
ಕೋಲ್ಕತ್ತಾ(ಡಿ.19): ಪೌರತ್ವ ತಿದ್ದುಪಡಿ ಕಾಯ್ದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪ.ಬಂಗಾಳ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರಕ್ಕೆ ತಾಕತ್ತಿದ್ದರೆ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಜನಾಭಿಪ್ರಾಯ ಸಂಗ್ರಹ ನಡೆಸಲಿ ಎಂದು ಸವಾಲು ಎಸೆದಿದ್ದಾರೆ.
ಅಷ್ಟಕ್ಕೂ ಹಿಂದೂ ಶರಣಾರ್ಥಿಗಳಿಗೆ ಎಲ್ಲಿ ಜಾಗ ಕೊಡ್ತಿರಿ?: ಉದ್ಧವ್!
ನನ್ನ ಸಾವಿನ ಬಳಿಕವಷ್ಟೇ ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿಗೆ ಅವಕಾಶ ಎಂದು ಹೇಳಿರುವ ಮಮತಾ, ವಿಶ್ವಸಂಸ್ಥೆ ಜನಾಭಿಪ್ರಾಯ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
CAB ಬೆಂಬಲಿಸಿದ್ದ ಡಾ. ಸಿಂಗ್ ವಿಡಿಯೋ ಬಿಡುಗಡೆ ಮಾಡಿದ ಬಿಜೆಪಿ!
ಒಂದು ವೇಳೆ ವಿಶ್ವಸಂಸ್ಥೆಯ ಜನಾಭಿಪ್ರಾಯ ಸಂಗ್ರಹದಲ್ಲಿ ಪೌರತ್ವ ಕಾಯ್ದೆ ವಿರೋಧಿ ಫಲಿತಾಂಶ ಬಂದರೆ ಬಿಜೆಪಿ ಅಧಿಕಾರದಿಂದ ಕೆಳಗಿಳಿಯಬೇಕು ಎಂದೂ ಮಮತಾ ಒತ್ತಾಯಿಸಿದ್ದಾರೆ.
ನಿಮಗೆ ಬಹುಮತ ಇದೆ ಎಂಬ ಕಾರಣಕ್ಕೆ ಮನಬಂದಂತೆ ವರ್ತಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಮತಾ ಬ್ಯಾನರ್ಜಿ ಹರಿಹಾಯ್ದಿದ್ದಾರೆ.
ಪೌರತ್ವ ಕಿಚ್ಚು: ಅಮಿತ್ ಶಾ ಎಮರ್ಜೆನ್ಸಿ ಭದ್ರತಾ ಸಭೆ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ