ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಗೂ ಮಮತಾ ಅ‘ನ್ಯಾಯ’: ಕಾಂಗ್ರೆಸ್‌ ಕಿಡಿ

By Kannadaprabha News  |  First Published Jan 27, 2024, 4:48 PM IST

ಹಲವು ಕಡೆಗಳಲ್ಲಿ ರಸ್ತೆಯನ್ನು ನಿರ್ಬಂಧಿಸಿ ಮುಂದೆ ಸಾಗದಂತೆ ತಡೆಯಲಾಗುತ್ತಿದೆ. ಅಸ್ಸಾಂನಂತೆ ಪಶ್ಚಿಮ ಬಂಗಾಳದಲ್ಲೂ ಯಾತ್ರೆಗೆ ಅಡ್ಡಿಪಡಿಸಲಾಗುತ್ತಿದೆ’ ಎಂದು ಕಿಡಿ ಕಾರಿದರು.


ಸಿಲಿಗುರಿ (ಜನವರಿ 27, 2024): ಅಸ್ಸಾಂನಂತೆ ಪಶ್ಚಿಮ ಬಂಗಾಳದಲ್ಲೂ ಸಹ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ ಸರ್ಕಾರ ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ನ್ಯಾಯ ಯಾತ್ರೆಗೆ ಕೆಲವು ಪ್ರದೇಶಗಳಲ್ಲಿ ಅನುಮತಿ ನಿರಾಕರಿಸುತ್ತಿದೆ ಎಂದು ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಭಾರತ್‌ ಜೋಡೋ ಯಾತ್ರೆಯ ಅಂಗವಾಗಿ ನಾವು ಪಶ್ಚಿಮ ಬಂಗಾಳದಲ್ಲಿ ಹಲವು ಸ್ಥಳಗಳಲ್ಲಿ ಬಹಿರಂಗ ಸಮಾವೇಶವನ್ನು ಯೋಜಿಸಲು ತೀರ್ಮಾನಿಸಿದ್ದೆವು. ಆದರೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಸರ್ಕಾರ ಉದ್ದೇಶಪೂರ್ವಕವಾಗಿ ಅನುಮತಿ ನಿರಾಕರಿಸುತ್ತಿದೆ. ಹಲವು ಕಡೆಗಳಲ್ಲಿ ರಸ್ತೆಯನ್ನು ನಿರ್ಬಂಧಿಸಿ ಮುಂದೆ ಸಾಗದಂತೆ ತಡೆಯಲಾಗುತ್ತಿದೆ. ಅಸ್ಸಾಂನಂತೆ ಪಶ್ಚಿಮ ಬಂಗಾಳದಲ್ಲೂ ಯಾತ್ರೆಗೆ ಅಡ್ಡಿಪಡಿಸಲಾಗುತ್ತಿದೆ’ ಎಂದು ಕಿಡಿ ಕಾರಿದರು.

Tap to resize

Latest Videos

ಇದನ್ನು ಓದಿ: ರಾಹುಲ್‌ ಗಾಂಧಿ ಅವಮಾನ ಮಾಡಿದ್ದಕ್ಕೆ ‘I.N.D.I.A’ ಮೈತ್ರಿಕೂಟಕ್ಕೆ ಸೆಡ್ಡು ಹೊಡೆದ ನಿತೀಶ್‌! ಮೋದಿ ಜತೆ ಸೇರೋದು ಪಕ್ಕಾನಾ?

ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಜೊತೆ ಯಾವುದೇ ಮೈತ್ರಿ ಇಲ್ಲ, ಮೈತ್ರಿ ಏನಿದ್ದರೂ ಬೇರೆ ರಾಜ್ಯದಲ್ಲಿ ಎಂದು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಟಿಎಂಸಿ ಶಾಸಕ ಶಂತಾನು ಸೇನ್‌, ‘ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ಪೂರ್ವಾಗ್ರಹದಿಂದ ಕೆಲಸ ಮಾಡುವುದಿಲ್ಲ. ಹಲವು ಪ್ರತಿಪಕ್ಷಗಳಿಗೆ ಈ ರಾಜ್ಯದಲ್ಲಿ ಸಮಾವೇಶವನ್ನು ನಡೆಸಲು ಅನುಮತಿ ನೀಡಲಾಗಿದೆ. ಪ್ರಸ್ತುತ ರಾಜ್ಯದ ಶಾಲೆಗಳಲ್ಲಿ ಪರೀಕ್ಷೆ ನಡೆಯುತ್ತಿರುವ ಕಾರಣ ಯಾತ್ರೆಗೆ ಅನುಮತಿ ನಿರಾಕರಿಸಲಾಗಿದೆಯೇ ಹೊರತು ಮತ್ತಾವುದೇ ಕಾರಣದಿಂದಲ್ಲ’ ಎಂದು ತಿರುಗೇಟು ನೀಡಿದರು.

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆ ಅಸ್ಸಾಂ ಚರಣವನ್ನು ಮುಗಿಸಿ ಗುರುವಾರ ಪಶ್ಚಿಮ ಬಂಗಾಳದ ಸಿಲಿಗುರಿಯನ್ನು ಪ್ರವೇಶಿಸಿದೆ. ಇಲ್ಲಿ ಎರಡು ದಿನಗಳ ವಿರಾಮದ ನಂತರ ಜನವರಿ 28ರ ನಂತರ ಮತ್ತೆ ಯಾತ್ರೆ ಮುಂದುವರೆಯುತ್ತದೆ.

News Hour: ಲೋಕಸಭೆ ಚುನಾವಣೆಗೂ ಮುನ್ನವೇ ಮುರಿದು ಬೀಳಲಿದೆಯೇ ಇಂಡಿಯಾ ಮೈತ್ರಿ?

click me!