ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವಂತೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.
ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡುವಂತೆ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್‌ನ ಸಾಂವಿಧಾನಿಕ ಪೀಠ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪಂಚಸದಸ್ಯ ಸಾಂವಿಧಾನಿಕ ಪೀಠ ಸತತ ಹತ್ತು ದಿನಗಳ ಕಾಲ ವಿಚಾರಣೆ ನಡೆಸಿ ಕೇಂದ್ರ ಸರ್ಕಾರ, ಅರ್ಜಿದಾರರು ಹಾಗೂ ಸಂಬಂಧಪಟ್ಟಎಲ್ಲ ಪಕ್ಷಗಾರರ ವಾದಗಳನ್ನು ಆಲಿಸಿದೆ. ಬಳಿಕ ಹಿರಿಯ ವಕೀಲರಾದ ಎ.ಎಂ.ಸಿಂಘ್ವಿ, ರಾಜು ರಾಮಚಂದ್ರನ್, ಕೆ.ವಿ.ವಿಶ್ವನಾಥನ್, ಆನಂದ್ ಗ್ರೋವರ್ (Anand Grover), ಹಾಗೂ ಸೌರಭ್ ಕೃಪಾಲ್ (Sowrabh Kripal) ಅವರ ವಾದಗಳನ್ನೂ ಆಲಿಸಿದೆ.
ಬುಧವಾರದ ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ (Union Govt) ಪರ ವಕೀಲರು, ಈ ವಿಷಯದಲ್ಲಿ ಸುಪ್ರೀಂಕೋರ್ಟ್ ‘ಸಾಂವಿಧಾನಿಕ ಘೋಷಣೆ’ಯನ್ನು ಪ್ರಕಟಿಸುವುದು ಸರಿಯಾದ ಕ್ರಮವಾಗುವುದಿಲ್ಲ. ಏಕೆಂದರೆ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಿದರೆ ಅದರಿಂದ ಮುಂದೆ ಆಗುವ ಪರಿಣಾಮಗಳನ್ನು ಕೋರ್ಟ್ ಈಗಲೇ ಮನಗಾಣುವುದು ಅಸಾಧ್ಯ ಎಂದು ಹೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಸ್.ಆರ್.ಭಟ್ (N.R. Bhat), 'ಸಾಂವಿಧಾನಿಕ ಘೋಷಣೆಯು ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಬೇಕೆಂದೇ ಇರುತ್ತದೆ ಎಂದು ಎಲ್ಲರೂ ಊಹಿಸಿದ್ದಾರೆ. ಆದರೆ ಸಾಂವಿಧಾನಿಕ ಪೀಠವಾಗಿ ನಾವು ನಮಗಿರುವ ಮಿತಿಯನ್ನು ತಿಳಿದಿದ್ದೇವೆ' ಎಂದು ಹೇಳಿದ್ದರು.
ಅಂತಿಮವಾಗಿ ಗುರುವಾರ ಈ ಕುರಿತ ಅರ್ಜಿಗಳಿಗೆ ಸಂಬಂಧಿಸಿದ ತೀರ್ಪನ್ನು ನ್ಯಾಯಪೀಠ ಕಾಯ್ದಿರಿಸಿತು.
ಸಲಿಂಗಕಾಮ ಒಂದು ‘ಕಾಯಿಲೆ’: ಆರೆಸ್ಸೆಸ್ ಸಹವರ್ತಿ ಸಂಘಟನೆ; ದೇಶದ ವೈದ್ಯರನ್ನು ಸಂದರ್ಶಿಸಿ ಅಧ್ಯಯನ
ಸಲಿಂಗಿಗಳ ಕಳವಳ ನಿವಾರಣೆಗಾಗಿ ಸಂಪುಟ ಕಾರ್ಯದರ್ಶಿ ಮಟ್ಟದಲ್ಲಿ ಸಮಿತಿ