ಮುಂಬೈನಲ್ಲಿ ಎಲ್ಲೇ ರಸ್ತೆಗುಂಡಿ ಕಂಡರೂ ಇವರು ಮುಚ್ಚುತ್ತಾರೆ!

Published : Jun 20, 2020, 02:22 PM ISTUpdated : Jun 20, 2020, 02:34 PM IST
ಮುಂಬೈನಲ್ಲಿ ಎಲ್ಲೇ ರಸ್ತೆಗುಂಡಿ  ಕಂಡರೂ ಇವರು ಮುಚ್ಚುತ್ತಾರೆ!

ಸಾರಾಂಶ

ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಎಷ್ಟೇ ಮನವಿ ಮಾಡಿದರೂ ಸರ್ಕಾರ ಅದನ್ನು ಕಿವಿಯ ಮೇಲೆ ಹಾಕಿಕೊಳ್ಳುವುದೇ ಇಲ್ಲ| ಮುಂಬೈನಲ್ಲಿ ಎಲ್ಲೇ ರಸ್ತೆಗುಂಡಿ ಕಂಡರೂ ಈತ ಮುಚ್ಚುತ್ತಾನೆ!| 16 ವರ್ಷದ ಮಗನನ್ನು ಕಳೆದುಕೊಂಡಿದ್ದರು

ಮುಂಬೈ(ಜೂ.20): ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಎಷ್ಟೇ ಮನವಿ ಮಾಡಿದರೂ ಸರ್ಕಾರ ಅದನ್ನು ಕಿವಿಯ ಮೇಲೆ ಹಾಕಿಕೊಳ್ಳುವುದೇ ಇಲ್ಲ. ಹೀಗಾಗಿ ಮುಂಬೈನಲ್ಲಿ ದಾದಾರಾವ್‌ ಬಿಲ್ಹೋರೆ ಎನ್ನುವವರು ತಾವೇ ಸ್ವತಃ ರಸ್ತೆ ಗುಂಡಿಯನ್ನು ಮುಚ್ಚುವ ಕೆಲಸವನ್ನು ಮಾಡುತ್ತಿದ್ದಾರೆ.

ರಸ್ತೆಗುಂಡಿಯಿಂದ ಸಂಭವಿಸಿದ ರಸ್ತೆ ಅಪಘಾತದಲ್ಲಿ ದಾದಾರಾವ್‌ 2015ರಲ್ಲಿ ತಮ್ಮ 16 ವರ್ಷದ ಮಗನನ್ನು ಕಳೆದುಕೊಂಡಿದ್ದರು. ಬಳಿಕ ಎಲ್ಲೇ ರಸ್ತೆ ಗುಂಡಿ ಕಂಡರೂ ಮಣ್ಣುಹಾಕಿ ಮುಚ್ಚುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ಇದುವರೆಗೆ 500ಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ದಾದಾರಾವ್‌ ಮುಚ್ಚಿದ್ದಾರೆ. ಅಲ್ಲದೇ ರಸ್ತೆಗುಂಡಿಯ ಬಗ್ಗೆ ಮಾಹಿತಿ ಪಡೆಯಲು ಆ್ಯಪ್‌ವೊಂದನ್ನು ಅಭಿವೃದ್ಧಿಪಡಿಸಿದ್ದಾರೆ.

ಇದೀಗ ದಾದಾರಾವ್‌ ಅವರ ಕಾರ್ಯ ಎಲ್ಲರ ಗಮನ ಸೆಳೆಯುತ್ತಿದೆ. ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಅವರು ದಾದಾರಾವ್‌ ಬಗ್ಗೆ ಟ್ವೀಟ್‌ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್