ಅಹಮದ್‌ನಗರ (ಡಿ.26): ಮಹಾರಾಷ್ಟ್ರದ (Maharashtra) ಅಹಮದ್‌ನಗರ (Ahmednagar) ಜಿಲ್ಲೆಯ ತಕ್ಲಿ ಧೋಕೇಶ್ವರದಲ್ಲಿರುವ ಜವಾಹರ್ ನವೋದಯ (jawahar navodaya school) ಶಾಲೆಯಲ್ಲಿ ಒಟ್ಟು 52 ಮಂದಿಗೆ ಕೋವಿಡ್ 19 ಇರುವುದು ಪತ್ತೆಯಾಗಿದೆ. ಮೊದಲಿಗೆ 19 ಮಕ್ಕಳು ಕೊರೋನಾ (corona) ಸೋಂಕಿಗೆ ಒಳಗಾಗಿದ್ದಾರೆ ಎಂದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಶಾಲೆಯ 450 ವಿದ್ಯಾರ್ಥಿಗಳನ್ನು ಮತ್ತು ಭೋದನಾ ಸಿಬ್ಬಂದಿಯನ್ನು ಪರೀಕ್ಷೆ ನಡೆಸಲಾಯಿತು. ಈ ವೇಳೆ 30 ಮಕ್ಕಳಿಗೆ ಮತ್ತು 3 ಮಂದಿ ಶಿಕ್ಷಕರಿಗೆ ಕೊರೊನಾ ದೃಢಪಟ್ಟಿದೆ. ಹೀಗಾಗಿ ಒಟ್ಟು 52 ಪ್ರಕರಣಗಳು ಪತ್ತೆಯಾಗಿದ್ದು, ಶಾಲೆಯನ್ನು ಸೀಲ್ ಡೌನ್ ಮಾಡಿ ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ.
ಕೋವಿಡ್ ವೇಗವಾಗಿ ಹರಡುತ್ತಿದ್ದು ಮುಂಬೈನಲ್ಲಿ (mumbai) ಕಳೆದ 24 ಗಂಟೆಗಳಲ್ಲಿ 922 ಹೊಸ ಕೋವಿಡ್ ಪ್ರಕರಣ ವರದಿಯಾಗಿದೆ. ಇಲ್ಲಿಯವರೆಗೆ, ಭಾರತದಲ್ಲಿ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರಾನ್ ರೂಪಾಂತರದ 422 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕುಗಳು ವರದಿಯಾಗಿವೆ.
ಇದುವರೆಗೆ 108 ದೇಶಗಳಲ್ಲಿ 1.7ಲಕ್ಷಕ್ಕೂ ಹೆಚ್ಚು ಒಮಿಕ್ರಾನ್ ಪ್ರಕರಣಗಳು ವರದಿಯಾಗಿವೆ. ಬ್ರಿಟನ್ನಲ್ಲಿ ಮತ್ತು ಡೆನ್ಮಾರ್ಕ್ನಲ್ಲಿ ಕ್ಕಿಂತ ಹೆಚ್ಚು ಪ್ರಕರಣ ವರದಿಯಾಗಿವೆ. ವಿಶ್ವ ಆರೋಗ್ಯ ಸಂಸ್ಥೆ ಬೂಸ್ಟರ್ ಡೋಸ್ಗಳನ್ನು ನೀಡುವಂತೆ ಸದಸ್ಯ ರಾಷ್ಟ್ರಗಳನ್ನು ಒತ್ತಾಯಿಸಿದೆ.
Covid Vaccination For Children: ಸರ್ಕಾರದ ನಿರ್ಧಾರ ಅವೈಜ್ಞಾನಿಕ: ಏಮ್ಸ್ ವೈದ್ಯ
ಈ ನಡುವೆ ಶನಿವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ -19 ವಿರುದ್ಧ ಲಸಿಕೆಯನ್ನು ಜನವರಿ 3 ರಿಂದ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದರು. ಆದರೆ ಕೋವಿಡ್ ವಿರುದ್ಧ ಮಕ್ಕಳಿಗೆ ಲಸಿಕೆ ಹಾಕುವ ಕೇಂದ್ರದ ನಿರ್ಧಾರ ಅವೈಜ್ಞಾನಿಕ. ಇದು ಯಾವುದೇ ಹೆಚ್ಚುವರಿ ಪ್ರಯೋಜನವನ್ನು ನೀಡುವುದಿಲ್ಲ ಎಂದು ಏಮ್ಸ್‌ನ ಕೋವಾಕ್ಸಿನ್ ಪ್ರಯೋಗಗಳ ಪ್ರಮುಖ ತನಿಖಾಧಿಕಾರಿಯಾಗಿರುವ ಏಮ್ಸ್‌ನ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಹೇಳಿದ್ದಾರೆ. ಇಂಡಿಯನ್ ಪಬ್ಲಿಕ್ ಹೆಲ್ತ್ ಅಸೋಸಿಯೇಷನ್‌ನ ಅಧ್ಯಕ್ಷರೂ ಆಗಿರುವ ಡಾ.ಸಂಜಯ್ ಕೆ ರೈ (Dr Sanjay K Rai) ಮಾತನಾಡಿ ಮಕ್ಕಳಿಗೆ ಲಸಿಕೆ ನೀಡುವ ಈ ನಿರ್ಧಾರವನ್ನು ಜಾರಿಗೊಳಿಸುವ ಮೊದಲು, ಈಗಾಗಲೇ ಮಕ್ಕಳಿಗೆ ಲಸಿಕೆ ಹಾಕಲು ಪ್ರಾರಂಭಿಸಿದ ದೇಶಗಳ ಮಾಹಿತಿಯನ್ನು ವಿಶ್ಲೇಷಿಸಬೇಕು ಎಂದು ಹೇಳಿದರು.
Automobile ಉದ್ಯಮ 2022ರಲ್ಲಿ ಕಠಿಣ ಸವಾಲುಗಳನ್ನು ಎದುರಿಸಲಿದೆ : ರಾಜೀವ್ ಚಾಬಾ
ರಾಜ್ಯದಲ್ಲಿ ಒಮಿಕ್ರಾನ್ (Omicron) ಆತಂಕ ದಿನದಿನವೂ ಎರಿಕೆಯಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಹೈ ವೋಲ್ಟೇಜ್ ಓಮಿಕ್ರಾನ್ ಮೀಟಿಂಗ್ (Meeting) ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತಿದೆ. ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಜನವರಿ 6ರವರೆಗೆ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆವರೆಗೆ ಸಂಪೂರ್ಣ ಬಂದ್ ಮಾಡಲಾಗುತ್ತದೆ.
ನಿಯಮ ಮೀರಿದಲ್ಲಿ ಕಠಿಣ ಕ್ರಮ ಜರುಗಿಸಲಾಗುತ್ತಿದೆ. ಅಲ್ಲದೇ ಕರ್ಫ್ಯೂ ಸಂದರ್ಭದಲ್ಲಿ ಎಲ್ಲವೂ ಸಂಪೂರ್ಣ ಬಂದ್ ಆಗಲಿದೆ. ಹಗಲು ಹೊತ್ತಿನಲ್ಲಿ ಕೆಲ ಸೇವೆಗಳಿಗೆ 50 :50 ಅವಕಾಶ ಕಲ್ಪಿಸಲಾಗಿದೆ.
New Year 2022: ಡಿ 28 ರಿಂದ ಜ. 06 ರವರೆಗೆ ನೈಟ್ ಕರ್ಫ್ಯೂ ಜಾರಿ