
ದೆಹಲಿ (ಏ.7): ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಮಂಗಳವಾರ ಮುಂಜಾನೆ ಮನೆಯೊಂದರ ಮೇಲೆ ನಡೆದ ಬಾಂಬ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ತಾಯಿ ಜೊತೆ ನಿದ್ದೆ ಮಾಡುತ್ತಿದ್ದ 5 ವರ್ಷದ ಬಾಲಕ ಮತ್ತು ಕೇವಲ 6 ತಿಂಗಳ ಹೆಣ್ಣು ಮಗು ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿವೆ. ಮಕ್ಕಳ ತಾಯಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಷ್ಣುಪುರ್ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾವೊಬಿಯಲ್ಲಿ ಈ ಘಟನೆ ನಡೆದಿದೆ. ಇದು ಜನವಸತಿ ಪ್ರದೇಶವಾಗಿದ್ದು, ಗುಡ್ಡಗಾಡು ಪ್ರದೇಶವಾದ ಚುರಾಚಂದ್‌ಪುರ್‌ಗೆ ಹತ್ತಿರದಲ್ಲೇ ಇರುವ ತಗ್ಗು ಪ್ರದೇಶವಾಗಿದೆ.
ಇದನ್ನೂ ಓದಿ: ಮಣಿಪುರ: ಕುಕಿ ಸಮುದಾಯದ ಪ್ರೇಯಸಿ ನೋಡಲು ಬಂದ ಮೈಥಿ ಸಮುದಾಯದ ಯುವಕನ ಕೊಲೆ
ಈ ಪ್ರದೇಶದಲ್ಲಿ ಈ ಹಿಂದೆಯೂ ಇಂತಹ ದಾಳಿಗಳು ನಡೆದಿದ್ದವು. 2023ರಿಂದ ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷದ ಮುಂದುವರಿದ ಭಾಗವೇ ಈ ದಾಳಿ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಘಟನೆಯ ನಂತರ, ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ