ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ರಾಜಸ್ಥಾನದಂಥ ತನ್ನ ಸಾಂಪ್ರದಾಯಿಕ ರಾಜ್ಯಗಳಲ್ಲಿ ಬಿಜೆಪಿ ಬಹುತೇಕ ಎಲ್ಲ ಸೀಟುಗಳಲ್ಲಿ ಕಳೆದ ಸಲದಂತೆ ಜಯಿಸಲಿದೆ.
ನವದೆಹಲಿ (ಜೂ.2): ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ಗುಜರಾತ್, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ರಾಜಸ್ಥಾನದಂಥ ತನ್ನ ಸಾಂಪ್ರದಾಯಿಕ ರಾಜ್ಯಗಳಲ್ಲಿ ಬಿಜೆಪಿ ಬಹುತೇಕ ಎಲ್ಲ ಸೀಟುಗಳಲ್ಲಿ ಕಳೆದ ಸಲದಂತೆ ಜಯಿಸಲಿದೆ.
ಇದಕ್ಕೆ ಹೆಚ್ಚುವರಿಯಾಗಿ ಪ.ಬಂಗಾಳ, ಒಡಿಶಾ, ಆಂಧ್ರಪ್ರದೇಶದಂಥ ತನಗೆ ಅಷ್ಟಾಗಿ ನೆಲೆ ಇಲ್ಲದ ರಾಜ್ಯಗಳಲ್ಲೂ ಬಿಜೆಪಿ (ಎನ್‌ಡಿಎ) ಸ್ವಂತ ಬಲದಿಂದ ಹಾಗೂ ಟಿಡಿಪಿಯಂಥ ಮಿತ್ರರ ಬಲದಿಂದ ಉತ್ತಮ ಸ್ಥಾನ ಸಂಪಾದಿಸಲಿದೆ. ತಮಿಳುನಾಡು, ಕೇರಳದಂಥ ರಾಜ್ಯಗಳಲ್ಲೂ ಖಾತೆ ಆರಂಭಿಸಲಿದೆ. ಈ ಮೂಲಕ ತನ್ನ 400ರ ಗುರಿಯ ಸನಿಹ ತಲುಪಲಿದೆ ಎಂದು ಸಮೀಕ್ಷೆಗಳು ಹೇಳಿವೆ.ಆದರೆ ಇದಕ್ಕೆ ವಿರುದ್ಧವಾಗಿ ಬಹುತೇಕ ಎಲ್ಲ ವಿಪಕ್ಷಗಳು ಒಂದಾಗಿ, ಇಂಡಿಯಾ ಹೆಸರಿನ ಮೈತ್ರಿಕೂಟ ರಚಿಸಿಕೊಂಡು ಹೋರಾಡಿದರೂ ಅವುಗಳ ಸಂಖ್ಯೆ 150 ಕೂಡ ದಾಟದು ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ.
ಇಂಡಿಯಾ ಕೂಟಕ್ಕೆ 295 ಸ್ಥಾನ, ಅಧಿಕಾರ: ಮಲ್ಲಿಕಾರ್ಜುನ ಖರ್ಗೆ
ಈ ಎರಡೂ ಕೂಟಗಳ ಹೊರತಾದ ಇತರ ಪಕ್ಷಗಳ ಸಾಧನೆ ಕಳೆದ ಸಲಕ್ಕಿಂತ ಭಾರಿ ಪ್ರಮಾಣದಲ್ಲಿ ಕುಸಿಯಲಿದೆ ಎಂದು ಸಮೀಕ್ಷಾ ಸಂಸ್ಥೆಗಳು ಹೇಳಿವೆ.