ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಬೆಳಗಾವಿಯಿಂದ ಶೆಟ್ಟರ್, ಸಂಸದ ಅನಂತ್ ಕುಮಾರ್ ಹೆಗಡೆಗೆ ಕೊಕ್!

By Suvarna News  |  First Published Mar 24, 2024, 9:27 PM IST

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಘೋಷಣೆಯಾಗಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಭಾರಿ ಚರ್ಚೆಗಳ ಬಳಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೆಳಗಾವಿಯಿಂದ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ನೀಡಲಾಗಿದೆ. ಆದರೆ ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಕೊಕ್ ನೀಡಲಾಗಿದೆ.
 


ನವದೆಹಲಿ(ಮಾ.24) ಲೋಕಸಭಾ ಚುನಾವಣಾ ಕಾವು ಹೆಚ್ಚಾಗಿದೆ. ಇದೀಗ ಬಿಜೆಪಿ ತನ್ನ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಪ್ರಧಾನಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ 5ನೇ ಪಟ್ಟಿ ಘೋಷಿಸಿದೆ. ಬೆಳಗಾವಿಯಿಂದ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಜಗದೀಶ್ ಶೆಟ್ಟರ್ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರದಿಂದ ಡಾ. ಸುಧಾಕರ್‌ಗೆ ಟಿಕೆಟ್ ನೀಡಲಾಗಿದೆ. ಇನ್ನು ರಾಯಚೂರಿನಿಂದ ರಾಜಾ ಅಮರೇ್ ನಾಯಕ್ ಟಿಕೆಟ್ ಪಡೆದುಕೊಂಡಿದ್ದಾರೆ. ಭಾರಿ ಕುತೂಹಲ ಕೆರಳಿಸಿದ ಉತ್ತರ ಕನ್ನಡ ಕ್ಷೇತ್ರದಿಂದ ವಿಶ್ವಶ್ವರ ಹೆಗೆಡೆ ಕಾಗೇರಿಗೆ ಟಿಕೆಟ್ ಘೋಷಿಸಲಾಗಿದೆ. ಹಾಲಿ ಸಂಸದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಿಸಲಾಗಿದೆ.

ಕರ್ನಾಟಕ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿರುವ ಬಿಜೆಪಿ ಹೈಕಮಾಂಡ್ ಚಿತ್ರದುರ್ಗ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿಲ್ಲ.ಪ್ರಮುಖವಾಗಿ ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ಸ್ಥಳೀಯ ಬಿಜೆಪಿ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಇಷ್ಟೇ ಅಲ್ಲ ಹಲವು ನಾಯಕರು ಬಿಜೆಪಿ ರಾಜ್ಯನಾಯಕರು ಹಾಗೂ ಹೈಕಮಾಂಡ್ ಗಮನಕ್ಕೆ ತಂದಿದ್ದರು. ಆದರೆ ಶೆಟ್ಟರ್ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ಪಡೆದುಕೊಂಡಿದ್ದಾರೆ.

Tap to resize

Latest Videos

ಕಾಂಗ್ರೆಸ್‌ಗೆ ರಾಜೀನಾಮೆ ಶಾಕ್, ಪಕ್ಷ ತೊರೆದು ಬಿಜೆಪಿ ಸೇರಿದ ಮಾಜಿ ಸಂಸದ ನವೀನ್ ಜಿಂದಾಲ್!

ಉತ್ತರ ಕನ್ನಡ ಕ್ಷೇತ್ರ ಕೂಡ ಭಾರಿ ಕುತೂಹಲ ಕೆರಳಿಸಿತ್ತು. ಹಾಲಿ ಸಂಸದರಾಗಿರುವ ಅನಂತ್ ಕುಮಾರ್ ಹೆಗಡೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಅಲರ್ಟ್ ಆಗಿದ್ದರು. ಕ್ಷೇತ್ರದಲ್ಲಿ ಓಡಾಟ, ಹಿಂದುತ್ವದ ಪರ ಭಾಷಣಗಳನ್ನು ಮಾಡಿ ಸಂಚಲನ ಸೃಷ್ಟಿಸಿದ್ದರು. ಇದರ ನಡುವೆ ಸಂವಿಧಾನ ಬದಲಿಸುವ ಹೇಳಿಕೆ ನೀಡಿ ಪಕ್ಷದಿಂದ ನೋಟಿಸ್ ಕೂಡ ಪಡೆದುಕೊಂಡಿದ್ದರು. ಮತ್ತೆ ಸ್ಪರ್ಧೆಗೆ ಪ್ರಯತ್ನಿಸಿದ ಅನಂತ್ ಕುಮಾರ್ ಹೆಗೆಡೆಗೆ ಟಿಕೆಟ್ ನಿರಾಕರಿಸಲಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಉತ್ತರ ಕನ್ನಡ ಟಿಕೆಟ್ ನೀಡಲಾಗಿದೆ.

ಬಿಜೆಪಿ ಪಕ್ಷ ಸೇರಿದ ಬೆನ್ನಲ್ಲೇ ನವೀನ್ ಜಿಂದಾಲ್ ಕುರುಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ.  ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಟ್ ನಟಿ ಕಂಗನಾ ರಣಾವತ್‌ಗೆ ಟಿಕೆಟ್ ನೀಡಲಾಗಿದೆ.  ಇನ್ನು ಕೇರಳದ ವಯಾನಾಡು ಕ್ಷೇತ್ರದಿಂದ ಕೆ ಸುರೇಂದ್ರನ್‌ಗೆ ಟಿಕೆಟ್ ನೀಡಲಾಗಿದೆ. ಇನ್ನು ಫಿಲಿಬಿಟ್ ಕ್ಷೇತ್ರ ಕೂಡ ಭಾರಿ ಕುತೂಹಲ ಕೆರಳಿಸಿತ್ತು.ಈ ಕ್ಷೇತ್ರದಿಂದ ವರುಣ್ ಗಾಂಧಿಗೆ ಟಿಕೆಟ್ ನಿರಾಕರಿಸಲಾಗಿದೆ. ವರುಣ್ ಗಾಂಧಿ ಬದಲು ಜತಿನ್ ಪ್ರಸಾದ್‌ಗೆ ಟಿಕೆಟ್ ನೀಡಲಾಗಿದೆ.

ಇಡಿ ಕಸ್ಟಡಿಯಿಂದ ಸಿಎಂ ಕೇಜ್ರಿವಾಲ್ ಹೊರಡಿಸಿದ ಆರ್ಡರ್ ನಕಲಿ, ದಾಖಲೆ ಬಹಿರಂಗಪಡಿಸಿದ ಬಿಜೆಪಿ!

ವರುಣ್ ಗಾಂಧಿ ತಾಯಿ ಮೇನಕಾ ಗಾಂಧಿ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸುಲ್ತಾನಪುರ ಕ್ಷೇತ್ರದಿಂದ ಮೇನಕಾ ಗಾಂಧಿ ಬಿಜೆಪಿ ಟಿಕೆಟ್ ಪಡೆದಿದ್ದಾರೆ. ಇತ್ತ ಘಾಜಿಯಾಬಾದ್‌ನಿಂದ ಸಂಸದರಾಗಿದ್ದ ನಿವೃತ್ತ ಸೇನಾಧಿಕಾರಿ ವಿಕೆ ಸಿಂಗ್ ಈ ಬಾರಿ ಸ್ಪರ್ಧೆಗೆ ನಿರಾಕರಿಸಿದ್ದರು. ಹೀಗಾಗಿ ಈ ಕ್ಷೇತ್ರದಿಂದ ಅತುಲ್ ಗರ್ಗ್‌ಗೆ ಟಿಕೆಟ್ ನೀಡಲಾಗಿದೆ.


 

click me!