2024ರಲ್ಲಿ ಮತ್ತೆ ಬಿಜೆಪಿಗೆ ಜಯ: ರೇಟಿಂಗ್‌ ಏಜೆನ್ಸಿ ಫಿಚ್ ಭವಿಷ್ಯ

Published : Dec 13, 2023, 07:15 AM ISTUpdated : Dec 13, 2023, 08:50 AM IST
2024ರಲ್ಲಿ ಮತ್ತೆ ಬಿಜೆಪಿಗೆ ಜಯ: ರೇಟಿಂಗ್‌ ಏಜೆನ್ಸಿ ಫಿಚ್ ಭವಿಷ್ಯ

ಸಾರಾಂಶ

ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಜಾಗತಿಕ ಆರ್ಥಿಕ ರೇಟಿಂಗ್‌ ಏಜೆನ್ಸಿ ಫಿಚ್‌ ಭವಿಷ್ಯ ನುಡಿದಿದೆ. 

ನವದೆಹಲಿ:  ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳಲಿದೆ ಎಂದು ಜಾಗತಿಕ ಆರ್ಥಿಕ ರೇಟಿಂಗ್‌ ಏಜೆನ್ಸಿ ಫಿಚ್‌ ಭವಿಷ್ಯ ನುಡಿದಿದೆ. ಆದರೆ ಆ ಚುನಾವಣೆಯಲ್ಲಿ ದೊರಕುವ ಬಹುಮತದ ಪ್ರಮಾಣವು ಆಡಳಿತದ ಸುಧಾರಣಾ ಕಾರ್ಯಸೂಚಿಯ ಮೇಲೆ ಪ್ರಭಾವ ಬೀರಬಹುದು ಎಂದೂ ಅದು ಹೇಳಿದೆ.

ಪ್ರಸ್ತುತ ಅಧಿಕಾರದಲ್ಲಿ ಇರುವ ಪಕ್ಷಗಳು ಭಾರತದಲ್ಲಿ ಹಾಗೂ ಬಾಂಗ್ಲಾದೇಶದಲ್ಲಿ ಮತ್ತೊಮ್ಮೆ ಆಡಳಿತದ ಗದ್ದುಗೆ ಏರುವ ಸಾಧ್ಯತೆ ಇದೆ. ಇದರಿಂದ ಈ ಹಿಂದಿನ ನೀತಿಗಳೇ ನಿರಂತರವಾಗಿ ಮುಂದುವರಿಯಲು ಅನುಕೂಲವಾಗುತ್ತದೆ’ ಎಂದು ಫಿಚ್‌ ನುಡಿದಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೊದಲ ಬಾರಿ 2014ರಲ್ಲಿ ಅಧಿಕಾರಕ್ಕೆ ಬಂದಿತ್ತು ಮತ್ತು 2019ರ ಸಾರ್ವತ್ರಿಕ ಚುನಾವಣೆಯಲ್ಲೂ ಭಾರಿ ಬಹುಮತದೊಂದಿಗೆ ಮತ್ತೆ ಜಯಿಸಿತ್ತು. ಮುಂದಿನ ಸಾರ್ವತ್ರಿಕ ಚುನಾವಣೆ 2024ರ ಏಪ್ರಿಲ್‌-ಮೇನಲ್ಲಿ ನಡೆಯಲಿವೆ.

ಲೋಕಸಭೆ ಚುನಾವಣೆ ಹೊತ್ತಲ್ಲೇ ಮೋದಿಗೆ ಬ್ರಹ್ಮಾಸ್ತ್ರ..! ಬಿಜೆಪಿ ಸರ್ಕಾರದ ಮುಂದಿನ ಗುರಿ ಪಿಒಕೆಯಾ..?

ರಾಜ್ಯಸಭೆಯಲ್ಲಿ 30 ನಿಮಿಷದ ನಮಾಜ್‌ ಬ್ರೇಕ್‌ ರದ್ದು ಮಾಡಿದ ಚೇರ್ಮನ್‌ ಜಗದೀಪ್‌ ಧನ್‌ಕರ್‌!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋ ವಿಮಾನ ರದ್ದಾಗಿ ಪರದಾಡುತ್ತಿರುವ ಪ್ರಯಾಣಿಕರ ನೆರವಿಗೆ ಧಾವಿಸಿದ ಭಾರತೀಯ ರೈಲ್ವೆ
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ