ಮಹಾರಾಷ್ಟ್ರ ಬಿಜೆಪಿ ಸರ್ಕಾರದ 1 ಗ್ಯಾರಂಟಿ ಸ್ಕೀಂಗೆ ‘ಅರ್ಧ ಕೊಕ್‌’!

Published : Mar 19, 2025, 07:55 AM ISTUpdated : Mar 19, 2025, 09:07 AM IST
ಮಹಾರಾಷ್ಟ್ರ ಬಿಜೆಪಿ ಸರ್ಕಾರದ 1 ಗ್ಯಾರಂಟಿ ಸ್ಕೀಂಗೆ ‘ಅರ್ಧ ಕೊಕ್‌’!

ಸಾರಾಂಶ

ಮಹಾರಾಷ್ಟ್ರ ಸರ್ಕಾರವು ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಯೋಜನೆಯನ್ನು ಬಡ ಮಹಿಳೆಯರಿಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ. ಯೋಜನೆಯಡಿ ಮಾಸಿಕ ನೆರವಿನ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾಪವನ್ನು ಸರ್ಕಾರ ಕೈಬಿಟ್ಟಿದೆ.

ಮುಂಬೈ (ಮಾ.19): ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆ ಮಾದರಿಯಲ್ಲಿ, ರಾಜ್ಯದ ಎಲ್ಲಾ ಮಹಿಳೆಯರ ಆರ್ಥಿಕ ಬಲವರ್ಧನೆಗೆ ಜಾರಿಗೊಳಿಸಲಾಗಿದ್ದ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್‌ ಯೋಜನೆಯನ್ನು ಬಡ ಮಹಿಳೆಯರಿಗಷ್ಟೇ ಸೀಮಿತಗೊಳಿಸಲು ಮಹಾರಾಷ್ಟ್ರದ ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ನಿರ್ಧರಿಸಿದೆ. ಇತ್ತೀಚೆಗೆ ಮಂಡನೆಯಾದ ಬಜೆಟ್‌ನಲ್ಲಿ ಯೋಜನೆಗೆ ಪ್ರಸಕ್ತ ವರ್ಷ ಅನುದಾನವನ್ನೂ ಕಡಿತ ಮಾಡಿತ್ತು, ಜೊತೆಗೆ ಚುನಾವಣೆಯಲ್ಲಿ ಘೋಷಿಸಿದ್ದಂತೆ ಮಾಸಿಕ ನೆರವಿನ ಪ್ರಮಾಣವನ್ನು 1500 ರು.ನಿಂದ 2100 ರು.ಗೆ ಹೆಚ್ಚಿಸುವ ಕುರಿತು ಯಾವುದೇ ಪ್ರಸ್ತಾಪವನ್ನೂ ಮಾಡಿರಲಿಲ್ಲ. ಅದರ ಬೆನ್ನಲ್ಲೇ ಇದೀಗ ಯೋಜನೆಯನ್ನು ಸೀಮಿತ ಸಂಖ್ಯೆಯ ಮಹಿಳೆಯರಿಷ್ಟೇ ಜಾರಿಗೊಳಿಸುವ ಘೋಷಣೆಯನ್ನು ಸರ್ಕಾರ ಮಾಡಿದೆ.

ಈ ಕುರಿತು ಸೋಮವಾರ ವಿಧಾನಸಭೆಯಲ್ಲಿ ಮಾತನಾಡಿರುವ ರಾಜ್ಯ ವಿತ್ತ ಸಚಿವ, ಡಿಸಿಎಂ ಅಜಿತ್‌ ಪವಾರ್‌, ‘ಕೆಲ ಸ್ಥಿತಿವಂತರೂ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಗಡಿಬಿಡಿ ಹಾಗೂ ಗೊಂದಲದಿಂದ ಹೀಗಾಗಿದೆ. ಲಡ್ಕಿ ಬಹಿನ್‌ ಯೋಜನೆಯು ಬಡ ಮಹಿಳೆಯರಿಗಷ್ಟೇ ಸೀಮಿತವಾಗಿದ್ದು, ಇದಕ್ಕೆ ತಕ್ಕ ಬದಲಾವಣೆ ಮಾಡುತ್ತೇವೆ’ ಎಂದರು.

ಇದೇ ವೇಳೆ, ಯೋಜನೆಯನ್ನು ಸಂಪೂರ್ಣವಾಗಿ ಕೈಬಿಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ ಅವರು, ‘ಈಗಾಗಲೇ ಯೋಜನೆಯಡಿ ಹಣ ಪಡೆದಿರುವವರು ಅದನ್ನು ಮರಳಿಸಬೇಕೆಂದಿಲ್ಲ. ನಾವು ಇದಕ್ಕಾಗಿ ಸಾಕಷ್ಟು ನಿಧಿ ಒದಗಿಸಲಿದ್ದು, ಬಡ ಸ್ತ್ರೀಯರು ಖಚಿತವಾಗಿ ಹಣ ಪಡೆಯುತ್ತಾರೆ’ ಎಂದು ಹೇಳಿದರು.

ಅಮರಾವತಿ ಮುಂಬೈ ರೈಲಿಗೆ ಟ್ರಕ್ ಡಿಕ್ಕಿ: ನಜ್ಜುಗುಜ್ಜಾದ ಟ್ರಕ್ ವೀಡಿಯೋ ವೈರಲ್

ಸಾಮಾಜಿಕ ನ್ಯಾಯ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯಿಂದ 10 ಸಾವಿರ ಕೋಟಿ ರು.ವನ್ನು ಲಡ್ಕಿ ಬಹಿನ್‌ ಯೋಜನೆಗೆ ಬಳಸಲಾಗುತ್ತಿದೆ ಎಂಬ ಆರೋಪಕ್ಕೆ ಉತ್ತರಿಸಿದ ಪವಾರ್‌, ವಾರ್ಷಿಕ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಶೇ.40ರಷ್ಟು ನಿಧಿಯನ್ನು ಯೋಜನೆಗೆ ಬಳಸುತ್ತಿರುವುದಾಗಿ ಧೃಡಪಡಿಸಿದರು. ಜೊತೆಗೆ, ‘ಲಡ್ಕಿ ಬಹಿನ್‌ಗೆ ಮಾಡಲಾದ ಖರ್ಚನ್ನು ಹೊರತುಪಡಿಸಿದರೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ನಿಧಿಯಲ್ಲಿ ಶೇ.18 ಹಾಗೂ 19ರಷ್ಟು ಏರಿಕೆಯಾಗಿದೆ’ ಎಂದರು.

ಮಹಾರಾಷ್ಟ್ರದಲ್ಲಿ ಆರ್‌ಎಸ್‌ಎಸ್‌ ನಾಯಕರ ನೇಮಿಸಿಲ್ವಾ: ಗ್ಯಾರಂಟಿ ಸಮಿತಿ ಪ್ರಶ್ನಿಸಿದ ಬಿಜೆಪಿಗೆ ಸಿದ್ದು ಟಾಂಗ್‌

ರಾಜ್ಯದ 21ರಿಂದ 65 ವಯಸ್ಸಿನ ಎಲ್ಲಾ ಮಹಿಳೆಯರಿಗೆ ಮಾಸಿಕ 1,500 ರು. ನೀಡುವ ಲಡ್ಕಿ ಬಹಿನ್‌ ಯೋಜನೆಯನ್ನು 2024ರ ಜುಲೈನಲ್ಲಿ ಆರಂಭಿಸಲಾಗಿತ್ತು. ಇದು ಮಹಾಯುತಿ ಮೈತ್ರಿಕೂಟದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..