ಕರ್ನಾಟಕ ಜತೆ ಮಹದಾಯಿ ಮಾತುಕತೆ ಇಲ್ಲ: ಗೋವಾ!

Published : Nov 28, 2020, 07:49 AM ISTUpdated : Nov 28, 2020, 08:18 AM IST
ಕರ್ನಾಟಕ ಜತೆ ಮಹದಾಯಿ ಮಾತುಕತೆ ಇಲ್ಲ: ಗೋವಾ!

ಸಾರಾಂಶ

ಕರ್ನಾಟಕ ಜತೆ ಮಹದಾಯಿ ಮಾತುಕತೆ ಇಲ್ಲ: ಗೋವಾ| ಕೋರ್ಟ್‌ನಲ್ಲೇ ವಿಷಯ ಇತ್ಯರ್ಥ ಆಗಬೇಕು

ಪಣಜಿ(ನ.28): ಕರ್ನಾಟಕದ ಜತೆಗಿನ ಮಹದಾಯಿ ನದಿ ವಿವಾದವನ್ನು ಕೋರ್ಟ್‌ ಹೊರಗೆ ಇತ್ಯರ್ಥಪಡಿಸಿಕೊಳ್ಳುವ ಸಾಧ್ಯತೆಯನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ತಳ್ಳಿಹಾಕಿದ್ದಾರೆ.

ಶುಕ್ರವಾರ ಪತ್ರಕರ್ತರ ಜತೆ ಮಾತನಾಡಿದ ಸಾವಂತ್‌, ‘ಕೋರ್ಟ್‌ ಹೊರಗೆ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ನಾವು ಸಿದ್ಧರಿಲ್ಲ. ನಮ್ಮ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿವೆ. ನಾವು ಅಲ್ಲಿಯೇ ಹೋರಾಡುತ್ತೇವೆ’ ಎಂದರು.

ಇತ್ತೀಚೆಗೆ ದಿಲ್ಲಿಯಲ್ಲಿನ ಕರ್ನಾಟಕ ಪ್ರತಿನಿಧಿ ಶಂಕರಗೌಡ ಪಾಟೀಲ ಅವರು ಗೋವಾಗೆ ಬಂದಿದ್ದರು. ಈ ವೇಳೆ, ‘ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಗೋವಾ ಮುಖ್ಯಮಂತ್ರಿ ಸಾವಂತ್‌ ಅವರು ಮಾತುಕತೆ ಮೂಲಕ ವಿವಾದ ಇತ್ಯರ್ಥಪಡಿಸಿಕೊಳ್ಳಬೇಕು’ ಎಂದಿದ್ದರು. ಅವರು ಸಾವಂತ್‌ ಅವರನ್ನು ಭೇಟಿಯಾಗಿದ್ದಾರೆ ಎಂದೂ ಹೇಳಲಾಗಿತ್ತು. ಈ ಬಗ್ಗೆ ಪತ್ರಕರ್ತರು ಪ್ರಶ್ನಸಿದಾಗ ಈ ಮೇಲಿನಂತೆ ಸಾವಂತ್‌ ಉತ್ತರಿಸಿದರು.

‘ನದಿ ತಿರುವು ಪಡೆದು ನೀರು ತಡೆಹಿಡಿದಿರುವ ಕರ್ನಾಟಕವು ಗೋವಾದತ್ತ ಪುನಃ ನೀರು ತಿರುಗಿಸಬೇಕು ಎಂಬುದು ನಮ್ಮ ವಾದ. ಮಹದಾಯಿ ನೀರಿನ ಹರಿವು ನಮ್ಮತ್ತ ಇಳಿದಿದೆ ಎಂದು ನನಗೆ ಅರಿವಿದೆ’ ಎಂದ ಸಾವಂತ್‌, ‘ಇತ್ತೀಚೆಗೆ ಕರ್ನಾಟಕದ ಬಿಜೆಪಿ ನಾಯಕರಾದ ರಾಜ್ಯದ ಬಿಜೆಪಿ ಉಸ್ತುವಾರಿ ಸಿ.ಟಿ. ರವಿ ಭೇಟಿ ಮಾಡಿದಾಗ, ಕರ್ನಾಟಕವು ನದಿ ತಿರುಗಿಸಿದೆ ಎಂದು ಹೇಳಿದ್ದೇನೆ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?