ಬೈಲಕುಪ್ಪೆಯ ಬೌದ್ಧ ವಿಹಾರದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ: 100 ಎಕರೆ ಕಾಡಲ್ಲಿ 700 ಸ್ಥಳೀಯ ಮರಗಳ ಸಂರಕ್ಷಣೆ

Published : Apr 27, 2026, 06:12 AM IST
Bylakuppe

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 'ಮನ್‌ ಕೀ ಬಾತ್' ಕಾರ್ಯಕ್ರಮದಲ್ಲಿ, ಕರ್ನಾಟಕದ ಬೈಲಕುಪ್ಪೆ ಬೌದ್ಧವಿಹಾರದ ಪ್ರಕೃತಿ ಸಂರಕ್ಷಣಾ ಕಾರ್ಯವನ್ನು ಶ್ಲಾಘಿಸಿದ್ದಾರೆ. 100 ಎಕರೆ ಕಾಡಿನಲ್ಲಿ 700ಕ್ಕೂ ಹೆಚ್ಚು ಸ್ಥಳೀಯ ಮರಗಳನ್ನು ಸಂರಕ್ಷಿಸಿ, ಪ್ರಕೃತಿಯೊಂದಿಗಿನ ಬೌದ್ಧ ಸಂಪ್ರದಾಯದ ಸಂಬಂಧಕ್ಕೆ ಉತ್ತಮ ಉದಾಹರಣೆಯಾಗಿದೆ.

ನವದೆಹಲಿ: ಮೇ 1ರ ಬೌದ್ಧಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕೊಡಗು ಜಿಲ್ಲೆ ಬೈಲಕುಪ್ಪೆಯ ಬೌದ್ಧ ವಿರಾಮವನ್ನು ಸ್ಮರಿಸಿ, ಪ್ರಕೃತಿ ರಕ್ಷಣೆಗೆ ಅದು ನಡೆಸುತ್ತಿರುವ ಯತ್ನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಮ್ಮ ಮಾಸಿಕ ಮನ್‌ ಕೀ ಬಾತ್‌ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೇನಲ್ಲಿ ನಾವು ಬುದ್ಧ ಪೂರ್ಣಿಮೆ ಆಚರಿಸುತ್ತೇವೆ. ಎಲ್ಲ ದೇಶವಾಸಿಗಳಿಗೆ ನಾನು ಅನಂತ ಶುಭಾಶಯ ಕೋರುತ್ತೇನೆ. ಭಗವಾನ್ ಗೌತಮ ಬುದ್ಧನ ಜೀವನ ಸಂದೇಶವು ಇಂದಿಗೂ ಪ್ರಸ್ತುತ’ ಎಂದು ಹೇಳಿದರು ಹಾಗೂ ಬೌದ್ಧ ಸಂಪ್ರದಾಯವು ಹೇಗೆ ಪ್ರಕೃತಿಯೊಂದಿಗೆ ಸಂಬಂಧ ಹೊಂದಿದೆ ಎಂಬುದನ್ನು ಬೈಲಕುಪ್ಪೆಯ ಬೌದ್ಧ ವಿಹಾರದ ಉದಾಹರಣೆಯೊಂದಿಗೆ ವಿವರಿಸಿದರು.

‘ಬೌದ್ಧ ಸಂಪ್ರದಾಯವು ನಮಗೆ ಪ್ರಕೃತಿಯೊಂದಿಗೆ ಸಂಪರ್ಕ ಹೊಂದುವುದನ್ನು ಕಲಿಸುತ್ತದೆ. ಭಗವಾನ್ ಬುದ್ಧನಿಗೆ ಒಂದು ಮರದ ಕೆಳಗೆ ಜ್ಞಾನೋದಯವಾಯಿತು. ಪ್ರಕೃತಿ ನಮ್ಮ ಜೀವನದ ಅವಿಭಾಜ್ಯ ಅಂಗ. ದೇಶಾದ್ಯಂತ ಇಂತಹ ಯತ್ನ ನಡೆಯುತ್ತಲೇ ಇವೆ. ಕರ್ನಾಟಕದಲ್ಲಿರುವ ಕರ್ಮ ವಿಹಾರವು ಒಂದು ಉತ್ತಮ ಉದಾಹರಣೆ. ಈ ವಿಹಾರವು 100 ಎಕರೆ ವಿಸ್ತಾರವಾದ ರೋಮಾಂಚಕ ಅರಣ್ಯ. ಈ ಕಾಡಿನಲ್ಲಿ 700 ಕ್ಕೂ ಹೆಚ್ಚು ಸ್ಥಳೀಯ ಮರಗಳನ್ನು ಸಂರಕ್ಷಿಸಲಾಗಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live: ಬೈಲಕುಪ್ಪೆಯ ಬೌದ್ಧ ವಿಹಾರದ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ - 100 ಎಕರೆ ಕಾಡಲ್ಲಿ 700 ಸ್ಥಳೀಯ ಮರಗಳ ಸಂರಕ್ಷಣೆ
ರಾಹುಲ್ ಬದಲು ಮೋದಿಗೆ ಮತ ಹಾಕಿದ ಗ್ರೂಕ್ ಎಐ, ಭಾರಿ ಸಂಚಲನ ಸೃಷ್ಟಿಸಿದ ಚಾಟ್‌ಬಾಟ್ ಆಯ್ಕೆ