
ಬೋಪಾಲ್(ಅ.12): 45 ವರ್ಷದ ಮಹಿಳೆಯೊಬ್ಬಳು 16ನೇ ಮಗುವಿಗೆ ಜನ್ಮ ನೀಡುವ ವೇಳೆ ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ನಡೆದಿದೆ. ದುರಾದೃಷ್ಟವಶಾತ್ ತಾಯಿ ಮೃತಪಟ್ಟ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಕೂಡಾ ಸಾವನ್ನಪ್ಪಿದೆ.
ಮೃತ ಮಹಿಳೆಯನ್ನು ದಾಮೋಹ್ ಜಿಲ್ಲೆಯ ಸುಖ್ರಾನಿ ಅಹಿರ್ವಾರ್ ಶನಿವಾರ ಪಡಾಝಿರ್‌ನಲ್ಲಿರುವ ತನ್ನ ಮನೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ಆದರೆ ಹೆರಿಗೆ ಬಳಿಕ ತಾಯಿ ಹಾಗೂ ಮಗು ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತೆಂದು ಆಶಾ ಕಾರ್ಯಕರ್ತೆ ಕಲ್ಲೋ ಬಾಯ್ ವಿಶ್ವಕರ್ಮ ತಿಳಿಸಿದ್ದಾರೆ.
ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮಗುವನ್ನು ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದೆ. ದುರ್ದೈವವಶಾತ್ ತಾಯಿ ಮಗು ಇಬ್ಬರೂ ಸಾವನ್ನಪ್ಪಿದ್ದಾರೆ.
ಇನ್ನು ಈ ಮಹಿಳೆ ಈ ಹಿಂದೆ 15 ಮಕ್ಕಳಿಗೆ ಜನ್ಮ ನೀಡಿದ್ದು, ಈ ಪೈಕಿ 7 ಮಕ್ಕಳು ಸಾವನ್ನಪ್ಪಿವೆ ಎಂದು ಕಲ್ಲೋ ಬಾಯ್ ತಿಳಿಸಿದ್ದಾರೆ,.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ