
ಕೋಲ್ಕತಾ(ಫೆ.26): ಪಶ್ಚಿಮ ಬಂಗಾಳದ ವಿಧಾನ ಸಭೆ ಚುನಾವಣೆ ಮಾರ್ಚ್ 27 ರಿಂದ ಆರಂಭಗೊಳ್ಳಲಿದೆ. ಚುನಾವಣಾ ಆಯೋಗ ಇಂದು ಪಂಚ ರಾಜ್ಯಗಳಿಗೆ ಚುನಾವಣಾ ದಿನಾಂಕ ಘೋಷಿಸಿದೆ. ಇದೇ ಮೊದಲ ಬಾರಿಗೆ ಬಂಗಾಳದಲ್ಲಿ 8 ಹಂತದಲ್ಲಿ ಮತದಾನ ಮಾಡಲು ಆಯೋಗ ನಿರ್ಧರಿಸಿದೆ. ಆದರೆ ಇದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನಕ್ಕೆ ಕಾರಣವಾಗಿದೆ.
ಮಾ.27 ರಿಂದ ಎಪ್ರಿಲ್ 29: ಪಂಚರಾಜ್ಯ ಚುನಾವಣಾ ದಿನಾಂಕ ಘೋಷಿಸಿದ ಆಯೋಗ!.
ಮಾರ್ಚ್ 27 ರಿಂದ ಎಪ್ರಿಲ್ 29ರ ವರೆಗೆ ಬಂಗಾಳದಲ್ಲಿ 8 ಹಂತದ ಚುನಾವಣೆ ನಡೆಯಲಿದೆ. 6 ಹಂತದ ಮತದಾನದ ಬದಲು 8 ಹಂತದ ಮತದಾನಕ್ಕೆ ಚುನಾವಣಾ ಆಯೋಗ ನಿರ್ಧರಿಸಿದ್ದೇಕೆ? ಇದರ ಹಿಂದೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕೈವಾಡವಿದೆಯಾ ಎಂದು ದೀದಿ ಪ್ರಶ್ನಿಸಿದ್ದಾರೆ.
ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಒಂದು ಹಂತದ ಮತದಾನ, ಅಸ್ಸಾಂನಲ್ಲಿ 3 ಹಂತದ ಮತದಾನ ನಿರ್ಧರಿಸಲಾಗಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಮಾತ್ರ 8 ಹಂತದ ಮತದಾನಕ್ಕೆ ನಿರ್ಧರಿಸಿದ್ದೇಕೆ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ತನ್ನ ಪ್ರಚಾರಕ್ಕೆ ಅನೂಕೂಲವಾಗುವಂತೆ ಮತದಾನ ನಿರ್ಧರಿಸಲಾಗಿದೆ ಎಂದು ಮಮತಾ ಆರೋಪಿಸಿದ್ದಾರೆ.
ಅಸ್ಸಾಂ, ತಮಿಳುನಾಡಿನಲ್ಲಿ ಪ್ರಚಾರ ಮುಗಿಸಿ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಮಾಡಲು ಬಿಜೆಪಿ ಈ ಪ್ಲಾನ್ ಮಾಡಿದೆ ಎಂದು ಆರೋಪಿಸಿದ್ದಾರೆ. ಆದರೆ ಈ ಎಲ್ಲಾ ಲೆಕ್ಕಾಚಾರಗಳು ಉಲ್ಟಾ ಆಗಲಿದೆ ಎಂದು ಮಮತಾ ಹೇಳಿದ್ದಾರೆ.
2011ರಲ್ಲಿ ಮಮತಾ ಬ್ಯಾನರ್ಜಿ ಪಶ್ಚಿಮ ಬಂಗಾಳದಲ್ಲಿನ 6 ಹಂತದ ಮತದಾನವನ್ನು ಸ್ವಾಗತಿಸಿದ್ದರು. ಎಡಪಕ್ಷಗಳ ಅಧಿಕಾರ ಅಂತ್ಯಗೊಳಿಸಿ ಬಂಗಾಳದಲ್ಲಿ ಹೊಸ ಸರ್ಕಾರ ರಚನೆಯಾಗಲಿದೆ. ಕಾಂಗ್ರೆಸ್ ಜೊತೆಗೂಡಿ ತೃಣಮೂಲ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಬ್ಯಾನರ್ಜಿ ಹೇಳಿದ್ದರು. ಇದೀಗ 8 ಹಂತದ ಮತದಾವನ್ನು ದೀದಿ ವಿರೋಧಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ