ಆಸ್ಪತ್ರೆ ಐಸಿಯುನಲ್ಲೇ ಆತ್ಮಹತ್ಯೆಗೆ ಯತ್ನಿಸಿದಾಕೆಗೆ ವಿವಾಹ : ಪರಾರಿಯಾದ ಪ್ರಿಯತಮ

Published : Dec 06, 2019, 01:30 PM IST
ಆಸ್ಪತ್ರೆ ಐಸಿಯುನಲ್ಲೇ ಆತ್ಮಹತ್ಯೆಗೆ ಯತ್ನಿಸಿದಾಕೆಗೆ ವಿವಾಹ : ಪರಾರಿಯಾದ ಪ್ರಿಯತಮ

ಸಾರಾಂಶ

ವಿವಾಹ ಮಾಡಿಕೊಳ್ಳಲು ನಿರಾಕರಿಸಿದ ಪ್ರಿಯತಮನ ಜೊತೆ ಯುವತಿಗೆ ಆಸ್ಪತ್ರೆ ಐಸಿಯುನಲ್ಲೇ ವಿವಾಹ ಮಾಡಿದ್ದು ಬಳಿಕ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ನಡೆದಿದೆ.

ಪುಣೆ [ಡಿ.06]: ಪ್ರಿಯಕರ ಮದುವೆಗೆ ನಿರಾಕರಿಸಿದ ಹಿನ್ನೆಲೆ ಯುವತಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದರಿಂದ ಪ್ರಿಯಕರನ ಜೊತೆ ಆಸ್ಪತ್ರೆಯಲ್ಲೇ ವಿವಾಹ ಮಾಡಿದ ಘಟನೆ ಪುಣೆಯಲ್ಲಿ ನಡೆದಿದೆ.

ಯುವತಿಯನ್ನು ಪ್ರೀತಿಸಿದ ವ್ಯಕ್ತಿ ಆಕೆಯನ್ನು ವಿವಾಹವಾಗಲು ನಿರಾಕರಿಸಿದ್ದು, ಇದರಿಂದ ಆಕೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಳು.  ಬಳಿಕ ಆತನನ್ನು ಕರೆತಂದು ಆಸ್ಪತ್ರೆಯ ಐಸಿಯುನಲ್ಲೇ ವಿವಾಹ ಮಾಡಲಾಗಿತ್ತು. ಆದರೆ ವಿವಾಹದ ಬಳಿಕ ಆತ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. 

ಹೈದರಾಬಾದ್ ಪೊಲೀಸರನ್ನು ನೋಡಿ ಕಲಿರಿ: ಯುಪಿ ಪೊಲೀಸರಿಗೆ ಮಾಯಾವತಿ ಸಲಹೆ!...

ಇದೀಗ ಆತನ ವಿರುದ್ಧ ಯುವತಿ ದೂರು ನೀಡಿದ್ದು, ದೈಹಿಕ ಸಂಬಂಧ ಹೊಂದುವಂತೆ ಒತ್ತಾಯಿಸಿದ್ದ. ಆದರೆ ಮದುವೆ ಮಾಡಿಕೊಳ್ಳಲು ಕೆಳ ಜಾತಿ ಎಂದು ನಿರಾಕರಿಸಿದ್ದಾಗಿ ದೂರಿನಲ್ಲಿ ತಿಳಿಸಿದ್ದಾಳೆ.

ಈ ಪ್ರಕರಣದ ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿ ಪ್ರಕಾಶ್ ರಾಥೊಡ್ , ಆರೋಪಿ ಸೂರಜ್ ನಲ್ವಾಡೆ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಅಲ್ಲದೇ ತಪ್ಪಿಸಿಕೊಂಡು ಪರಾರಿಯಾಗಿರುವ ಆತನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ನವೆಂಬರ್ 27 ರಂದು ವಿಷ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಯುವತಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಂಡಮಾನ್‌ ದ್ವೀಪದಲ್ಲಿ ಸಾವರ್ಕರ್ ಪ್ರತಿಮೆ ಅನಾವರಣ
ಕಟಿಹಾರ್ ಜಂಕ್ಷನ್‌ನಲ್ಲಿ ಮಹಿಳೆಯ ಭಯಾನಕ ಅನುಭವ: 30-40 ಪುರುಷರು ನುಗ್ಗಲು ಯತ್ನ, ಶೌಚಾಲಯದಲ್ಲಿ ಸಿಲುಕಿದ ಮಹಿಳೆ!