
ತಿರುವನಂತಪುರಂ(ಏ.23) ಲೋಕಸಭಾ ಚುನಾವಣೆ ಗೆಲುವಿಗೆ ನಾಯಕರು ಭಾರಿ ಕಸರತ್ತು ನಡೆಸುತ್ತಿದ್ದಾರೆ. ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿದೆ. ಇದು ಹಲವು ಬಾರಿ ಎಲ್ಲೆ ಮೀರುತ್ತಿದೆ. ಇದೀಗ ರಾಹುಲ್ ಗಾಂಧಿ ವಿರುದ್ಧ CPI(M)ಬೆಂಬಲಿತ ನಾಯಕ ಪಿವಿ ಅನ್ವರ್ ಹೇಳಿಕೆ ಇದೀಗ ಬಾರಿ ವಿವಾದಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ತಮ್ಮ ಹೆಸರಿನ ಮುಂದೆ ಬಳಸುತ್ತಿರುವ ಗಾಂಧಿ ಸರ್ನೇಮ್ ಬಳಸಲು ಅವರಿಗೆ ಯಾವುದೇ ಹಕ್ಕಿಲ್ಲ ಎಂದಿದ್ದಾರೆ. ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲೇ ಹುಟ್ಟಿದ್ದಾರ ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಡಿಎನ್ಎ ಪರೀಕ್ಷಿಸಬೇಕು ಎಂದಿದ್ದಾರೆ.
ಮಲಪ್ಪುರಂನಲ್ಲಿ ಸಿಪಿಐ(ಎಂ) ಆಯೋಜಿಸಿದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಪಿವಿ ಅನ್ವರ್, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಾಹುಲ್ ಗಾಂಧಿ ಇದೀಗ ನಾಲ್ಕನೇ ದರ್ಜೆ ನಾಗರೀಕರಾಗಿ ವರ್ತಿಸುತ್ತಿದ್ದಾರೆ. ರಾಹುಲ್ ಗಾಂಧಿ ನೆಹರೂ ಕುಟುಂಬದಲ್ಲೇ ಹುಟ್ಟಿದ್ದಾರ? ನನಗೆ ಈ ಕುರಿತು ಅನುಮಾನವಿದೆ. ಡಿಎನ್ಎ ಪರೀಕ್ಷಿಸಬೇಕು ಎಂದು ಪಿವಿ ಅನ್ವರ್ ಹೇಳಿದ್ದಾರೆ.
ದೇಶವನ್ನೇ ಕತ್ತಲಲ್ಲಿಟ್ಟ ಇಂದಿರಾ ನಮ್ಮನ್ನೂ ಜೈಲಿಗೆ ಹಾಕಿದ್ದರು, ರಾಹುಲ್ ಗಾಂಧಿಗೆ ಪಿಣರಾಯಿ ತಿರುಗೇಟು!
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಷ್ಟೇ ಅಲ್ಲ ರಾಹುಲ್ ಗಾಂಧಿ ವಿರುದ್ಧ ಹರಿಹಾಯ್ದಿದ್ದಾರೆ. ರಾಹುಲ್ ಗಾಂಧಿ ಗಂಭೀರ ರಾಜಕಾರಣಿ ಅಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ. ರಾಹುಲ್ ಗಾಂಧಿ ಮಾತನ್ನು ಯಾರು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದಿದ್ದಾರೆ.
ಪಿಎ ಅನ್ವರ್ ಹೇಳಿಕೆಯನ್ನ ಕೇರಳ ಕಾಂಗ್ರೆಸ್ ಖಂಡಿಸಿದೆ. ರಾಹುಲ್ ಗಾಂಧಿ ದೇಶಾದ್ಯಂತ ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆ. ಬಡವರ ಕಷ್ಟಗಳನ್ನು ಕೇಳಿದ್ದಾರೆ. ಸಮಸ್ಯೆಗಳನ್ನು ಅವರ ಮಟ್ಟಕ್ಕಿಳಿದು ಅರ್ಥ ಮಾಡಿಕೊಂಡಿದ್ದಾರೆ. ಭಾರತ್ ಜೋಡೋ ಯಾತ್ರೆಗೆ ಅಭೂತಪೂರ್ವ ಯಶಸ್ಸು ಸಿಕ್ಕಿದೆ. ದೇಶಾದ್ಯಂತ ಓಡಾಡಿ ದೇಶವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಸಿಪಿಎಂ ಹಾಗೂ ಬೆಂಬಲಿತ ನಾಯಕರು ರಾಹುಲ್ ಗಾಂಧಿ ವೈಯುಕ್ತಿಕ ವಿಚಾರಗಳನ್ನು ಪ್ರಶ್ನಿಸುತ್ತಿದೆ. ಇದಕ್ಕೆ ಜನರು ಉತ್ತರ ನೀಡಲಿದ್ದಾರೆ ಎಂದು ಕೇರಳ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
ಮುಸ್ಲಿಂ ಲೀಗ್ ವೋಟ್ ಬೇಕು, ಧ್ವಜ ಬೇಡ್ವಾ? ಕಾಂಗ್ರೆಸ್‌ಗೆ ಪ್ರಶ್ನೆ ಮಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್!
ರಾಹುಲ್ ಗಾಂಧಿ ಇತ್ತೀಚೆಗೆ ಕೇರಳ ಚುನಾವಣಾ ಪ್ರಚಾರದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಹರಿಹಾಯ್ದಿದ್ದರು. ಪಿಣರಾಯಿ ವಿಜಯನ್, ಬಿಜೆಪಿ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಯಾವುದೇ ಆರೋಪ ಮಾಡುವುದಿಲ್ಲ. ಕಾರಣ ಕೇಂದ್ರದ ತನಿಖಾ ಸಂಸ್ಥೆಗಳ ಭಯವಿದೆ. ಇತ್ತ ಮೋದಿ ಕೂಡ ಪಿಣರಾಯಿ ವಿಜಯನ್ ವಿರುದ್ದ ಮಾತನಾಡುತ್ತಿಲ್ಲ. ಬಿಜೆಪಿ ಹಾಗೂ ಸಿಪಿಎಂ ಕೇರಳದಲ್ಲಿ ಕೈಜೋಡಿಸಿದೆ ಎಂದು ಆರೋಪಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ