
ಮುಂಬೈ(ಮಾ.08): ಮುಕೇಶ್ ಅಂಬಾನಿ ನಿವಾಸದ ಮುಂದೆ ಜಿಲೆಟಿನ್ ಕಡ್ಡಿ ಪತ್ತೆಯಾದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಸ್ಫೋಟಕ ಪತ್ತೆಯಾದ ಕಾರಿನ ಮಾಲೀಕ ಮನ್‌ಸುಖ್ ಹಿರೇನ್ ನಿಗೂಢ ಸಾವಿನ ಪ್ರಕರಣ ಸಂಬಂಧ ಪೊಲೀಸರು ಕೊಲೆ ಕೇಸು ದಾಖಲಿಸಿಕೊಂಡಿದ್ದಾರೆ.
ಹಿರೇನ್ ಅವರ ಸಾವನ್ನು ಮೊದಲಿಗೆ ಅಸಹಜ ಸಾವು ಎಂದು ಪರಿಗಣಿಸಿ ತನಿಖೆ ಕೈಗೊಳ್ಳಲಾಗಿತ್ತು. ಆದರೆ ಇದೀಗ ಹಿರೇನ್ ಅವರ ಪತ್ನಿ, ತನ್ನ ಪತಿಯನ್ನು ಕೊಲೆಗೈಯ್ಯಲಾಗಿದೆ ಎಂದು ದೂರು ನೀಡಿದ್ದಾರೆ. ಹೀಗಾಗಿ ಅಪರಿಚಿತರ ವಿರುದ್ಧ ಸಾಕ್ಷ್ಯ ನಾಶದ ಯತ್ನ, ಹತ್ಯೆ, ಕ್ರಿಮಿನಲ್ ಪಿತೂರಿ ಕೇಸ್ಗಳನ್ನು ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ ಈ ಪ್ರಕರಣವನ್ನು ಇದೀಗ ಮುಂಬೈ ಪೊಲೀಸರಿಂದ ಎಟಿಎಸ್(ಭಯೋತ್ಪಾದನಾ ನಿಗ್ರಹ ದಳ)ಗೆ ವರ್ಗಾವಣೆಯಾಗಿದೆ.
ಮತ್ತೊಂದೆಡೆ ಹಿರೇನ್ ಅವರ ಮುಖದ ಎಡಭಾಗ, ಮೂಗು, ಬಲಗಣ್ಣಿನ ಭಾಗದಲ್ಲಿ ಗಾಯದ ಗುರುತುಗಳಾಗಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಹೀಗಾಗಿ ಹಿರೇನ್ ಅವರದ್ದು ಅಸಹಜ ಸಾವು ಅಲ್ಲ. ಬದಲಿಗೆ ಇದೊಂದು ಕೊಲೆ ಇರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ