
ನವದೆಹಲಿ/ಕೋಲ್ಕತಾ(ಮಾ.29): ಪಶ್ಚಿಮ ಬಂಗಾಳದ ಮೊದಲ ಹಂತದ ಚುನಾವಣೆಯಲ್ಲಿ 30 ಸ್ಥಾನಗಳ ಪೈಕಿ ಬಿಜೆಪಿ 26ರಲ್ಲಿ ಗೆಲುವು ಸಾಧಿಸಲಿದೆ. ಅದೇ ರೀತಿ ಅಸ್ಸಾಂನ 47 ಸ್ಥಾನಗಳ ಪೈಕಿ ಬಿಜೆಪಿ 37ರಲ್ಲಿ ಗೆಲುವು ದಾಖಲಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಭಾನುವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅಮಿತ್ ಶಾ ತಮಗೆ ಲಭ್ಯವಾಗಿರುವ ಪಕ್ಷದ ಆಂತರಿಕ ಮಾಹಿತಿಯ ಪ್ರಕಾರ, ಬಿಜೆಪಿ ಪಶ್ಚಿಮ ಬಂಗಾಳದಲ್ಲಿ 200ಕ್ಕೂ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಅದೇ ರೀತಿ ಅಸ್ಸಾಂನಲ್ಲಿ ಬಿಜೆಪಿ 86 ಸೀಟುಗಳನ್ನು ಗೆದ್ದು ಅಧಿಕಾರ ಹಿಡಿಯಲಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಅಮಿತ್ ಶಾ ಹೇಳಿಕೆಗೆ ಪಶ್ಚಿಮ ಬಂಗಾಳದ ಚಂಡೀಪುರ ಕ್ಷೇತ್ರದಲ್ಲಿ ತಿರುಗೇಟು ನೀಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ‘ಇನ್ನೂ ನಾಲ್ಕು ಕ್ಷೇತ್ರಗಳನ್ನು ಕಾಂಗ್ರೆಸ್ ಮತ್ತು ಸಿಪಿಎಂಗೆ ಬಿಟ್ಟುಕೊಟ್ಟಿದ್ದಾರಾ?’ ಎಂದು ಲೇವಡಿ ಮಾಡಿದ್ದಾರೆ. ಚುನಾವಣೆ ಮುಕ್ತಾಯವಾಗಿ ಮತಗಳ ಎಣಿಕೆ ಬಳಿಕ ಮತದಾರ ಪ್ರಭುಗಳ ತೀರ್ಪು ಏನೆಂದು ಸ್ಪಷ್ಟವಾಗಲಿದೆ. ಶನಿವಾರದ ಚುನಾವಣಾ ಮತದಾನದಲ್ಲಿ ಶೇ.84ರಷ್ಟುಮತದಾನವಾಗಿದ್ದು, ನಮ್ಮ ಪರವಾಗಿಯೇ ಜನ ಮತ ಹಾಕಿರಲಿದ್ದಾರೆ ಎಂಬ ಭರವಸೆಯಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ