
ಮುಂಬೈ (ಜ.10): ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯೇ ನಿಜವಾದ ಶಿವಸೇನೆ ಪಕ್ಷ ಎಂದು ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಬುಧವಾರ ಆದೇಶ ನೀಡಿದ್ದಾರೆ. ಅದರೊಂದಿಗೆ ಮಹಾರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಿದ್ದು, ಬಾಳಾ ಠಾಕ್ರೆ ಸ್ಥಾಪಿಸಿದ್ದ ಶಿವಸೇನೆ ಪಕ್ಷ ಇಂದು ಅಧಿಕೃತವಾಗಿ ಠಾಕ್ರೆ ಕುಟುಂಬದ ಮುಷ್ಠಿಯಿಂದ ಹೊರಬಂದಂತಾಗಿದೆ.ಮಹಾರಾಷ್ಟ್ರ ರಾಜಕಾರಣದಲ್ಲಿ ಶಿವಸೇನೆ ಇಬ್ಬಾಗವಾಗಿದ್ದೇ ರೋಚಕ ಕಥೆ. ಎನ್‌ಸಿಪಿ, ಕಾಂಗ್ರೆಸ್ ಜೊತೆ ಸೇರಿ ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ಅವರನ್ನು ಬಿಟ್ಟು ಹೊರಬಂದಿದ್ದ ಏಕನಾಥ್ ಶಿಂಧೆ ಬಣ, ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತ್ತು. ಇದರಲ್ಲಿ ಏಕನಾಥ್ ಶಿಂಧೆ ಸಿಎಂ ಆಗಿದ್ದರು. ಅದಾದ ಬಳಿಕ ಶಿವಸೇನೆ ಹೆಸರು ಹಾಗೂ ಚಿಹ್ನೆಯ ನಡುವೆ ಯುದ್ಧ ಆರಂಭವಾಗಿತ್ತು. ಪಕ್ಷ ಯಾರದು ಎನ್ನುವುದನ್ನು ನಿರ್ಧಾರ ಮಾಡಲು ಸುಪ್ರೀಂ ಕೋರ್ಟ್ ಮೊರೆ ಹೋಗಲಾಗಿತ್ತು.
'ಎರಡೂ ಪಕ್ಷಗಳು (ಶಿವಸೇನೆಯ ಎರಡು ಬಣಗಳು) ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಪಕ್ಷದ ಸಂವಿಧಾನದ ಬಗ್ಗೆ ಯಾವುದೇ ಒಮ್ಮತವಿಲ್ಲ. ನಾಯಕತ್ವ ರಚನೆಯ ಬಗ್ಗೆ ಎರಡು ಪಕ್ಷಗಳು ವಿಭಿನ್ನ ದೃಷ್ಟಿಕೋನಗಳನ್ನು ಹೊಂದಿವೆ. ಇಲ್ಲಿನ ಏಕೈಕ ಅಂಶವೆಂದರೆ ಅದು ಬಹುಮತ. ಯಾಕೆಂದರೆ, ಅದು ಶಾಸಕಾಂಗ ಪಕ್ಷ. ವಿವಾದದ ಮೊದಲು ಅಸ್ತಿತ್ವದಲ್ಲಿದ್ದ ನಾಯಕತ್ವ ರಚನೆಯನ್ನು ಗಣನೆಗೆ ತೆಗೆದುಕೊಳ್ಳಬೇಕಾದ ಸಂಬಂಧಿತ ಪಕ್ಷದ ಸಂವಿಧಾನವನ್ನು ನಾನು ನಿರ್ಧರಿಸಬೇಕಾಗುತ್ತದೆ' ಎಂದು ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ಮಹಾರಾಷ್ಟ್ರ ಅಸೆಂಬ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಹೇಳಿದ್ದಾರೆ.
ಶಿವಸೇನೆ vs ಶಿವಸೇನೆ ತೀರ್ಪು ಇಂದು ಪ್ರಕಟ: ಏನಾಗಲಿದೆ ಮಹಾ ಸರ್ಕಾರದ ಭವಿಷ್ಯ
ಶಿವಸೇನೆಯ 2018 ರ ತಿದ್ದುಪಡಿ ಸಂವಿಧಾನವು ಭಾರತದ ಚುನಾವಣಾ ಆಯೋಗದ ದಾಖಲೆಗಳಲ್ಲಿ ಇಲ್ಲದಿರುವುದರಿಂದ ಅದನ್ನು ಮಾನ್ಯವೆಂದು ಪರಿಗಣಿಸಲಾಗುವುದಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ, ಪಕ್ಷದ ಸಂವಿಧಾನವು ಮಾನ್ಯವಾಗಿರುವ ಯಾವುದೇ ಅಂಶವನ್ನು ನಾನು ಪರಿಶೀಲಿಸಲು ಸಾಧ್ಯವಿಲ್ಲ. ದಾಖಲೆಗಳ ಪ್ರಕಾರ, ನಾನು 1999 ರ ಶಿವಸೇನೆಯ ನಿಯಮವನ್ನೇ ಮಾನ್ಯ ಸಂವಿಧಾನವಾಗಿ ಅವಲಂಬಿಸುತ್ತಿದ್ದೇನೆ ಎಂದು ಅವರು ಹೇಳಿದರು.
ಆಯೋಧ್ಯೆ ರಾಮ ಮಂದಿರಕ್ಕೆ 11 ಕೋಟಿ ರೂಪಾಯಿ ದೇಣಿಗೆ ನೀಡಿದ ಮಹಾರಾಷ್ಟ್ರ ಸಿಎಂ ಶಿಂದೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ