ಮಣಿಪುರದಲ್ಲಿ ಕಾನೂನು ವ್ಯವಸ್ಥೆ ಪೂರ್ಣ ಕುಸಿತ: ಸುಪ್ರೀಂ

Published : Aug 02, 2023, 07:58 AM IST
ಮಣಿಪುರದಲ್ಲಿ ಕಾನೂನು ವ್ಯವಸ್ಥೆ ಪೂರ್ಣ ಕುಸಿತ: ಸುಪ್ರೀಂ

ಸಾರಾಂಶ

ಕಳೆದ 3 ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಣದಲ್ಲಿ ರಾಜ್ಯ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಮತ್ತೆ ಕಿಡಿಕಾರಿರುವ ಸುಪ್ರೀಂಕೋರ್ಟ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾಂವಿಧಾನಿಕ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ತಪರಾಕಿ ಹಾಕಿದೆ.

ನವದೆಹಲಿ: ಕಳೆದ 3 ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಯಂತ್ರಣದಲ್ಲಿ ರಾಜ್ಯ ಪೊಲೀಸರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಮತ್ತೆ ಕಿಡಿಕಾರಿರುವ ಸುಪ್ರೀಂಕೋರ್ಟ್, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾಂವಿಧಾನಿಕ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ತಪರಾಕಿ ಹಾಕಿದೆ. ಜೊತೆಗೆ ಹಿಂಸಾಚಾರದ ಘಟನೆಗಳ ಬಗ್ಗೆ ರಾಜ್ಯ ಪೊಲೀಸರ ತನಿಖೆ ಸಂಪೂರ್ಣ ವಿಳಂಬವಾಗಿದೆ ಮತ್ತು ಆಲಸಿತನದ್ದಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ ಮುಂದಿನ ಸೋಮವಾರ ನಡೆಯಲಿರುವ ವಿಚಾರಣೆ ವೇಳೆ ರಾಜ್ಯದ ಪೊಲೀಸ್‌ ಮಹಾ ನಿರ್ದೇಶಕರು ಖುದ್ದು ಹಾಜರಿರಬೇಕು ಎಂದು ಸೂಚಿಸಿದೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ಸೋಮವಾರದಿಂದ ಆರಂಭಿಸಿರುವ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಅವರನ್ನೊಳಗೊಂಡ ನ್ಯಾಯಪೀಠ ಹಿಂಸಾಚಾರ ಸಂಬಂಧ ಈವರೆಗೆ ಎಷ್ಟುಎಫ್‌ಐಆರ್‌ ದಾಖಲಿಸಲಾಗಿದೆ, ಎಷ್ಟುಜನರನ್ನು ಬಂಧಿಸಲಾಗಿದೆ ಎಂಬ ಮಾಹಿತಿಯನ್ನು ಮಂಗಳವಾರ ಸಲ್ಲಿಸಬೇಕು ಎಂದು ಸೂಚಿಸಿತ್ತು.

ಮಣಿಪುರ ಸಮಸ್ಯೆ ಶೀಘ್ರ ಇತ್ಯರ್ಥವಾಗದಿದ್ದರೆ ದೇಶದ ಭದ್ರತೆಗೆ ಅಪಾಯ: ಇಂಡಿಯಾ ಕಳವಳ

ಮಂಗಳವಾರದ ವಿಚಾರಣೆ ವೇಳೆ ಕೇಂದ್ರ ಸರ್ಕಾರ (central Govt) ಮತ್ತು ಮಣಿಪುರ ಸರ್ಕಾರದ (Manipur Govt) ಪರವಾಗಿ ಹಾಜರಾಗಿದ್ದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ (Tushar Mehta), ಇದುವರೆಗೂ ರಾಜ್ಯದಲ್ಲಿ 6523 ಎಫ್‌ಐಆರ್‌ ದಾಖಲಿಸಲಾಗಿದೆ. ಇಬ್ಬರು ಮಹಿಳೆಯರ ನಗ್ನ ಪರೇಡ್‌ ಪ್ರಕರಣದಲ್ಲಿ ‘ಶೂನ್ಯ ಎಫ್‌ಐಆರ್‌’ ದಾಖಲಿಸಲಾಗಿದೆ. ಓರ್ವ ಅಪ್ರಾಪ್ತ ಸೇರಿದಂತೆ 7 ಜನರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ತನಿಖೆ ಅದೆಷ್ಟು ಆಲಸಿತನದಿಂದ ಕೂಡಿದೆಯೆಂದರೆ, ಘಟನೆ ನಡೆದ ಹಲವು ದಿನಗಳ ಬಳಿಕ ಎಫ್‌ಐಆರ್‌ ದಾಖಲಿಸಲಾಗಿದೆ, ಯಾರನ್ನೂ ಬಂಧಿಸಿಲ್ಲ, ಜೊತೆಗೆ ಹೇಳಿಕೆಗಳನ್ನೂ ದಾಖಲಿಸಿಲ್ಲ. ಇದನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾಂವಿಧಾನಿಕ ಸಂಸ್ಥೆಗಳು ಪೂರ್ಣ ಕುಸಿತಗೊಂಡಂತೆ ಕಾಣುತ್ತದೆ. ರಾಜ್ಯ ಪೊಲೀಸರು ಪೂರ್ಣ ಹಿಡಿತ ಕಳೆದುಕೊಂಡಿದ್ದಾರೆ. ಹೀಗಾಗಿ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿರುವ ಸೋಮವಾರ ಸ್ವತಃ ಡಿಜಿಪಿ ಖುದ್ದು ಹಾಜರಿರಬೇಕು’ ಎಂದು ಸೂಚಿಸಿತು.

ಸುಪ್ರೀಂ ನ್ಯಾ. ಚಂದ್ರಚೂಡ್‌ಗೆ ಗನ್ ಕೊಟ್ಟು ಮಣಿಪುರಕ್ಕೆ ಕಳುಹಿಸಬೇಕು ಎಂದ ರಾಜಕೀಯ ವಿಶ್ಲೇಷಕನ ಬಂಧನ

ಕಳೆದ ಸೋಮವಾರದ ವಿಚಾರಣೆ ವೇಳೆ ‘ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ನಗ್ನವಾಗಿ ಮೆರವಣಿಗೆ ಮಾಡಿದ ಘಟನೆ ಅತ್ಯಂತ ‘ಭಯಾನಕ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ನ್ಯಾಯಪೀಠ, ಹಿಂಸಾಚಾರದ ತನಿಖೆಯನ್ನು ರಾಜ್ಯದ ಪೊಲೀಸರ ಕೈಯಿಂದ ಹಿಂಪಡೆದು ವಿಶೇಷ ತನಿಖಾ ಸಮಿತಿ (ಎಸ್‌ಐಟಿ) ಅಥವಾ ನಿವೃತ್ತ ಜಡ್ಜ್‌ಗಳ ಸಮಿತಿ ನೇಮಕ ಮಾಡುವ ಸುಳಿವು ನೀಡಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು
ಇಂದು ರಾತ್ರಿ 8ರ ಒಳಗೆ ಟಿಕೆಟ್ ಮೊತ್ತ ಮರುಪಾವತಿಸಿ : ಇಂಡಿಗೋಗೆ ಕೇಂದ್ರ ಗಡುವು