
ಛತ್ತರ್‌ಪುರ: ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಂದು ಮುಂಜಾನೆ ಒಂದು ಪ್ರಯಾಣಿಕ ಆಟೋ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 7 ಜನರು ಸಾವನ್ನಪ್ಪಿ ಆರು ಜನ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಆಟೋದಲ್ಲಿ ಆಟೋದಲ್ಲಿ ತೀರ್ಥಕ್ಷೇತ್ರ ಭಾಗೇಶ್ವರ ಧಾಮಕ್ಕೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ದುರಂತದಲ್ಲಿ ಮೃತರಾದವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗ್ವಾಲಿಯರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಕಾರಣಕ್ಕಾಗಿ ಈ ಭೀಕರ ಅಪಘಾತ ಸಂಭವಿಸಿದೆ
ಛತ್ತರ್‌ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-39 ರಲ್ಲಿ ಇಂದು ಬೆಳಿಗ್ಗೆ ಸುಮಾರು 5 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಆಟೋದಲ್ಲಿದ್ದ 13 ಮಂದಿ ಖಜುರಾಹೋ-ಝಾನ್ಸಿ ಹೆದ್ದಾರಿಯ ಮೂಲಕ ಬಾಗೇಶ್ವರಕ್ಕೆ ತೆರಳುತ್ತಿದ್ದರು. ಈ ವೇಳೆ ತೀರ್ಥಯಾತ್ರಿಕರನ್ನು ಹೊತ್ತು ಸಾಗುತ್ತಿದ್ದ ಆಟೋ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಸ್ಥಳದಲ್ಲಿ ಭೀಕರ ವಾತಾವರಣ ನಿರ್ಮಾಣವಾಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಚಾಲಕನಿಗೆ ನಿದ್ದೆ ಮತ್ತು ಬಂದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಆಟೋದಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಕಾರಣ ಅದು ನಿಯಂತ್ರಣ ತಪ್ಪಿದೆ ಎಂದು ತಿಳಿದು ಬಂದಿದೆ.
20 ವರ್ಷದ ಯುವಕನ ಅತೀವೇಗದ ಚಾಲನೆಗೆ ಸೆಕ್ಯೂರಿಟಿ ಗಾರ್ಡ್ ಬಲಿ : ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರು: ಗರ್ಭಿಣಿಗೆ ಲಾರಿ ಡಿಕ್ಕಿ, ಹೊಟ್ಟೆಯಿಂದ ಬಂದ ಮಗು ವಿಲವಿಲ ಒದ್ದಾಡಿ ಸಾವು..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ