ರಾಮನವಮಿ ದಿನವೇ ದೇಗುಲದಲ್ಲಿ ದುರಂತ: ಬಾವಿ ಚಾವಣಿ ಕುಸಿದು 8 ಭಕ್ತರ ದುರ್ಮರಣ

Published : Mar 30, 2023, 04:32 PM ISTUpdated : Mar 30, 2023, 04:36 PM IST
ರಾಮನವಮಿ ದಿನವೇ ದೇಗುಲದಲ್ಲಿ ದುರಂತ: ಬಾವಿ ಚಾವಣಿ ಕುಸಿದು 8 ಭಕ್ತರ ದುರ್ಮರಣ

ಸಾರಾಂಶ

ಮಧ್ಯಪ್ರದೇಶದ ಇಂದೋರ್‌ನಲ್ಲಿ ರಾಮನವಮಿ ದಿನವೇ ದುರಂತ ನಡೆದಿದೆ. ಬಾವಿ ಮೇಲಿನ ತಡೆಹಾಸು( ತಡೆಗೋಡೆ, ಚಾವಣಿ) ಕುಸಿದು ಬಿದ್ದು, ದೇಗುಲದಲ್ಲಿದ್ದ 25ಕ್ಕೂ ಹೆಚ್ಚು ಜನರು ದಿಢೀರನೇ ಬಾವಿಗೆ ಬಿದ್ದಿದ್ದಾರೆ. ಪರಿಣಾಮ  8 ಜನ ಈ ದುರಂತದಲ್ಲಿ ಪ್ರಾಣ ಬಿಟ್ಟಿದ್ದಾರೆ.

ಇಂದೋರ್‌: ಮಧ್ಯಪ್ರದೇಶದ ಇಂದೋರ್‌ನಲ್ಲಿ ರಾಮನವಮಿ ದಿನವೇ ದುರಂತ ನಡೆದಿದೆ. ಬಾವಿ ಮೇಲಿನ ತಡೆಹಾಸು( ತಡೆಗೋಡೆ, ಚಾವಣಿ) ಕುಸಿದು ಬಿದ್ದು, ದೇಗುಲದಲ್ಲಿದ್ದ 25ಕ್ಕೂ ಹೆಚ್ಚು ಜನರು ದಿಢೀರನೇ ಬಾವಿಗೆ ಬಿದ್ದಿದ್ದಾರೆ. ಬಾವಿಗೆ ಬಿದ್ದ ಹಲವರನ್ನು ಈಗಾಗಲೇ ರಕ್ಷಿಸಲಾಗಿದ್ದು, 8 ಜನ ಈ ದುರಂತದಲ್ಲಿ ಪ್ರಾಣ ಬಿಟ್ಟಿದ್ದಾರೆ. ಇಂದು ರಾಮನವಮಿ ಹಿನ್ನೆಲೆಯಲ್ಲಿ ದೇಗುಲದಲ್ಲಿ ವಿಶೇಷ ಕಾರ್ಯಕ್ರಮವಿತ್ತು. ಹೀಗಾಗಿ ನೂರಾರು ರಾಮಭಕ್ತರು ಇಲ್ಲಿ ಸೇರಿದ್ದರು. ಈ ವೇಳೆ ದೇಗುಲದೊಳಗಿದ್ದ ಬಾವಿಯ ಚಾವಣಿ ದಿಢೀರ್ ಕುಸಿದಿದ್ದು, 25ಕ್ಕೂ ಹೆಚ್ಚು ಜನ ಬಾವಿಗೆ ಬಿದ್ದಿದ್ದಾರೆ. 

ಇಂದೋರ್‌ನ ಶ್ರೀ ಬಾಲೇಶ್ವರ್‌ ಮಹಾದೇವ್ ಜುಲೇಲಾಲ್‌ ದೇಗುಲದಲ್ಲಿ ಈ ಘಟನೆ ನಡೆದಿದ್ದು, 25ಕ್ಕೂ ಹೆಚ್ಚು ಜನ ಬಾವಿಯಲ್ಲಿ ಸಿಲುಕಿಕೊಂಡಿದ್ದಾರೆ. ಬಾವಿಗೆ ಬಿದ್ದವರನ್ನು ಮೇಲೆತ್ತುವ ಕಾರ್ಯ ಭರದಿಂದ ಸಾಗಿದೆ.  ಮಧ್ಯಾಹ್ನ 12 ಗಂಟೆ ವೇಳೆ ಘಟನೆ ನಡೆದಿದ್ದು,  ರಾಮನವಮಿ ಅಂಗವಾಗಿ ಪಟೇಲ್ ನಗರದ  ಈ ದೇಗುಲದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಹೀಗಾಗಿ ಅನೇಕ ಭಕ್ತರು ದೇಗುಲದಲ್ಲಿ ಸೇರಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಬಾವಿಗೆ ಬಿದ್ದವರ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು  ಪೊಲೀಸರು ತಿಳಿಸಿದ್ದಾರೆ. 

ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಹಾಗೂ ಇಂದೋರ್ ಪೊಲೀಸ್ ಕಮೀಷನರ್‌ ಭೇಟಿ ನೀಡಿದ್ದು, ಪೊಲೀಸರು ಹಗ್ಗಗಳನ್ನು ಬಳಸಿ   ಜನರನ್ನು ಮೇಲೆತ್ತುತ್ತಿದ್ದಾರೆ.  ಹಲವರು ಒಳಗೆ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಧ್ಯ ಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು,  ಇಂದೋರ್‌ ಜಿಲ್ಲಾಧಿಕಾರಿ ಹಾಗೂ ಕಮೀಷನರ್‌ಗೆ ರಕ್ಷಣಾ ಕಾರ್ಯ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.

ತಡೆಗೋಡೆ ಕುಸಿದು ಬಾವಿಗೆ ಬಿದ್ದ 25ಕ್ಕೂ ಹೆಚ್ಚು ಜನ: ರಾಮನವಮಿ ಆಚರಣೆ ವೇಳೆ ಘಟನೆ

ಇಂದೋರ್‌ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ಭಕ್ತರ ರಕ್ಷಣೆಗೆ ಎಲ್ಲಾ ಪ್ರಯತ್ನ ನಡೆಯುತ್ತಿದೆ.  ಕೆಲವರನ್ನು ಈಗಾಗಲೇ ರಕ್ಷಿಸಲಾಗಿದೆ ಎಂದು ಮಧ್ಯಪ್ರದೇಶ ಸಿಎಂ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.  ಬಾಲೇಶ್ವರ್‌ ಮಹೇದೇವ್‌ ಝುಲೇಲಾಲ್ ದೇಗುಲದ ಬಾವಿಯಿಂದ ಈಗಾಗಲೇ 8 ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.  ಎಸ್‌ಡಿಆರ್‌ಎಫ್‌ ತಂಡವೂ ಸ್ಥಳದಲ್ಲಿದ್ದು, ಅನೇಕ ಆಂಬುಲೆನ್ಸ್‌ಗಳನ್ನು ಕೂಡ ಸ್ಥಳಕ್ಕೆ ಕರೆಸಲಾಗಿದೆ. ಅಲ್ಲದೇ ಅಲ್ಲಿದ್ದ ಬಹುತೇಕ ಮಂದಿಯನ್ನು ಸ್ಥಳಾಂತರ ಮಾಡಲಾಗಿದ್ದು,  ದೇವಸ್ಥಾನಕ್ಕೆ ಬರುವವರಿಗೆ ನಿರ್ಬಂಧ ಹೇರಲಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live:ಇಂಡಿಗೋ ಏರ್‌ಲೈನ್ಸ್ ಸಮಸ್ಯೆ ತನಿಖೆಗೆ 4 ಸದಸ್ಯರ ತಂಡ ರಚಿಸಿದ ಕೇಂದ್ರ ಸರ್ಕಾರ
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌