ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ನ ಒಂದೊಂದೆ ವಿಕೆಟ್ ಕಳಚುತ್ತಿದೆ.ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕ, ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಪಕ್ಷ ತೊರೆದ ಆಘಾತದಿಂದ ಕಾಂಗ್ರೆಸ್ ಹೊರಬಂದಿಲ್ಲ.ಇಂದು ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆ ಸಾಧ್ಯತೆ ಇದೆ.
ಮುಂಬೈ(ಫೆ.13) ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿಯಲ್ಲಿ ಬಿರುಗಾಳಿ ಎದ್ದಿದ್ದರೆ, ಕಾಂಗ್ರೆಸ್‌ನಲ್ಲಿ ಸುಂಟರಗಾಳಿಯೇ ಎದ್ದಿದೆ. ಕಾಂಗ್ರೆಸ್‌ನ ಒಂದೊಂದೆ ಪ್ರಮುಖ ವಿಕೆಟ್ ಪತನಗೊಳ್ಳುತ್ತಿದೆ. ಇದೀಗ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕನಾಗಿ ಗುರುತಿಸಿಕೊಂಡಿದ್ದ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ನಿನ್ನ(ಫೆ.12) ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ನಾಯಕರ ಮನವೊಲಿಸುವ ಪ್ರಯತ್ನಗಳು ಫಲಿಸಲಿಲ್ಲ. ಕಾಂಗ್ರೆಸ್ ಪಕ್ಷ ತೊರೆದಿರುವ ಪ್ರಮುಖ ನಾಯಕ ಅಶೋಕ್ ಚವಾಣ್ ಇಂದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ.
ತಿಂಗಳುಗಳ ಅಂತರದಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಪಕ್ಷದ ಪ್ರಮುಖ ಮೂರು ವಿಕೆಟ್ ಪತನಗೊಂಡಿದೆ. ಮಿಲಿಂದ್ ದಿಯೋರಾ, ಬಾಬಾ ಸಿದ್ದಿಕಿ ಬಳಿಕ ಇದೀಗ ಅಶೋಕ್ ಚವಾಣ್. ಮೂವರು ಕಾಂಗ್ರೆಸ್ ಪಕ್ಷದ ಅತೀ ದೊಡ್ಡ ನಾಯಕರಾಗಿ ಗುರುತಿಸಿಕೊಂಡಿದ್ದವರು. ಈ ಪೈಕಿ ಅಶೋಕ್ ಚವಾಣ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ, ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಲೇ ಕಾಂಗ್ರೆಸ್‌ನ ಪ್ರಮುಖ ಶಕ್ತಿಯಾಗಿ ಗುರುತಿಸಿಕೊಂಡಿದ್ದ ಅಶೋಕ್ ಚವಾಣ್ ಇದೀಗ ಬಿಜೆಪಿ ಸೇರಿಕೊಳ್ಳುತ್ತಿದ್ದಾರೆ ಅನ್ನೋ ಮಾತುಗಳು ಬಲವಾಗಿ ಕೇಳಿಬರುತ್ತಿದೆ.
Arvind Kejriwal: ‘ಇಂಡಿಯಾ’ ಕೂಟಕ್ಕೆ ಆಘಾತ: ಏಕಾಂಗಿ ಸ್ಪರ್ಧೆ ಘೋಷಣೆ ಮಾಡಿದ ಅರವಿಂದ್ ಕೇಜ್ರಿವಾಲ್ !
ರಾಜೀನಾಮೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ್ದ ಅಶೋಕ್ ಚವಾಣ್, ಬಿಜೆಪಿ ಸೇರಿಕೊಳ್ಳುವ ಕುರಿತು ಪ್ರಶ್ನೆಗೆ ಉತ್ತರಿಸಿದ್ದರು. ಮುಂದಿನ 48 ಗಂಟೆಗಳಲ್ಲಿ ರಾಜಕೀಯ ನಿರ್ಧಾರ ತಿಳಿಸುವುದಾಗಿ ಅಶೋಕ್ ಚವಾನ್ ಹೇಳಿದ್ದರು. ಮೂಲಗಳ ಪ್ರಕಾರ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ.
भारतीय राष्ट्रीय काँग्रेस पक्षाचे कार्यसमिती सदस्य पद (Member of Congress Working Committee), महाराष्ट्र काँग्रेस विधीमंडळ पक्षाचे सदस्यत्व आणि भारतीय राष्ट्रीय काँग्रेस पक्षाच्या प्राथमिक सदस्यत्वाचा मी आज राजीनामा दिला आहे.
Today I have resigned from the post of Member of…
ಅಶೋಕ್ ಚವಾಣ್ ಬಿಜೆಪಿ ಸೇರ್ಪಡೆಗೆ ಮಹಾರಾಷ್ಟ್ರ ಬಿಜೆಪಿ ನಾಯಕ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಒಲವು ತೋರಿಲ್ಲ. ಕಾರಣ ಮಹಾರಾಷ್ಟ್ರ ಬಿಜೆಪಿಯಲ್ಲಿ ಕಾಂಗ್ರೆಸ್ ತೊರದು ಬಂದವರ ಪ್ರಾಬಲ್ಯ ಹೆಚ್ಚಾಗುತ್ತಿದೆ ಅನ್ನೋ ಕಾರಣ ಅನ್ನೋ ಮಾತುಗಳಿವೆ. ಆದರೆ ಮತ್ತೊರ್ವ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಪಕ್ಷಕ್ಕೆ ಬರಮಾಡಿಕೊಂಡರೆ ಮುಂದಿನ ರಾಜಕೀಯ ಭವಿಷ್ಯಕ್ಕೆ ಮಾರಕವಾಗಲಿದೆ ಅನ್ನೋ ಲೆಕ್ಕಾಚಾರವೂ ಇದೆ ಅನ್ನೋ ಮಾತುಗಳು ಕೇಳಿಬಂದಿದೆ.
ಪಾಕ್‌ನಷ್ಟು ಪ್ರೀತಿ ತೋರುವ ದೇಶ ನಾನು ನೋಡಿಲ್ಲ:ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್
ಅಶೋಕ್ ಚವಾಣ್ ರಾಜ್ಯಸಭಾ ಸ್ಥಾನ ನೀಡುವ ಕುರಿತು ಮಾತುಕತೆ ನಡೆದಿದೆ ಎಂದು ಹೇಳಲಾಗುತ್ತಿದೆ. ಲೋಕಸಭಾ ಚುನಾವಣೆ ಹತ್ತಿರದಲ್ಲಿ ಕಾಂಗ್ರೆಸ್ ನಾಯಕರು ಪಕ್ಷ ತೊರೆಯುುತ್ತಿದ್ದಾರೆ. ಇತ್ತ ಇಂಡಿಯಾ ಮೈತ್ರಿಯಿಂದ ಪಕ್ಷಗಳು ಹೋರಹೋಗುತ್ತಿದೆ. ಇದು ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.