ಮ.ಪ್ರ.: ಕಾಫ್‌ ಸಿರಪ್‌ ಸೇವಿಸಿ ಮತ್ತಿಬ್ಬರು ಮಕ್ಕಳು ಸಾವು

Kannadaprabha News   | Kannada Prabha
Published : Oct 08, 2025, 03:59 AM IST
Coldrif Syrup MP Ban

ಸಾರಾಂಶ

ಮಧ್ಯಪ್ರದೇಶದ ಛಿಂದ್ವಾಡದಲ್ಲಿ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.

ಛಿಂದ್ವಾಡ : ಮಧ್ಯಪ್ರದೇಶದ ಛಿಂದ್ವಾಡದಲ್ಲಿ ಕಲುಷಿತ ಕೆಮ್ಮಿನ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಇದಕ್ಕೂ ಮೊದಲು, ಚಿಂದ್ವಾರದ 14 ಮಕ್ಕಳು ಕೆಮ್ಮಿನ ಸಿರಪ್ ಕೋಲ್ಡ್ರಿಫ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಸರ್ಕಾರ ದೃಢಪಡಿಸಿತ್ತು, ಅದರ ಮಾದರಿಗಳಲ್ಲಿ ವಿಷಕಾರಿ ಅಂಶ ಇರುವುದು ಕಂಡುಬಂದಿತ್ತು. ಛಿಂದ್ವಾಡದ ಇನ್ನೂ 6 ಮಕ್ಕಳು ನಾಗ್ಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ ಐದು ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ಹೆಚ್ಚುವರಿ ಕಲೆಕ್ಟರ್ ತಿಳಿಸಿದ್ದಾರೆ.

ಖರ್ಚು ಸರ್ಕಾರಕ್ಕೇ ಬಳಕೆ:ದೋಷಪೂರಿತ ಸಿರಪ್‌ ಸೇವನೆಯಿಂದಾಗಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ.

ಉತ್ಪಾದಕ ಕಂಪನಿಗೆ ನೋಟಿಸ್‌:ಅತ್ತ ಕೋಲ್ಡ್ರಿಫ್‌ನಲ್ಲಿ ನರಸಂಬಂಧಿ ಕಾಯಿಲೆಗೆ ಕಾರಣವಾಗಬಹುದಾದ ಅಂಶ ಕಂಡುಬಂದದ್ದರಿಂದ, ಅದರ ಉತ್ಪಾದಕ ಶ್ರೀಸನ್ ಫಾರ್ಮಾಸುಟಿಕಲ್ಸ್‌ ಕಂಪನಿಗೆ ತಮಿಳುನಾಡು ಸಕಾರ ಶೋಕಾಸ್‌ ನೋಟಿಸ್‌ ನೀಡಿದೆ.

ಪಂಜಾಬಲ್ಲೂ ನಿಷೇಧ:

ಕೋಲ್ಡ್ರಿಫ್‌ ಕೆಮ್ಮಿನ ಸಿರಪ್‌ನಿಂದ ಸಾವುಗಳು ಸಂಭವಿಸುತ್ತಿರುವ ಪರಿಣಾಮ ಅದರ ಮಾರಾಟ, ವಿತರಣೆ ಮತ್ತು ಬಳಕೆಯನ್ನು ಪಂಜಾಬ್ ಸರ್ಕಾರ ನಿಷೇಧಿಸಿದೆ. ಇದರೊಂದಿಗೆ ಪಂಜಾಬ್‌ ಕೋಲ್ಡ್ರಿಫ್‌ ನಿಷೇಧಿಧಿಸಿದ 6ನೇ ರಾಜ್ಯವಾಗಿ ಹೊರಹೊಮ್ಮಿದೆ

ಸುಪ್ರೀಂಗೆ ಅರ್ಜಿ:

ಸಿರಪ್‌ ಸೇವಿಸಿ ಮಕ್ಕಳು ಮೃತರಾದ ಪ್ರಕರಣದ ಸಿಬಿಐ ತನಿಖೆಗೆ ಆಗ್ರಹಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದೆವ್ವಗಳ ಬಗ್ಗೆ ಪಿಎಚ್‌ಡಿ ಮಾಡಲಿದ್ದಾರೆ ಬಾಗೇಶ್ವರ ಬಾಬಾ ಧೀರೇಂದ್ರ ಶಾಸ್ತ್ರಿ! ಘೋಸ್ಟ್ ಬಗ್ಗೆ ತಿಳಿಯಲು ನಿಮಗೆ ಆಸಕ್ತಿ ಇದೆಯೇ?
ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು!