ಗುಂಡಿ ಬಿದ್ದ ರಸ್ತೆಯಿಂದ ಶಾಲಾ ವಾಹನ ಅಪಘಾತ, ಸೇತುವೆಯಿಂದ ಕೆಳಕ್ಕೆ ಬಿದ್ದ 10 ಮಕ್ಕಳಿಗೆ ಗಾಯ

Published : Oct 16, 2025, 05:28 PM IST
ambulance

ಸಾರಾಂಶ

ಗುಂಡಿ ಬಿದ್ದ ರಸ್ತೆಯಿಂದ ಶಾಲಾ ವಾಹನ ಅಪಘಾತ, ಸೇತುವೆಯಿಂದ ಕೆಳಕ್ಕೆ ಬಿದ್ದ 10 ಮಕ್ಕಳಿಗೆ ಗಾಯ, ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೋಷಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ಭಂದಾರ (ಅ.16) ಗುಂಡಿ ತಪ್ಪಿಸಲು ಹೋದ ಶಾಲಾ ಮಕ್ಕಳ ವಾಹನ ಸೇತುವೆಯಿಂದ ಕೆಳಕ್ಕೆ ಉರುಳಿದ ಘಟನೆ ಮಹಾರಾಷ್ಟ್ರದ ಭಂದಾರ ಜಿಲ್ಲೆಯಲ್ಲಿ ನಡೆದಿದೆ. ಪ್ರಾಥಮಿಕ ಶಾಲೆಯ ಮಕ್ಕಳನ್ನು ಶಾಲೆಯಿಂದ ಮರಳಿ ಮನೆಗೆ ಕರೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ಸಣ್ಣ ಸೇತುವೆಯಿಂದ ಕಾರು ಕೆಳಕ್ಕೆ ಉರುಳಿದೆ. ಇದರ ಪರಿಣಾಮ, 10 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡ ಮಕ್ಕಳನ್ನು ಭಂದಾರ ಜಿಲ್ಲಾಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲಾ ಮಕ್ಕಳ ಓಮ್ಮಿ ವಾಹನ ಅಪಘಾತ

ಭಂದಾರ ಜಿಲ್ಲೆಯ ಪ್ರಾಥಮಿಕ ಶಾಲೆ ಮಕ್ಕಳ ಖಾಸಗಿ ಮಾರುತಿ ಒಮ್ನಿ ವಾಹನ ಅಪಘಾತಕ್ಕೀಡಾಗಿದೆ. ಸಣ್ಣ ಒಮ್ನಿ ಕಾರಿನಲ್ಲಿ 10 ವಿದ್ಯಾರ್ಥಿಗಳನ್ನು ತುಂಬಿಕೊಂಡು ವೇಗವಾಗಿ ಬರುತ್ತಿದ್ದ ವಾಹನ ಸೇತುವೆ ಆಗಮಿಸುತ್ತಿದ್ದಂತೆ ರಸ್ತೆ ಗಂಡಿ ಕಾಣಿಸಿದೆ. ಗುಂಡಿ ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಶಾಲಾ ವಾಹನ ನೇರವಾಗಿ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ಶಾಲಾ ವಾಹನದಲ್ಲಿದ್ದ ಎಲ್ಲಾ 10 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಆಸ್ಪತ್ರಗೆ ದೌಡಾಯಿಸಿದ ಪೋಷಕರು

ಶಾಲಾ ವಾಹನ ಅಪಘಾತ ಮಾಹಿತಿ ತಿಳಿಯುತ್ತಿದ್ದಂತೆ ಮಕ್ಕಳ ಫೋಷಕರು ಗಾಯಗೊಂಡಿದ್ದಾರೆ. ಮಕ್ಕಳ ಪೋಷಕರು ಜಿಲ್ಲಾಸ್ಪತ್ರೆಗೆ ದೌಡಾಯಿಸಿದ್ದಾರೆ. ಗಂಭೀರ ಗಾಯವಿಲ್ಲದಿದ್ದರೂ, 10 ಮಕ್ಕಳಿಗೂ ಗಾಯವಾಗಿದೆ. ಮಕ್ಕಳ ಚೀರಾಟ, ನೋವು ನೋಡಿ ಪೋಷಕರು ಕಂಗಾಲಾಗಿದ್ದಾರೆ. ವೈದ್ಯರ ತಂಡ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದೆ.

ಸ್ಥಳೀಯರು, ಪೋಷಕರ ಆಕ್ರೋಶ

ಭಂದಾರ ಜಿಲ್ಲೆಯಲ್ಲಿ ಅತೀ ಹೆಚ್ಚು ಕೆರೆಗಳಿವೆ. ಹೀಗಾಗಿ ಈ ಜಿಲ್ಲೆಯನ್ನು ಮಹಾರಾಷ್ಟ್ರದ ಕೆರೆ ಜಿಲ್ಲೆ ಎಂದು ಕರೆಯುತ್ತಾರೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ಈ ಜಿಲ್ಲೆಯನ್ನು ಅಧಿಕಾರಿಗಳು ನಿರ್ಲಕ್ಷ್ಯಸಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸರ್ಕಾರ ಹಣ ಬಿಡುಗಡೆ ಮಾಡಿದರೂ ಸ್ಥಳೀಯ ಜಿಲ್ಲಾಡಳಿತ, ಪಂಚಾಯಿತಿ ಇಲ್ಲಿ ರಸ್ತೆ ದುರಸ್ತಿ ಬಗ್ಗೆ ಆಸಕ್ತಿ ವಹಿಸಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಇತ್ತ ಪೊಷಕರು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಸ್ತೆಗಳ ಗುಂಡಿ ಪರಿಣಾಮ ಈ ಅವಘಡ ಸಂಭವಿಸಿದೆ. ಇದಕ್ಕೆ ಹೊಣೆ ಯಾರು? ಮಕ್ಕಳು ತೀವ್ರ ನರಳಾಡುತ್ತಿದ್ದಾರೆ. ಇದು ಕಾಣಿಸುತ್ತಿಲ್ಲವೇ ಎಂದು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ