಫೆ.23) ಇರಾನ್ ಮೇಲೆ ಅಮೆರಿಕ ದಾಳಿ ಸಾಧ್ಯತೆ ದಟ್ಟವಾಗಿದೆ. ಶನಿವಾರ (ಫೆ.21) ಇರಾನ್ ಮೇಲೆ ಅಮೆರಿಕ ದಾಳಿ ಮಾಡಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಶನಿವಾರ ನಿರೀಕ್ಷಿತ ದಾಳಿ ನಡೆದಿಲ್ಲ. ಇದೀಗ ಎರಡು ದಿನಗಳ ಬಳಿಕ ಅಮೆರಿಕ ದಾಳಿಗೆ ಸಜ್ಜಾಗಿದೆ. ಅಮೆರಿಕ ದಾಳಿ ಮಾಡುವುದು ಬಹುತೇಕ ಖಚಿತಗೊಂಡಿದೆ. ಇದರ ಬೆನ್ನಲ್ಲೇ ಭಾರತೀಯ ವಿದೇಶಾಂಗ ಇಲಾಖೆ ಇರಾನ್‌ಲ್ಲಿ ನೆಲೆಸಿರುವ ಭಾರತೀಯರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಇರಾನ್‌ನಲ್ಲಿರುವ ಭಾರತೀಯರು ಇರಾನ್ ತೊರೆಯಲು ಸೂಚಿಸಿದೆ. ಆದಷ್ಟು ಬೇಗ ಲಭ್ಯವರುವ ವಿಮಾನಗಳ ಮೂಲಕ ಭಾರತಕ್ಕೆ ಮರಳಲು ಸೂಚಿಸಿದೆ.
ಇರಾನ್‌ನಲ್ಲಿನ ಭದ್ರತಾ ಪರಿಸ್ಥಿತಿ ಹದಗೆಟ್ಟಿದೆ. ಸದ್ಯ ಭಾರತೀಯ ನಾಗರೀಕರು ಇರಾನ್ ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಇದೇ ವೇಳೆ ಇರಾನ್‌ನಲ್ಲಿನ ಭಾರತೀಯ ನಾಗರೀಕರು ಅನಗತ್ಯ ಪ್ರಯಾಣ ತಪ್ಪಿಸಲು ಸೂಚಿಸಿದ್ದಾರೆ. ಇರಾನ್‌ನಲ್ಲಿ ಗಲಭೆ, ಪ್ರತಿಭಟನೆಗಳಿಂದ ದೂರವಿರಲು ಸೂಚಿಸಿದ್ದಾರೆ.
ಇರಾನ್‌ನಲ್ಲಿ ನೆಲೆಸಿರುವ ಭಾರತೀಯ ನಾಗರೀಕರು ರಾಯಭಾರ ಕಚೇರಿ ಜೊತೆ ಸಂಪರ್ಕದಲ್ಲಿರಲು ಸೂಚಿಸಿದೆ. ರಾಯಭಾರ ಕಚೇರಿ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡದ ಭಾರತೀಯರು ತಕ್ಷಣವೇ ನೋಂದಣಿ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ಇರಾನ್‌ನಲ್ಲಿ ಹೆಚ್ಚುತ್ತಿರುವ ಅರಾಜಕತೆ, ಯುದ್ಧ ಭೀತಿಗಳಿಂದ ಭಾರತೀಯ ಸುರಕ್ಷತೆಗಾಗಿ ಈ ಸೂಚನೆ ನೀಡಲಾಗಿದೆ ಎಂದು ವಿದೇಶಾಂಗ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ತುರ್ತು ಪರಿಸ್ಥಿತಿಗಳು ಎದುರಾಗುತ್ತಿರುವ ಕಾರಣ ಭಾರತೀಯರು ತಮ್ಮ ಪ್ರಯಾಣದ ದಾಖಲೆ ಪತ್ರಗಳಾದ ಇಮಿಗ್ರೇಶನ್ ದಾಖಲೆ, ಪಾಸ್‌ಪೋರ್ಟ್ , ಗುರುತಿನ ಚೀಟಿ ಸೇರಿದಂತೆ ಇತರ ದಾಖಲೆ ಪತ್ರಗಳನ್ನು ರೆಡಿಯಾಗಿ ಇಟ್ಟುಕೊಳ್ಳವಂತೆ ಪ್ರಕಟಣೆಯಲ್ಲಿ ಸೂಚಿಸಿದೆ.ಯಾವುದೇ ಸಂದರ್ಭದಲ್ಲಿ ನೆರವು ಅಥವಾ ಮಾಹಿತಿ ಬೇಕಿದ್ದಲ್ಲಿ ಇರಾನ್ ಭಾರತೀಯರ ರಾಯಭಾರ ಕಚೇರಿ ಸಂಪರ್ಕಿಸುವಂತೆ ಸೂಚಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ