ಲೋಕಸಭೆಗೆ 7 ಹಂತದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 64.2 ಕೋಟಿ ಜನರು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ವಿಶ್ವದಾಖಲೆ ಸೃಷ್ಟಿಯಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್,
ನವದೆಹಲಿ (ಜೂ.4): ಲೋಕಸಭೆಗೆ 7 ಹಂತದಲ್ಲಿ ನಡೆದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 64.2 ಕೋಟಿ ಜನರು ತಮ್ಮ ಹಕ್ಕು ಚಲಾಯಿಸುವ ಮೂಲಕ ಹೊಸ ವಿಶ್ವದಾಖಲೆ ಸೃಷ್ಟಿಯಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ‘
ಈ ಬಾರಿ ಚುನಾವಣೆಯಲ್ಲಿ 31.2 ಕೋಟಿ ಮಹಿಳೆಯರು, 33 ಕೋಟಿ ಪುರುಷ ಸೇರಿ ಒಟ್ಟು 64.2 ಕೋಟಿ ಜನರು ತಮ್ಮ ಮತ ಚಲಾಯಿಸಿದ್ದಾರೆ. ಇದು ವಿಶ್ವದ ಯಾವುದೇ ಒಂದು ಚುನಾವಣೆಯಲ್ಲಿ ದಾಖಲಾದ ಅತಿಹೆಚ್ಚು ಮತ ಪ್ರಮಾಣವಾಗಿದೆ. ಈ ಬಾರಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು 68000 ನಿಗಾ ತಂಡಗಳನ್ನು ನಿಯೋಜಿಸಲಾಗಿತ್ತು. 1.5 ಕೋಟಿ ಚುನಾವಣಾ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿಸಿದರು.
ಇಂದು ಜಡ್ಜ್‌ಮೆಂಟ್ ಡೇ! ಮೋದಿ ಸತತ 3ನೇ ಬಾರಿಗೆ ಪ್ರಧಾನಿಯಾಗ್ತಾರಾ?
ಇಡೀ ಚುನಾವಣಾ ಪ್ರಕ್ರಿಯೆಗಾಗಿ ಒಟ್ಟು 4 ಲಕ್ಷ ವಾಹನಗಳು, 135 ವಿಶೇಷ ರೈಲು, 1692 ವಿಮಾನಗಳ ಸೇವೆ ಬಳಸಿಕೊಳ್ಳಲಾಗಿತ್ತು. ಚುನಾವಣಾ ಪ್ರಕ್ರಿಯೆ ಕೂಡಾ ಶಾಂತಿಯುತವಾಗಿತ್ತು. 2019ರಲ್ಲಿ 540 ಮತಗಟ್ಟೆಗಳಲ್ಲಿ ಮರುಮತದಾನವಾಗಿದ್ದರೆ, ಈ ಬಾರಿ ಕೇವಲ 39 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲಾಗಿದೆ. ಇನ್ನು 2019ರ ಚುನಾವಣೆ ವೇಳೆ 3500 ಕೋಟಿ ರು. ಮೊತ್ತದ ನಗದು, ಉಚಿತ ಕೊಡುಗೆ, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡಿದ್ದರೆ, ಈ ಬಾರಿ ಆ ಪ್ರಮಾಣ 10000 ಕೋಟಿ ರು. ತಲುಪಿದೆ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.
ಎನ್‌ಡಿಎ ಅಕ್ರಮವಾಗಿ ಗೆದ್ದರೆ ಹೋರಾಟ: ಎದ್ದೇಳು ಕರ್ನಾಟಕ ಸಂಘಟನೆ ಎಚ್ಚರಿಕೆ!
ಕಾಶ್ಮೀರ ಚುನಾವಣೆಗೆ ಶೀಘ್ರದಲ್ಲೇ ಪ್ರಕ್ರಿಯೆನವದೆಹಲಿ: 370ನೇ ವಿಧಿ ರದ್ದತಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವು ಶೀಘ್ರದಲ್ಲೇ ತನ್ನ ಪ್ರಕ್ರಿಯೆಗಳನ್ನು ಆರಂಭಿಸಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.