
ನವದೆಲಿ(ಮೇ.13): ದೇಶದ ಎಲ್ಲಾ ನಾಗರಿಕರಿಗೂ ಉಚಿತವಾಗಿ ಲಸಿಕೆ ನೀಡಬೇಕು ಮತ್ತು ಕೊರೋನಾ ವಿರುದ್ಧದ ಹೋರಾಟಕ್ಕೆ ತುರ್ತು ಹಣಕಾಸು ನೆರವಿನ ಅಗತ್ಯವಿರುವ ಹಿನ್ನಲೆಯಲ್ಲಿ 13 ಸಾವಿರ ಕೋಟಿ ರು. ವೆಚ್ಚದ ಸೆಂಟ್ರಲ್ ವಿಸ್ತಾ ಯೋಜನೆಯನ್ನು ಕೈಬಿಡಬೇಕು ಎಂದು 12 ವಿಪಕ್ಷಗಳ ಮುಖಂಡರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿ ಪತ್ರವೊಂದನ್ನು ಬರೆದಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಎನ್‌ಸಿಪಿ ಮುಖಂಡ ಶರದ್ ಪವಾರ್ ಸೇರಿದಂತೆ ಪ್ರಮುಖ ಮುಖಂಡರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. ಮಹಾರಾಷ್ಟ್ರ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ಈ ಬೇಡಿಕೆ ಇಟ್ಟಿದ್ದಾರೆ.
"
ಇದೇ ವೇಳೆ ಬಡವರಿಗೆ ಉಚಿತವಾಗಿ ಆಹಾಧಾನ್ಯಗಳನ್ನು ಒದಗಿಸಬೇಕು. ನಿರುದ್ಯೋಗಿಗಳಿಗೆ ತಿಂಗಳಿಗೆ 6000 ರು. ಭತ್ಯೆಯನ್ನು ನೀಡಬೇಕು. ನೂತನ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು. ಇದರಿಂದ ರೈತರನ್ನು ಲಾಕ್‌ಡೌನ್‌ನಿಂದ ಸಂಕಷ್ಟದಿಂದ ಪಾರು ಮಾಡಬಹುದು ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.
ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್ ನ್ಯೂಸ್ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ