
ಮುಂಬೈ(ಜ.22): ರಾಜ್ಯದ ಎಲ್ಲಾ ಶಾಲೆಗಳಲ್ಲಿ ಇನ್ನು ಮುಂದೆ ಬೆಳಗ್ಗೆಯ ಪ್ರಾರ್ಥನೆ ವೇಳೆ, ಸಂವಿಧಾನದ ಪೂರ್ವ ಪೀಠಿಕೆ ಹೇಳುವುದು ಕಡ್ಡಾಯ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.
ಇದೇ ಜ.26ರಂದು ಗಣರಾಜ್ಯೋತ್ಸವ ದಿನಚಾರಣೆ ದಿನದಂದು ಈ ಹೊಸ ಆದೇಶ ಜಾರಿಗೆ ಬರಲಿದೆ ಎಂದು ಸಚಿವೆ ವರ್ಷಾ ಗಾಯಕ್‌ವಾಡ್ ಸ್ಪಷ್ಟಪಡಿಸಿದ್ದಾರೆ.
ಮಕ್ಕಳಲ್ಲಿ ಸಂವಿಧಾನದ ಮಹತ್ವ ಹಾಗೂ ಅದರ ಗುಣ ವಿಶೇಷತೆಗಳ ಕುರಿತು ಜಾಗೃತಿ ಮೂಡಿಸಲು ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರ್ಷಾ ಗಾಯಕ್‌ವಾಡ್ ಹೇಳಿದ್ದಾರೆ.
ಇವರಲ್ವೇ ಹಿರಿಯರು: ಬಿಡಿಗಾಸೂ ಪಡೆಯದೆ ಇಡೀ ಸಂವಿಧಾನ ಕೈಯ್ಯಲ್ಲೇ ಬರೆದರು!
ಬೆಳಗಿನ ಪ್ರಾರ್ಥನೆ ಜೊತೆಗೆ ಸಂವಿಧಾನದ ಪೂರ್ವ ಪೀಠಿಕೆ ಹೇಳುವುದು ಇನ್ನು ಮುಂದೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯ ಎಂದು ವರ್ಷಾ ಗಾಯಕ್‌ವಾಡ್ ಸುದ್ದಿಗಾರರಿಗೆ ತಿಳಿಸಿದರು.
2013ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರ ಈ ಕುರಿತು ಆದೇಶ ಹೊರಡಿಸಿತ್ತಾದರೂ, ಅದನ್ನು ಸಂಪೂರ್ಣವಾಗಿ ಜಾರಿಗೆ ತರಲಾಗಿರಲಿಲ್ಲ. ನಂತರ ಸರ್ಕಾರ ಬದಲಾಗಿ ಈ ನಿರ್ಣಯ ನೇಪಥ್ಯಕ್ಕೆ ಸರಿದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ