
ಲಂಡನ್(ಜು.26): ಭಾರತೀಯ ಬ್ಯಾಂಕ್‌ಗಳಿಗೆ ವಂಚಿಸಿ ವಿದೇಶಕ್ಕೆ ಪರಾರಿಯಾದ ಉದ್ಯಮಿ ವಿಜಯ್ ಮಲ್ಯಗೆ ಇದೀಗ ಮತ್ತೆ ಸಂಕಷ್ಟ ಹೆಚ್ಚಾಗಿದೆ. ಉದ್ಯಮಿ ವಿಜಯ್ ಮಲ್ಯ ದಿವಾಳಿ ಎಂದು ಲಂಡನ್ ಹೈಕೋರ್ಟ್ ಘೋಷಿಸಿದೆ. ಕೋರ್ಟ್ ತೀರ್ಪು ಭಾರತೀಯ ಬ್ಯಾಂಕ್‌ಗಳಿ ಬಹುದೊಡ್ಡ ಗೆಲುವನ್ನು ತಂದುಕೊಟ್ಟಿದೆ.
ಲಂಡನ್ ಹೈಕೋರ್ಟ್ ಮಲ್ಯರನ್ನು ದಿವಾಳಿ ಎಂದು ಘೋಷಿಸುತ್ತಿದ್ದಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಭಾರತೀಯ ಬ್ಯಾಂಕ್‌ಗಳ ಒಕ್ಕೂಟ ಹೆಚ್ಚು ಸಂಭ್ರಮಿಸಿದೆ. ಕಾರಣ ಸ್ಥಗಿತಗೊಂಡಿರುವ ಕಿಂಗ್‌ಫಿಶರ್ ಏರ್‌ಲೈನ್ಸ್‌ನ ಭಾರತದಲ್ಲಿರುವ ಆಸ್ತಿಗಳನ್ನು ವಶಪಡಿಸಿಕೊಂಡು ಇದರಿಂದ ಸಾಲದ ಮೊತ್ತವನ್ನು ಪಡೆಯಲು ಈ ಘೋಷಣೆ ಸಹಕಾರಿಯಾಗಲಿದೆ.
ಇದರ ಜೊತೆಗೆ ವಿಜಯ್ ಮಲ್ಯಗೆ ಮತ್ತೊಂದು ಹಿನ್ನಡೆಯಾಗಿದೆ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅನುಮತಿ ನಿರಾಕರಿಸಲಾಗಿದೆ. ಈ ವರ್ಷದ ಆರಂಭದಲ್ಲಿ ಲಂಡನ್ ನ್ಯಾಯಾಲಯ ಎಸ್‌ಬಿಐ ನೇತೃತ್ವದ ಬ್ಯಾಂಕ್ ಒಕ್ಕೂಟ ಸಲ್ಲಿಸಿದ್ದ ಮಲ್ಯ ದಿವಾಳಿತನದ ಅರ್ಜಿಯನ್ನು ತಿದ್ದುಪಡಿ ಮಾಡಬೇಕು, ಜೊತೆಗೆ ಅವರ ಆಸ್ತಿಯನ್ನು ಮುಟ್ಟುಗೋಲು ಮಾಡಲು ಅನುಮತಿ ನೀಡಬೇಕು ಎಂದು ಕೋರಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ