ತೆರೆದ ವಾಹನದ ಮೂಲಕ ಶಿವಮೊಗ್ಗ ಸಮಾವೇಶಕ್ಕೆ ಎಂಟ್ರಿಕೊಟ್ಟ ಮೋದಿಗೆ ಅದ್ಧೂರಿ ಸ್ವಾಗತ!

By Suvarna NewsFirst Published Mar 18, 2024, 3:24 PM IST
Highlights

ಶಿವಮೊಗ್ಗದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತರೆದ ವಾಹನದ ಮೂಲಕ ಭರ್ಜರಿಯಾಗಿ ಎಂಟ್ರಿಕೊಟ್ಟಿದ್ದಾರೆ

ಶಿವಮೊಗ್ಗ(ಮಾ.18)  ಲೋಕಸಭಾ ಚುನಾವಣೆ ಪ್ರಚಾರವನ್ನು ಅದ್ಧೂರಿಯಾಗಿ ಆರಂಭಿಸಿರುವ ಬಿಜೆಪಿ ಇದೀಗ ಕರ್ನಾಟಕದಲ್ಲಿ ಎರಡನೇ ಸಮಾವೇಶ ಆಯೋಜಿಸಿದೆ. ಕಲಬುರಗಿ ಬಳಿಕ ಶಿವಮೊಗ್ಗದಲ್ಲಿ ಆಯೋಜಿಸಿದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೆರೆದ ವಾಹನದಲ್ಲಿ ಅದ್ದೂರಿಯಾಗಿ ಎಂಟ್ರಿಕೊಟ್ಟಿದ್ದಾರೆ. ಮೋದಿ ಆಗಮಿಸುತ್ತಿದ್ದಂತೆ ಲಕ್ಷಾಂತರ ಮಂದಿ ಎದ್ದು ನಿಂತು ಮೋದಿಗೆ ಜೈಕಾರ ಹಾಕಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿಯ ತೆರೆದ ವಾಹನದಲ್ಲಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಬಿವೈ ರಾಘವೇಂದ್ರ, ದಾವಣಗೆರೆ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಜೊತೆಗೆ ತೆರೆದ ವಾಹನದಲ್ಲಿ ಪ್ರಧಾನಿ ನರೇಂದ್ರ ಮೋದಿ ವೇದಿಕೆಗೆ ಆಗಮಿಸಿದರು. ಈ ವೇಳೆ ಕಾರ್ಯಕರ್ತರ ಜಯ ಘೋಷ, ಮೋದಿ ಮೋದಿ ಘೋಷಣೆ, ಬಾರತ್ ಮಾತಾ ಕಿ ಜೈಕಾರದಿಂದ ಸಭೆ ಝೇಂಕರಿಸಿತ್ತು.

ಶಿವಮೊಗ್ಗದಲ್ಲಿ ಕುವೆಂಪು ಕವನ ಉಲ್ಲೇಖಿಸಿ ಕಾಂಗ್ರೆಸ್- ಇಂಡಿಯಾ ಒಕ್ಕೂಟಕ್ಕೆ ತಿರುಗೇಟು ನೀಡಿದ ಮೋದಿ!

ಪ್ರಧಾನಿ ಮೋದಿಯ ಬೃಹತ್ ಸಮಾವೇಶದಲ್ಲಿ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಘಟಾನಘಟಿ ರಾಜ್ಯ ಬಿಜೆಪಿ ನಾಯಕರ ಉಪಸ್ಥಿತರಿದ್ದಾರೆ. ಇದರ ಜೊತೆಗೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಾ, ಬೆಂಗಳೂರು ಗ್ರಾಮಾಂತರ ಅಭ್ಯರ್ಥಿ ಡಾ ಸಿ ಎನ್ ಮಂಜುನಾಥ್, ದಾವಣಗೆರೆ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್, ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ, ಶಿವಮೊಗ್ಗ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಉಪಸ್ಥಿತಿರಿದ್ದಾರೆ. ಈ ಸಮಾವೇಶದಲ್ಲಿ  ಜೆಡಿಎಸ್ ಶಾಸಕಿ ಶಾರದ ಪುರಿ ನಾಯಕ್ ಗೂ ಅವಕಾಶ ನೀಡಲಾಗಿದೆ. 

ಶಿವಮೊಗ್ಗ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂಡಿಯಾ ಒಕ್ಕೂಟ ಹಾಗೂ ಕಾಂಗ್ರೆಸ್ ನಾಯಕರು ಹಿಂದೂ ಶಕ್ತಿಯನ್ನು ಮುಗಿಸುವ ಘೋಷಣೆ ಮಾಡಿದ್ದಾರೆ. ನಾವು ಹಿಂದೂ ಶಕ್ತಿ ದೇವತೆಯ ಉಪಾಸಕರು. ಈ ಶಕ್ತಿಯನ್ನು ನಾಶಪಡಿಸಲು ಕಾಂಗ್ರೆಸ್ ಹಾಗೂ ಇಂಡಿಯಾ ಒಕ್ಕೂಟ ಮುಂದಾಗಿದೆ. ಬಾಳಸಾಹೇಬ್ ಠಾಕ್ರೆ ಆತ್ಮ ಈ ಮಾತು ಕೇಳಿಸಿಕೊಂಡು ಅದೆಷ್ಟು ಹಿಂಸೆ ಪಡುತ್ತಿರುವ ಬರಹುದು ಯೋಚಿಸಿ. ಅಂಬಾ ಭವಾನಿ, ಜೈ ಶಿವಾಜಿ ಅನ್ನೋ ಘೋಷಣೆ ಮೊಳಗುವ, ಶಿವಾಜಿ ಹುಟ್ಟಿದ ನಾಡಿನಲ್ಲಿ ಶಕ್ತಿ ದೇವತೆಯನ್ನು ಮುಗಿಸುವ ಮಾತನಾಡಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ನಿನ್ನೆ ಶಿವಾಜಿ ಪಾರ್ಕ್ ಮುಂಬೈನಲ್ಲಿ ಹೇಳಿದ ಮಾತುಗಳಿಗೆ ಭರ್ಜರಿ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿಗೆ 28 ಕ್ಷೇತ್ರ ಗೆಲ್ಲಿಸಿಕೊಡುವ ಭರವಸೆ ನೀಡಿದ ಬಿಎಸ್ ಯಡಿಯೂರಪ್ಪ!

click me!