
ಚಂಡೀಗಢ: ಮಹಿಳೆಯರನ್ನು ಗರ್ಭಿಣಿಯನ್ನಾಗಿಸಿ ಲಕ್ಷಾಂತರ ರೂಪಾಯಿ ಹಣ ಸಂಪಾದಿಸಿ ಎಂಬ ಜಾಹೀರಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇಂದು ನಿರುದ್ಯೋಗಿಗಳು ಕೆಲಸಕ್ಕಾಗಿ ಕಂಪನಿಯಿಂದ ಕಂಪನಿ ಸುತ್ತಾಡಲ್ಲ. ಸಾಮಾಜಿಕ ಜಾಲತಾಣ ಸೇರಿದಂತೆ ನಿಗದಿತ ಕಂಪನಿಯ ವೆಬ್‌ಸೈಟ್‌ಗೆ ನೀಡಿ ಉದ್ಯೋಗದ ಮಾಹಿತಿ ಪಡೆದುಕೊಳ್ಳಬಹುದು. ಕೆಲ ಕಂಪನಿಗಳು ಲಿಂಕ್ಡ್.ಇನ್ ಸೇರಿದಂತೆ ಫೇಸ್‌ಬುಕ್, ಇನ್‌ಸ್ಟಾಗ್ರಾಂನಲ್ಲಿ ಜಾಹೀರಾತುಗಳನ್ನು ಪ್ರಕಟಿಸುತ್ತವೆ. ಹಾಗಾಗಿಯೇ ಯುವ ಸಮುದಾಯ ಕೆಲಸಕ್ಕೆ ಸಂಬಂಧಿಸಿದ ಜಾಹೀರಾತುಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿರುತ್ತಾರೆ.
ಆದ್ರೆ ಸೋಶಿಯಲ್ ಮೀಡಿಯಾದಲ್ಲಿ ಇದನ್ನು ಕೆಲವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡು ಅಮಾಯಕರಿಗೆ ಮೋಸ ಮಾಡುತ್ತಾರೆ. ಕೆಲಸ ಸಿಗುತ್ತೆ ಎಂಬ ಆಸೆಯಿಂದ ಹಣ ನೀಡಿ ಮೋಸಕ್ಕೆ ಒಳಗಾದವರ ಉದಾಹರಣೆಗಳು ನಮ್ಮ ಮುಂದಿವೆ. ಕೆಲವರು ಏಜೆನ್ಸಿ ಆರಂಭಿಸಿ ಮೋಸ ಮಾಡುತ್ತಿರುತ್ತಾರೆ. ಕೆಲ ದಿನಗಳ ಹಿಂದೆ ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭಿಣಿಯನ್ನಾಗಿಸಿ ಲಕ್ಷಾಂತರ ರೂಪಾಯಿ ಸಂಪಾದಿಸಿ ಎಂಬ ಜಾಹೀರಾತು ಪೊಲೀಸರು ಗಮನಕ್ಕೂ ಬಂದಿತ್ತು. ಜಾಹೀರಾತು ಬೆನ್ನತ್ತಿದ ಪೊಲೀಸರು ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಸ್ ಕಿಟಕಿ ಹೊರಗೆ ಹಾಕಿದ 'ಕೈ' ಎರಡು ತುಂಡಾಯ್ತು; ಕ್ಯಾಮೆರಾದಲ್ಲಿ ವಿಡಿಯೋ ಸೆರೆ
ನಕಲಿ ಖಾತೆಗಳ ಮೂಲಕ ಜಾಹೀರಾತು ಪ್ರಕಟನೆ
ಪೊಲೀಸರ ತನಿಖೆ ವೇಳೆ ನಿರುದ್ಯೋಗಿಗಳನ್ನು ಮೋಸ ಮಾಡುವ ಉದ್ದೇಶದಿಂದಲೇ ಈ ಜಾಹೀರಾತು ಪ್ರಕಟಿಸಲಾಗಿತ್ತು ಎಂದು ತಿಳಿದು ಬಂದಿದೆ. ಹರಿಯಾಣದ ನುಹ್ ಜಿಲ್ಲೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಜಾಜ್ ಮತ್ತು ಇರ್ಷಾದ್ ಎಂಬ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭದರಿಸುವಂತೆ ಮಾಡುವ ಜಾಹೀರಾತು ಇದಾಗಿತ್ತು. ಆರೋಪಿಗಳು ಮಹಿಳೆಯರ ನಕಲಿ ಫೋಟೋಗಳನ್ನು ಜಾಹೀರಾತಿಗೆ ಬಳಸಿಕೊಂಡಿದ್ದರು. ಪೊಲೀಸ್ ತನಿಖೆಯಲ್ಲಿ ಆರೋಪಿಗಳು ಸೋಶಿಯಲ್ ಮೀಡಿಯಾದಲ್ಲಿ ನಾಲ್ಕು ನಕಲಿ ಖಾತೆಗಳನ್ನು ಹೊಂದಿದ್ದರು ಎಂದು ತಿಳಿದು ಬಂದಿದೆ.
ಆರೋಪಿಗಳಿಬ್ಬರು ನ್ಯಾಯಾಂಗ ಬಂಧನಕ್ಕೆ
ಜಾಹೀರಾತು ನೋಡಿ ತಮ್ಮನ್ನು ಸಂಪರ್ಕಿಸುವ ಯುವಕರಿಗೆ ನೋಂದಣಿ ಮಾಡಿಕೊಳ್ಳಲು ಶುಲ್ಕ ತುಂಬುವಂತೆ ಹೇಳುತ್ತಿದ್ದರು. ಫೀಸ್ ತುಂಬಿ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಸೂಚನೆ ನೀಡಲಾಗುತ್ತಿತ್ತು. ನಕಲಿ ಫೇಸ್‌ಬುಕ್ ಖಾತೆಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಲಾಗುತ್ತಿತ್ತು. ಸದ್ಯ ಇಬ್ಬರು ಆರೋಪಿಗಳನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಟೈಟ್ ಜೀನ್ಸ್ ಧರಿಸಿ ಬೈಕ್ ಏರಿ ಬಂದ ಯುವತಿಯನ್ನು ಓರೆಗಣ್ಣಿನಲ್ಲಿ ನೋಡಿದ ಅಂಕಲ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ