
ನ್ಯೂ ತೆಹ್ರಿ(ಏ.06): ಶಿಕಾರಿಗೆಂದು ಕಾಡಿಗೆ ತೆರಳಿದ ವೇಳೆ ತಮ್ಮ ಸ್ನೇಹಿತ ತಮ್ಮ ಗುಂಡಿಗೆ ಬಲಿಯಾಗಿದ್ದರಿಂದ ನೊಂದ ಇತರೆ ಮೂವರು ಸ್ನೇಹಿತರು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಉತ್ತರಾಖಂಡದ ನ್ಯೂತೆಹ್ರಿ ಜಿಲ್ಲೆಯಲ್ಲಿ ನಡೆದಿದೆ.
ಕುಂದಿ ಗ್ರಾಮದ 7 ಯುವಕರು ಶನಿವಾರ ರಾತ್ರಿ ಬೇಟೆಗೆಂದು ಹತ್ತಿರದ ಅರಣ್ಯಕ್ಕೆ ತೆರಳಿದ್ದರು. ಈ ವೇಳೆ ಗನ್ ಹಿಡಿದು ಹೆಜ್ಜೆ ಹಾಕುತ್ತಿದ್ದ ರಾಜೀವ್(22) ಎಂಬಾತ ಕಾಲು ಜಾರಿ ಬಿದ್ದಿದ್ದು, ಈ ವೇಳೆ ಅಚಾತುರ್ಯವಾಗಿ ಗನ್‌ನ ಟ್ರಿಗರ್ ಅದುಮಿದಿದ್ದಾನೆ. ಈ ವೇಳೆ ಬಂದೂಕಿನಿಂದ ಹೊರ ಚಿಮ್ಮಿದ ಗುಂಡು ಸಂತೋಷ್ ಎಂಬಾತನಿಗೆ ತಾಗಿ ಆತ ಸಾವನ್ನಪ್ಪಿದ್ದಾನೆ. ಈ ವೇಳೆ ಭಯಭೀತನಾದ ರಾಜೀವ್ ಗನ್ ಸಮೇತ ಪರಾರಿಯಾಗಿದ್ದಾನೆ. ಆದರೆ ಘಟನೆಗೆ ತಾವೇ ಕಾರಣ ಎಂದು ನೊಂದ ಇತರೆ ಮೂವರು ಸ್ನೇಹಿತರಾದ ಸೋಬನ್, ಪಂಕಜ್, ಅರ್ಜುನ್ ಗ್ರಾಮಕ್ಕೆ ಮರಳಿದ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಘಟನೆಯ ವಿವರವನ್ನು ರಾಹುಲ್ ಮತ್ತು ಸುಮಿತ್ ಎಂಬುವರಿಂದ ಪಡೆದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ, ವಿಷ ಸೇವಿಸಿದ ಮೂವರನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲು ಯತ್ನಿಸಿದ್ದು, ಅಷ್ಟೊತ್ತಿಗಾಗಲೇ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಈ ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಜಿಲ್ಲಾ ಮ್ಯಾಜಿಸ್ಪ್ರೇಟ್ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ