National Anthem ಯುಪಿ ಬಳಿಕ ಮಧ್ಯ ಪ್ರದೇಶ ಮದರಸಾದಲ್ಲೂ ರಾಷ್ಟ್ರಗೀತ ಕಡ್ಡಾಯಕ್ಕೆ ಚಿಂತನೆ!

Published : May 14, 2022, 01:03 AM IST
National Anthem ಯುಪಿ ಬಳಿಕ ಮಧ್ಯ ಪ್ರದೇಶ ಮದರಸಾದಲ್ಲೂ ರಾಷ್ಟ್ರಗೀತ ಕಡ್ಡಾಯಕ್ಕೆ ಚಿಂತನೆ!

ಸಾರಾಂಶ

ರಾಷ್ಟ್ರಗೀತೆ ಹಾಡುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಕಡ್ಡಾಯ ಯುಪಿ ಉತ್ತಮ ನಿರ್ಧಾರ, ಮಧ್ಯ ಪ್ರದೇಶದಲ್ಲೂ ಇದೇ ಕ್ರಮ ಎಂದ ಸಚಿವ ಉತ್ತರಪ್ರದೇಶದ ಮಸೀದಿಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ  

ಭೋಪಾಲ್‌(ಮೇ.14): ಉತ್ತರ ಪ್ರದೇಶದ ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಿದ ಬೆನ್ನಲ್ಲೇ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ ಮಿಶ್ರಾ ಕೂಡಾ ಇದೇ ಮಾದರಿಯ ಕ್ರಮವನ್ನು ತಮ್ಮ ರಾಜ್ಯದಲ್ಲೂ ಅಳವಡಿಸುವುದಾಗಿ ಶುಕ್ರವಾರ ಹೇಳಿದ್ದಾರೆ. ‘ಉತ್ತರ ಪ್ರದೇಶ ಸರ್ಕಾರವು ಒಳ್ಳೆಯ ನಿರ್ಧಾರ ಕೈಗೊಂಡಿದೆ. ರಾಷ್ಟ್ರಗೀತೆ ಹಾಡುವುದನ್ನು ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಕಡ್ಡಾಯಗೊಳಿಸಬೇಕು. ರಾಜ್ಯದಲ್ಲೂ ಈ ಕ್ರಮ ಜಾರಿ ಬಗ್ಗೆ ಚಿಂತಿಸಲಾಗುವುದು’ ಎಂದು ಮಿಶ್ರಾ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ವಿಷ್ಣು ದತ್ತ ಶರ್ಮಾ ‘ದೇಶದ ಎಲ್ಲ ಮೂಲೆಗಳಲ್ಲು ರಾಷ್ಟ್ರ ಗೀತೆ, ಭಾರತ ಮಾತಾ ಕೀ ಜೈ ಘೋಷಣೆಗಳು ಮೊಳಗಬೇಕು’ ಎಂದಿದ್ದಾರೆ.

ಉತ್ತರಪ್ರದೇಶದ ಮಸೀದಿಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ
ಉತ್ತರಪ್ರದೇಶದ ಎಲ್ಲ ಮಸೀದಿಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಹಾಡುವುದನ್ನು ಗುರುವಾರದಿಂದಲೇ ಜಾರಿಗೆ ಬರುವಂತೆ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಉತ್ತರಪ್ರದೇಶದ ಮದರಸಾ ಶಿಕ್ಷಣ ಮಂಡಳಿಯ ನೋಂದಣಾಧಿಕಾರಿ ಎಸ್‌.ಎನ್‌. ಪಾಂಡೆ ಅವರು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಗಳಿಗೆ ಮೇ 9ರಂದು ಆದೇಶ ಹೊರಡಿಸಿದ್ದು, ಅದು ಗುರುವಾರದಿಂದ ಜಾರಿಗೆ ಬಂದಿದೆ.

ಮದರಸಾಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯ, ಯೋಗಿ ನಾಡಿನಲ್ಲಿ ಹೊಸ ನಿಯಮ!

ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸುವ ಬಗ್ಗೆ ಮಾ.24ರಂದು ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು. ಮದರಸಾಗಳಲ್ಲಿ ಮೇ 12ರಿಂದ ತರಗತಿಗಳು ಆರಂಭವಾಗಿದ್ದು, ಆ ಪ್ರಕಾರ ಗುರುವಾರದಿಂದಲೇ ರಾಷ್ಟ್ರಗೀತೆ ಕಡ್ಡಾಯವಾಗಿದೆ.

ಈವರೆಗೆ ಮದರಸಾಗಳಲ್ಲಿ ಹಮ್‌್ದ ಹಾಗೂ ಸಲಾಂ ಪ್ರಾರ್ಥನೆಗಳನ್ನು ತರಗತಿ ಆರಂಭಕ್ಕೂ ಮುನ್ನ ಮಾಡಲಾಗುತ್ತಿತ್ತು. ಕೆಲವು ಕಡೆ ರಾಷ್ಟ್ರಗೀತೆಯನ್ನೂ ಹಾಡಲಾಗುತ್ತಿತ್ತು. ಆದರೆ ಅದು ಕಡ್ಡಾಯವಾಗಿರಲಿಲ್ಲ. ಈಗ ಕಡ್ಡಾಯವಾಗಿದೆ ಎಂದು ಮದರಿಸ್‌ ಅರೇಬಿಯಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ದಿವಾನ್‌ ಸಾಹಬ್‌ ಜಮಾನ್‌ ಖಾನ್‌ ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ 16,461 ಮದರಸಾಗಳಿದ್ದು, ಆ ಪೈಕಿ 560 ಮದರಸಾಗಳು ಸರ್ಕಾರದ ಅನುದಾನ ಪಡೆಯುತ್ತಿವೆ.

ಮದರಸಾದಲ್ಲಿ ಹೊಸ ಶಿಕ್ಷಣ ಪದ್ಧತಿ ಜಾರಿ ಚಿಂತನೆ
ಮದರಸಾಗಳಲ್ಲಿ ಹೊಸ ಶಿಕ್ಷಣ ಪದ್ಧತಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ.ಅವರು ಶನಿವಾರ ಇಲ್ಲಿನ ಅಶೋಕೆಯಲ್ಲಿರುವ ವಿಷ್ಣುಗುಪ್ತ ವಿದ್ಯಾಪೀಠ ವಿದ್ಯಾಲಯಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಜ್‌ ಮಹಲ್ ವಿವಾದಕ್ಕೆ ಸ್ಫೋಟಕ ತಿರುವು: ನಮ್ಮ ಜಮೀನು, ದಾಖಲೆ ಕೊಡಲು ಸಿದ್ಧ ಎಂದ ಬಿಜೆಪಿ ಸಂಸದೆ!

ಅಲ್ಪಸಂಖ್ಯಾತ ಮಕ್ಕಳು ಇವತ್ತಿನ ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು. ಅವರು ಸಹ ನಮ್ಮ ಎಲ್ಲ ಮಕ್ಕಳಂತೆ ಈ ಶಿಕ್ಷಣ ಪದ್ಧತಿಗೆ ಬರಬೇಕು ಎಂಬ ಉದ್ದೇಶದಿಂದ ಮುಂದಿನ ದಿನದಲ್ಲಿ ಈ ಬಗ್ಗೆ ಚಿಂತನೆ ನಡೆಸಲಿದ್ದೇವೆ ಎಂದರು.ಮದರಸಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಸರ್ಕಾರಿ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇಂದಿನ ಪ್ರಪಂಚದಲ್ಲಿ ಬದುಕುವುದಾದರೆ ಈ ಶಿಕ್ಷಣ ಪದ್ಧತಿ ಬೇಕು. ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಒಂದಷ್ಟುಅವಕಾಶ ಮಾಡಿಕೊಟ್ಟಿದ್ದೇವೆ ಎಂದರು.

ಹಿಜಾಬ್‌ ತೀರ್ಪಿನಿಂದ ಶಾಲಾ ಕಾಲೇಜಿಗೆ ಬಾರದೇ ಇರುವವರ ಕುರಿತು ಮಾತನಾಡಿದ ಅವರು, ಶಾಲೆಗೆ ಬರಲೇ ಬೇಕು ಎಂದು ಅವರ ಅಧಿಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಶೇ.99ರಷ್ಟುವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಶೇ.1ರಷ್ಟುವಿದ್ಯಾರ್ಥಿಗಳು ಮಾತ್ರ ಬರುತ್ತಿಲ್ಲ. ಅವರನ್ನು ಶಾಲೆಗೆ ಕರೆತರುವ ಪ್ರಯತ್ನ ಮಾಡುತ್ತೇವೆ. ಹಾಗೆಂದು ಎಳೆದುಕೊಂಡು ಬರುವ ಪ್ರಯತ್ನ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!