
ನವದೆಹಲಿ (ಅ.23): ಬಿಹಾರದಲ್ಲಿ ಅಧಿಕಾರಕ್ಕೆ ಬಂದರೆ ಉಚಿತವಾಗಿ ಕೊರೋನಾ ಲಸಿಕೆ ವಿತರಿಸುವುದಾಗಿ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ ಬೆನ್ನಲ್ಲೇ, ತಮಿಳುನಾಡು ಹಾಗೂ ಮಧ್ಯಪ್ರದೇಶ ಸರ್ಕಾರಗಳು ತಾವು ಕೂಡ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆ ಮಾಡಿವೆ.
ಕೊರೋನಾಕ್ಕೆ ಲಸಿಕೆ ಲಭ್ಯ ಆಗುತ್ತಿದ್ದಂತೆ ರಾಜ್ಯದ ಜನರಿಗೆ ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಗುರುವಾರ ಹೇಳಿದ್ದಾರೆ. ದೇಶದಲ್ಲಿ ಕೊರೋನಾಕ್ಕೆ ಲಸಿಕೆ ಲಭ್ಯ ಆಗುತ್ತಿದ್ದಂತೆ ತಮಿಳುನಾಡಿನಲ್ಲೂ ಉಚಿತವಾಗಿ ವಿತರಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಸೋಂಕಿತ ಶವ ಪರೀಕ್ಷೆ : ಹೊರಬಿತ್ತು ಆತಂಕಕಾರಿ ಸಂಗತಿ
ಕಳೆದ ವಾರ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, 2021ರ ಆರಂಭದಲ್ಲೇ ಕೊರೋನಾಕ್ಕೆ ಲಸಿಕೆ ಲಭ್ಯವಾಗಲಿದೆ ಎಂದು ಹೇಳಿದ್ದರು. ಈ ನಡುವೆ, ಮಧ್ಯಪ್ರದೇಶ ಮುಖ್ಯಮಂತ್ರಿ ಕೂಡ ಲಸಿಕೆ ದೊರೆಯುತ್ತಿದ್ದಂತೆ ಮಧ್ಯಪ್ರದೇಶ ಜನರಿಗೆ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ