
ಚೆನ್ನೈ(ಜ.05): ಚೆನ್ನೈನ 2 ಪಂಚತಾರಾ ಹೋಟೆಲ್‌ಗಳು ಸೇರಿ ಹಲವು ಹೋಟೆಲ್‌ಗಳು ಕೊರೋನಾ ಹಾಟ್‌ಸ್ಪಾಟ್ ಆಗಿ ಬದಲಾಗಿವೆ. ಈ ಸ್ಟಾರ್ ಹೋಟೆಲ್‌ಗಳಲ್ಲಿ 125 ಸಿಬ್ಬಂದಿಗೆ ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.
ಲೀಲಾ ಪ್ಯಾಲೇಸ್‌ನಲ್ಲಿ 20 ಹಾಗೂ ಐಟಿಸಿ ಗ್ರ್ಯಾಂಡ್ ಚೋಳದಲ್ಲಿ 85 ಪ್ರಕರಣಗಳು ವರದಿಯಾಗಿವೆ. ಇದರ ಜತೆಗೆ ಇನ್ನೂ ಕೆಲವು ತಾರಾ ಹೋಟೆಲ್‌ಗಳಲ್ಲಿ ಕೆಲವು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ 125 ಮಂದಿಗೆ ಸೋಂಕು ದೃಢಪಟ್ಟಿದೆ.
ಈ ಕಾರಣಕ್ಕೆ ಚೆನ್ನೈ ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದ್ದು, ನಗರದ ಎಲ್ಲ ಹೋಟೆಲ್ ಸಿಬ್ಬಂದಿಗಳ ಕೊರೋನಾ ಪರೀಕ್ಷೆ ಆರಂಭಿಸಿದೆ. ಎಲ್ಲೆಲ್ಲಿ ಇತ್ತೀಚಿನ ದಿನಗಳಲ್ಲಿ ಭಾರೀ ಜನರನ್ನು ಸೇರಿಸಿ ಸಭೆಗಳನ್ನು ನಡೆಸಲಾಗಿತ್ತೋ ಅಂಥ ಹೋಟೆಲ್‌ಗಳ ಮೇಲೆ ಗಮನ ಕೇಂದ್ರೀಕರಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ