* ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಸುವೇಂದು ಅಧಿಕಾರಿಗೆ ಶಾಕ್ ಕೊಟ್ಟ ದೀದಿ
* ಸುವೇಂದು ಅಧಿಕಾರಿ ಅವರು ವಿಧಾನಸಭೆಗೆ ಆಯ್ಕೆ ಆಗಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ
* ವಿಚಾರಣೆಗೆ ಅಂಗೀಕರಿಸಿರುವ ನ್ಯಾಯಾಲಯ
ಕೋಲ್ಕತಾ(ಜೂ.19): ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷ ನಾಯಕ, ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಅವರು ವಿಧಾನಸಭೆಗೆ ಆಯ್ಕೆ ಆಗಿದ್ದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಇದನ್ನು ವಿಚಾರಣೆಗೆ ಅಂಗೀಕರಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಜೂ.24ಕ್ಕೆ ಮುಂದೂಡಿದೆ.
ಬಂಗಾಳ ವಿಧಾನಸಭೆ ಚುನಾವಣೆ ವೇಳೆ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮ ಕ್ಷೇತ್ರದಲ್ಲಿ ಕೇವಲ 2000ಕ್ಕಿಂತ ಕಡಿಮೆ ಮತಗಳ ಅಂತರದಿಂದ ಅಧಿಕಾರಿ ಎದುರು ಸೋಲುಂಡಿದ್ದರು.
ರಾಯ್ ಅನರ್ಹತೆಗೆ ಕೋರಿಕೆ:
ಇತ್ತೀಚೆಗಷ್ಟೇ ಬಿಜೆಪಿಯಿಂದ ಮಾತೃಪಕ್ಷ ಟಿಎಂಸಿ ಕ್ಯಾಂಪ್‌ಗೆ ಜಿಗಿದಿರುವ ಮುಕುಲ್ ರಾಯ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ವಿಪಕ್ಷ ನಾಯಕ ಸುವೇಂದು ಅಧಿಕಾರಿ ಸ್ಪೀಕರ್ ಅವರಿಗೆ ದೂರು ಸಲ್ಲಿಸಿದ್ದಾರೆ. ಬಿಜೆಪಿಯಿಂದ ಗೆದ್ದಿರುವ ರಾಯ್ ಇತ್ತೀಚೆಗೆ ಟಿಎಂಸಿಗೆ ಸೇರಿದ್ದಾರೆ.