
ಪಟ್ಟಣಂತಿಟ್ಟ: ಶಬರಿಮಲೆಯ ಅಯ್ಯಪ್ಪಸ್ವಾಮಿ ದೇಗುಲದ ವಾರ್ಷಿಕ ಮಕರಜ್ಯೋತಿಯು ಬುಧವಾರ ದರ್ಶನವಾಗಲಿದೆ. ಈ ಬಾರಿ ಸಂಕ್ರಾಂತಿಯು 14ರ ಮಧ್ಯಾಹ್ನದಿಂದಲೇ ಆರಂಭವಾಗುವ ಕಾರಣ 14ರ ಸಂಜೆ ಪೊನ್ನಂಬಲಮೇಡು ಪರ್ವತದ ಮೇಲೆ ಮಕರಜ್ಯೋತಿ ಕಾಣಿಸಿಕೊಳ್ಳಲಿದೆ.
ಭಕ್ತರ ಸಂಖ್ಯೆಗೆ ಈ ಬಾರಿ ಮಿತಿ ಹೇರಲಾಗಿದ್ದು, 30,000 ಆನ್ಲೈನ್ ಮತ್ತು 5000 ಕೌಂಟರ್ ಟಿಕೆಟ್ ಹೊಂದಿರುವವರಿಗೆ ಮಾತ್ರವೇ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.
ಭಕ್ತರ ಭದ್ರತೆಗಾಗಿ 2000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದ್ದು, ಇವರೊಂದಿಗೆ 136 ಸ್ವಯಂಸೇವಕರು, 31 ತುರ್ತು ವಾಹನಗಳ ವ್ಯವಸ್ಥೆ ಮಾಡಲಾಗಿದೆ ಎಂದು ಟಿಡಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ