ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ಪ್ರಜಾಪ್ರಭುತ್ವವನ್ನು ಎರಡನ್ನೂ ಹಾಳು ಮಾಡುತ್ತಿದ್ದಾರೆ. ಅಲ್ಲದೆ ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರುವಂತೆ ಬಲ ಪ್ರಯೋಗ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
ಜೈಪುರ (ಏ.07): ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ಪ್ರಜಾಪ್ರಭುತ್ವವನ್ನು ಎರಡನ್ನೂ ಹಾಳು ಮಾಡುತ್ತಿದ್ದಾರೆ. ಅಲ್ಲದೆ ಲೋಕಸಭಾ ಚುನಾವಣೆಗೂ ಮುನ್ನ ವಿರೋಧ ಪಕ್ಷದ ನಾಯಕರನ್ನು ಬಿಜೆಪಿಗೆ ಸೇರುವಂತೆ ಬಲ ಪ್ರಯೋಗ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ. ಇಲ್ಲಿ ನಡೆದ ಪಕ್ಷದ ಚುನಾವಣಾ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಸೋನಿಯಾ, ‘ಮೋದಿ ತಾನು ಶ್ರೇಷ್ಠ ಎಂದು ತೋರಿಸಿಕೊಳ್ಳಲು ಪ್ರಜಾಪ್ರಭುತ್ವವನ್ನು ಗಾಳಿಗೆ ತೂರಿಬಿಟ್ಟಿದ್ದಾರೆ. ಆದ್ದರಿಂದಲೇ ಭಾರತದ ಪ್ರಜಾಪ್ರಭುತ್ವ ಇಂದು ಅಪಾಯದಲ್ಲಿದೆ.
10 ವರ್ಷದ ಆಡಳಿತದಲ್ಲಿ ನಿರುದ್ಯೋಗ, ಅಸಮಾನತೆ, ಹಣದುಬ್ಬರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅತ್ಯಾಚಾರಗಳು ಹೆಚ್ಚಾಗಿವೆ ಎಂದು ಆರೋಪಿಸಿದರು. ಕಾಂಗ್ರೆಸ್ ಪ್ರಣಾಳಿಕೆಯ ಯುವ ನ್ಯಾಯ್, ನಾರಿ ನ್ಯಾಯ್, ಕಿಸಾನ್ ನ್ಯಾಯ್, ಶ್ರಮಿಕ ನ್ಯಾಯ್, ಹಿಸೇದಾರಿ ನ್ಯಾಯ್ ಎಂಬ ಐದು ಪಂಚ್ ನ್ಯಾಯಗಳಿಂದ ಭಾರತವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತದೆ ಎಂದು ಸೋನಿಯಾ ಭರವೆ ನೀಡಿದರು. ಹೇಳಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಪ್ರಧಾನಿ ಮೋದಿ ಒಬ್ಬ ಸುಳ್ಳುಗಾರ. ಆತ ನೀಡಿದ ಭರವಸೆಗಳನ್ನು ಈಡೇರಿಸಲು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
ಲೋಕಸಭಾ ಚುನಾವಣೆಯಿಂದಾಗಿ ಬರ ಪರಿಹಾರ ತಡ: ನಿರ್ಮಲಾ ಸೀತಾರಾಮನ್
ಮೋದಿ ಹಾಗೂ ಆರ್‌ಎಸ್‌ಎಸ್‌ನವರು ಸೇರಿ ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. 55 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷ ಐಐಟಿ, ಐಐಎಂನಂತಹ ವಿದ್ಯಾಸಂಸ್ಥೆಗಳನ್ನು ಕಟ್ಟಿದ್ದು, ದೇಶದ ಅಭಿವೃದ್ಧಿಗಾಗಿ ಶ್ರಮಿಸಿದೆ. ಕರ್ನಾಟಕ ರಾಜ್ಯದಲ್ಲಿ ನೀಡಿರುವ ಭರವಸೆಯ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಮಾತನಾಡಿ, ಬಿಜೆಪಿಯು ಕೆಲವು ಉದ್ಯಮಿದಾರರಿಗೆ ರಾಷ್ಟ್ರದ ಆಸ್ತಿಯನ್ನು ಹಸ್ತಾಂತರಿಸುತ್ತಿದ್ದು, ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದು ಆರೋಪಿಸಿದರು.