ಶಬರಿಮಲೆ ಮಂಡಲ ಯಾತ್ರೆಗೆ ವಿಧ್ಯುಕ್ತ ಚಾಲನೆ

Kannadaprabha News   | Kannada Prabha
Published : Nov 18, 2025, 05:24 AM IST
Sabarimala

ಸಾರಾಂಶ

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತವಾಗಿ ಆರಂಭವಾಯಿತು. ಮೊದಲ ದಿನವೇ ಸಾವಿರಾರು ಭಕ್ತರು ದಾಂಗುಡಿ ಇಟ್ಟು ಅಯ್ಯಪ್ಪನ ದರ್ಶನ ಪಡೆದರು.

ಪಟ್ಟಣಂತಿಟ್ಟ : ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತವಾಗಿ ಆರಂಭವಾಯಿತು. ಮೊದಲ ದಿನವೇ ಸಾವಿರಾರು ಭಕ್ತರು ದಾಂಗುಡಿ ಇಟ್ಟು ಅಯ್ಯಪ್ಪನ ದರ್ಶನ ಪಡೆದರು.

ಸೋಮವಾರ ವೃಚಿಕಂ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಅರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾಯಿತು. ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಮಂದಿ ಯಾತ್ರೆ ಕೈಗೊಂಡು ದೇಗುಲಕ್ಕೆ ಭೇಟಿ ನೀಡಲಿದ್ದಾರೆ.

ಅಕ್ರಮ ವಿರುದ್ಧ ಬಿಜೆಪಿ ಅಭಿಯಾನ

ಶಬರಿಮಲೆ ದೇಗುಲದ ಚಿನ್ನಲೇಪಿತ ಬಾಗಿಲು ಮತ್ತು ದ್ವಾರಪಾಲಕ ವಿಗ್ರಹಗಳ ಚಿನ್ನದಲ್ಲಿ ಅಕ್ರಮವೆಸಗಿದ ಪ್ರಕರಣದ ಸಂಬಂಧ ಬಿಜೆಪಿ ಸಹಿ ಅಭಿಯಾನ ಕೈಗೊಂಡಿದೆ. 1 ಕೋಟಿ ಅಯ್ಯಪ್ಪ ಭಕ್ತರಿಂದ ಸಹಿ ಸಂಗ್ರಹಿಸಿ, ಅದನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಿಸಿ, ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕೋರಲು ನಿರ್ಧರಿಸಿದೆ. ಈ ಅಭಿಯಾನಕ್ಕೆ ಕೇರಳ ಬಿಜೆಪಿ ಅಧ್ಯಕ್ಷ ರಾಜೀವ್ ಚಂದ್ರಶೇಖರ್‌ ಈ ತಿಂಗಳ ಆರಂಭದಲ್ಲಿ ಚಾಲನೆ ನೀಡಿದ್ದರು.

ಚಿನ್ನಕ್ಕೆ ಕನ್ನ ಪ್ರಕರಣ: ಶಬರಿಮಲೆ ವಿಗ್ರಹಗಳ ಕವಚ ಕಳಚಿ ಪರೀಕ್ಷೆ

ಪಟ್ಟಣಂತಿಟ್ಟ: ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳ ಚಿನ್ನಕ್ಕೆ ಕನ್ನ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡದ (ಎಸ್‌ಐಟಿ) ಅಧಿಕಾರಿಗಳು ವೈಜ್ಞಾನಿಕ ಪರೀಕ್ಷೆಗಾಗಿ ಕವಚಗಳನ್ನು ಸೋಮವಾರ ಕಳಚಿದ್ದಾರೆ.ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಅಧಿಕಾರಿಗಳ ಸಮ್ಮುಖದಲ್ಲಿ ಸೋಮವಾರ ಮಧ್ಯಾಹ್ನ 1.15ಕ್ಕೆ ಕವಚಗಳನ್ನು ಕಳಚಲಾಯಿತು. 3 ಗಂಟೆವರೆಗೂ ಈ ಕಾರ್ಯ ಮುಂದುವರಿಯಿತು. ಆ ಬಳಿಕ ಅವುಗಳನ್ನು ಮತ್ತೊಂದು ಕೋಣೆಗೆ ಸ್ಥಳಾಂತರಿಸಿ, ತೂಕ ಮಾಡಲಾಯಿತು. ನಂತರ ಅವುಗಳ ಮಾದರಿಯನ್ನು ವಿಧಿವಿಜ್ಞಾನ ಪರೀಕ್ಷೆಗಾಗಿ ಕಳಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಪುಟಿನ್‌ಗೆ ರಷ್ಯನ್ ಭಾಷೆ ಭಗವದ್ಗೀತೆ ಉಡುಗೊರೆ ನೀಡಿದ ಪ್ರಧಾನಿ ಮೋದಿ, ಭಾರಿ ಮೆಚ್ಚುಗೆ