
ನವದೆಹಲಿ (ಡಿಸೆಂಬರ್ 18, 2023): ಇತ್ತೀಚಿನ ಪಂಚರಾಜ್ಯ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು ಕಂಡು ಹಿನ್ನಡೆಯಲ್ಲಿರುವ ಕಾಂಗ್ರೆಸ್, 2024ರ ಲೋಕಸಭಾ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ಡಿಸೆಂಬರ್ 21ರಂದು ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಯ ಸಭೆ ಕರೆದಿದೆ.
ಈ ಸಭೆಯಲ್ಲಿ ಇತ್ತೀಚಿನ ಪಂಚರಾಜ್ಯ ಚುನಾವಣೆಗಳ ಪೈಕಿ 4 ರಾಜ್ಯಗಳಲ್ಲಿ ಸೋಲು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಹಣಿಯಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭಾ ಚುನಾವಣೆಯ ಪ್ರಚಾರ ಅಭಿಯಾನ, ಇಂಡಿಯಾ ಮೈತ್ರಿಕೂಟದ ಪಕ್ಷಗಳ ಜೊತೆ ಸೀಟು ಹಂಚಿಕೆ ವಿಷಯ ಮತ್ತು ರಾಹುಲ್ ಗಾಂಧಿ ಪಾದಯಾತ್ರೆ ಕುರಿತು ಪ್ರಮುಖವಾಗಿ ಚರ್ಚಿಸಲಾಗುವುದು ಎನ್ನಲಾಗಿದೆ.
ಇದನ್ನು ಓದಿ: ಲೋಕಸಭೆ ಟಿಕೆಟ್ ಆಕಾಂಕ್ಷಿ ನಾನಲ್ಲ, ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆ ಮಾಡುವೆ: ಜಗದೀಶ್ ಶೆಟ್ಟರ್
ಡಿಸೆಂಬರ್ 19ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ನಿಗದಿಯಾಗಿದ್ದು, ಅದಾದ ಎರಡೇ ದಿನದಲ್ಲಿ ದೆಹಲಿಯಲ್ಲಿನ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಿಡಬ್ಲ್ಯುಸಿ ಸಭೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆದಿದ್ದಾರೆ.
ಭಾರತ್ ಜೋಡೋ 2.0:
ಈ ಹಿಂದೆ ದಕ್ಷಿಣ ಕನ್ಯಾಕುಮಾರಿಯಿಂದ ಉತ್ತರದ ಶ್ರೀನಗರದವರೆಗೆ ಭಾರತ್ ಜೋಡೋ ಪಾದಯಾತ್ರೆ ನಡೆಸಿದ್ದ ಕಾಂಗ್ರೆಸ್ ನಾಯಕ, ಜನವರಿ ತಿಂಗಳಲ್ಲಿ ದೇಶದ ಪೂರ್ವ ಭಾಗದಿಂದ ಪಶ್ಚಿಮಕ್ಕೆ ಹೈಬ್ರಿಡ್ ಮಾದರಿಯಲ್ಲಿ ಪಾದಯಾತ್ರೆ ನಡೆಸುವ ಸಾಧ್ಯತೆ ಇದೆ. ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯನ್ನು ಈ ಯಾತ್ರೆ ವೇಳೆ ಪ್ರಮುಖವಾಗಿ ಜನರ ಮುಂದಿಡಲು ಪಕ್ಷ ನಿರ್ಧರಿಸಿದೆ ಎನ್ನಲಾಗಿದೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಕ್ರೌಡ್ ಫಂಡಿಂಗ್; ಅಭಿಯಾನಕ್ಕೆ ನಾಳೆ ಚಾಲನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ