ಲೋಕಸಭೆಯಲ್ಲಿ ಪ್ರಸ್ತಾಪವಾದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ

Published : Dec 09, 2022, 08:13 PM IST
ಲೋಕಸಭೆಯಲ್ಲಿ ಪ್ರಸ್ತಾಪವಾದ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ

ಸಾರಾಂಶ

ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಶುಕ್ರವಾರವೂ ಲೋಕಸಭೆಯಲ್ಲಿ ಪ್ರಸ್ತಾಪವಾಯಿತು. ಮಹಾರಾಷ್ಟ್ರ ಸಂಸದ ಧರೀಯಶೀಲ್ ಮಾನೆ ಅವರು ಶೂನ್ಯ ಅವಧಿಯಲ್ಲಿ ಗಡಿ ವಿವಾದ ಪ್ರಸ್ತಾಪಿಸಿ, ದೇಶದಲ್ಲಿ ಸರ್ವರು ಒಂದೇ ಅಂತಾ ಭಾವಿಸಲಾಗಿದೆ. ಆದ್ರೆ, ಗಡಿ ಭಾಗಗಳಲ್ಲಿ ಶಾಂತಿ ಕದಡುವ ಸ್ಥಿತಿ ಉದ್ಭವವಾಗಿದೆ. ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದರು.

ನವದೆಹಲಿ, (ಡಿ.9):  ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಶುಕ್ರವಾರವೂ ಲೋಕಸಭೆಯಲ್ಲಿ ಪ್ರಸ್ತಾಪವಾಯಿತು. ಮಹಾರಾಷ್ಟ್ರ ಸಂಸದ ಧರೀಯಶೀಲ್ ಮಾನೆ ಅವರು ಶೂನ್ಯ ಅವಧಿಯಲ್ಲಿ ಗಡಿ ವಿವಾದ ಪ್ರಸ್ತಾಪಿಸಿ, ದೇಶದಲ್ಲಿ ಸರ್ವರು ಒಂದೇ ಅಂತಾ ಭಾವಿಸಲಾಗಿದೆ.  ಆದ್ರೆ, ಗಡಿ ಭಾಗಗಳಲ್ಲಿ ಶಾಂತಿ ಕದಡುವ ಸ್ಥಿತಿ ಉದ್ಭವವಾಗಿದೆ. ಗಡಿ ಭಾಗಗಳಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎಂದರು.

ಅಲ್ಲದೇ,  ಕನ್ನಡ ಸಂಘಟನೆಗಳು ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡ್ತಿವೆ. ಮರಾಠಿಗರು ಆತಂಕದಿಂದ ಜೀವನ ನಡೆಸುವ ಸ್ಥಿತಿ ಈಗ ಉಂಟಾಗಿದೆ. ಕರ್ನಾಟಕದ ಮುಖ್ಯಮಂತ್ರಿಗಳು ಪ್ರಚೋದನಾಕಾರಿ ಹೇಳಿಕೆ ಕೊಡುತ್ತಾರೆ ಅಂಥ ಆರೋಪಿಸಿದರು.

Maharashtra Karnataka Border Row: ಬಸ್‌, ಬ್ಯಾಂಕಿಗೆ ಮಸಿ: ಮಹಾ ಪುಂಡಾಟಿಕೆ!

ಹಾಗಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಆಗ ಮಾತ್ರ ಅಲ್ಲಿನ ಪರಿಸ್ಥಿತಿ ತಿಳಿಗೊಳಿಸಲು ಸಾಧ್ಯ. ಎರಡು ರಾಜ್ಯಗಳ ಸಿಎಂಗಳನ್ನು ಒಟ್ಟುಗೂಡಿಸಿ ಸಮಸ್ಯೆ ಬಗೆಹರಿಸಬೇಕು ಅಂಥ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಂಸದ ಮಾನೆ ಮನವಿ ಮಾಡಿದರು.

Vijayapura: ರಾಜ್ಯದ ಬಸ್‌ಗೆ ಮಸಿ ಬಳಿದಿದ್ದಕ್ಕೆ ಕರವೇ ಆಕ್ರೋಶ

ಮಹಾ ಸಂಸದರಿಂದ ಶಾ ಭೇಟಿ: ಇದೇ ವೇಳೆ ಮಹಾರಾಷ್ಟ್ರ ವಿಕಾಸ ಅಘಾಡಿ ಸಂಸದರು (ಕಾಂಗ್ರೆಸ್, ಎನ್ ಸಿ ಪಿ ಹಾಗು ಠಾಕ್ರೆ ಬಣದ ಸಂಸದರು) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಸತ್ ನಲ್ಲಿ ಭೇಟಿಯಾಗಿ ಮಧ್ಯಸ್ಥಿಕೆ ವಹಿಸುವಂತೆ ಆಗ್ರಹಿಸಿದರು. ಎನ್ ಸಿ ಪಿ ಸಂಸದೆ ಸುಪ್ರಿಯಾ ಸುಳೆ ನೇತೃತ್ವದ ನಿಯೋಗ ಭೇಟಿಯಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು