
ಮುಂಬೈ(ಜ.11): ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ರಾಮ್ ನಾಯಕ್, ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ ಸೇರಿದಂತೆ ಪ್ರಮುಖ ಗಣ್ಯರಿಗೆ ನೀಡಿದ್ದ ಭದ್ರತೆಯನ್ನು ಮಹಾರಾಷ್ಟ್ರ ಸರ್ಕಾರ ಕಡಿತಗೊಳಿಸಿದ್ದು, ವಿಪಕ್ಷಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದೆ.
ಫಡ್ನವೀಡ್ ಹಾಗೂ ಅವರ ಕುಟುಂಬಕ್ಕೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿತ್ತು. ಆದರೆ, ಅವರು ಈಗ ವೈ ಪ್ಲಸ್ ಶ್ರೇಣಿಯ ಭದ್ರತೆಯನ್ನು ಪಡೆಯಲಿದ್ದಾರೆ. ಅದೇ ರೀತಿ ರಾಜ್ ಠಾಕ್ರೆಗೆ ನೀಡಿದ್ದ ಝಡ್ ಭದ್ರತೆಯನ್ನು ವೈ ಪ್ಲಸ್ ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ, ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, ಉತ್ತರ ಪ್ರದೇಶ ಮಾಜಿ ರಾಜ್ಯಪಾಲ ರಾಮ್ ನಾಯಕ್ ಅವರ ಭದ್ರತೆಯನ್ನು ವೈ ಶ್ರೇಣಿಗೆ ಇಳಿಕೆ ಮಾಡಲಾಗಿದೆ. ಝಡ್ ಶ್ರೇಣಿಯಲ್ಲಿ 22 ಭದ್ರತಾ ಸಿಬ್ಬಂದಿಯ ಭದ್ರತೆ ಇದ್ದರೆ, ವೈ ಶ್ರೇಣಿಯಲ್ಲಿ 11 ಮಂದಿಯ ಭದ್ರತೆ ಇರಲಿದೆ.
ಇದೇ ವೇಳೆ ರಾಜಕೀಯ ದುರುದ್ದೇಶದಿಂದ ಮಹಾರಾಷ್ಟ್ರ ಸರ್ಕಾರ ಪಕ್ಷದ ಮುಖಂಡರ ಭದ್ರತೆಯನ್ನು ಕಡಿತಗೊಳಿಸಿದೆ ಎಂದು ರಾಜ್ಯ ಬಿಜೆಪಿ ವಕ್ತಾರ ಕೇಶವ್ ಉಪಾಧ್ಯಾಯ್ ಆರೋಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ